Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಫೆ.29 ರಿಂದ ಮಾರ್ಚ್ 7 ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ : ಸಿದ್ದರಾಮಯ್ಯ

 

ಬೆಂಗಳೂರು :
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ಫೆಬ್ರವರಿ 29 ರಿಂದ ಮಾರ್ಚ್ 7 ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಏರ್ಪಡಿಸಲು ತೀರ್ಮಾನಿಸಲಾಗಿದೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಜರುಗಿದ ಸಂಘಟನಾ ಸಮಿತಿ ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿಗಳು ಈ ವಿಷಯ ತಿಳಿಸಿದರು.

ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ 15 ನೇ ಆವೃತ್ತಿಯನ್ನು ಫೆಬ್ರವರಿ 29 ರ ಸಂಜೆ ಉದ್ಘಾಟನೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಏರ್ಪಡಿಸಲಾಗಿದೆ ಮುಖ್ಯಮಂತ್ರಿಗಳು ನೆರವೇರಿಸಲಿದ್ದಾರೆ. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ದೇಶವಿದೇಶಗಳಲ್ಲಿ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ವಿದೇಶಿ ಚಿತ್ರಗಳನ್ನು ಪ್ರದರ್ಶೀಸಲಾಗುವುದಲ್ಲದೆ, ಕನ್ನಡ ಸೇರಿದಂತೆ ದೇಶದ ವಿವಿಧ ಭಾಷಾ ಚಿತ್ರಗಳನ್ನು ಪ್ರದರ್ಶಿಸಲಾಗುವುದು. ಮಾರ್ಚ್ 7 ರಂದು ಸಮಾರೋಪ ಸಮಾರಂಭ ನಡೆಯಲಿದ್ದು ಅಂದು ರಾಜ್ಯಪಾಲರು ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ. ಸಂಘಟನಾ ಸಮಿತಿ ಸಭೆಯ ಜೊತೆಗೆ ಕೋರ್ ಸಮಿತಿಯೂ ರಚನೆಯಾಗಿದ್ದು, ಸಮಾರಂಭ ಯಾವ ರೀತಿ ಏರ್ಪಡಿಸಬೇಕೆಂದು ತೀರ್ಮಾನವಾಗುತ್ತದೆ. ಕೋಮುವಾದದ, ಶಾಂತಿ, ಸಮಾನತೆ, ಲಿಂಗ ಸಮಾನತೆ, ಸೌಹಾರ್ದತೆ, ಮಾನವೀಯತೆಯ ಸಂದೇಶಗಳು ಸಮಾಜಕ್ಕೆ ತಲುಪಬೇಕು. ಬಹುತ್ವಕ್ಕೆ ಹೆಚ್ಚು ಒತ್ತು ಕೊಡುವ ರೀತಿಯಲ್ಲಿ ಚಲನಚಿತ್ರೋತ್ಸವ ನಡೆಯಲಿದೆ. ಹೆಚ್ಚು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಅಗತ್ಯವಿರುವ ಆರ್ಥಿಕ ನೆರವನ್ನು ಸರ್ಕಾರ ಒದಗಿಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಹಿಂದೆ ವಿಧಾನಸೌಧದ ಮುಂಭಾಗದಲ್ಲಿಯೇ ಅಂತರರಾಷ್ಟ್ರಿಯ ಚಲನಚಿತ್ರೋತ್ಸವದ ಉದ್ಘಾಟನೆಯಾಗುತ್ತಿತ್ತು. ದೇಶವಿದೇಶದ ಸಿನಿರಂಗದ ಪ್ರಖ್ಯಾತ ಕಲಾವಿದರನ್ನು ಕರೆಸಲಾಗುತ್ತಿದೆ. ಈ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದ್ದು, ಅಂತರರಾಷ್ಟ್ರಿಯ ಚಲನಚಿತ್ರೋತ್ಸವವನ್ನು ಯ ಶಸ್ವಿಯಾಗಲಿದೆ ಎಂಬ ವಿಶ್ವಾಸವಿದೆ ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ