Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಸವಾದಿ ಶರಣರ ಆಶಯದ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಸಾಧ್ಯ: ಸಿದ್ದರಾಮಯ್ಯ

 

ಕೂಡಲ ಸಂಗಮ :
ಬಸವಾದಿ ಶರಣರ ಆಶಯದ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಸಾಧ್ಯ. ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದರು.

ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಕೂಡಲ ಸಂಗಮದಲ್ಲಿ ಆಯೋಜಿಸಿದ್ದ 37 ನೇ ಶರಣ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ಬಸವಾದಿ ಶರಣರು 12 ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದರು. ನಮ್ಮ ಚಲನೆ ರಹಿತ ಜಾತಿ ವ್ಯವಸ್ಥೆಯ ಸಾಮಾಜಿಕ ವ್ಯವಸ್ಥೆಯನ್ನು ಪಟ್ಟಭದ್ರ ಹಿತಾಸಕ್ತಿಗಳು ರೂಪಿಸಿದರು. ಇದನ್ನು ಮಾಡಿದ್ದು ದೇವರಲ್ಲ ಎಂದು ನುಡಿದರು.

ಬಹು ಸಂಖ್ಯಾತರನ್ನು ಶಿಕ್ಷಣದಿಂದ ದೂರ ಇಡಲು ಅಸಮಾನತೆಯಿಂದ ಕೂಡಿದ ಚಾತುವರ್ಣ ವ್ಯವಸ್ಥೆಯನ್ನು ಮಾಡಿದರು. ಬಸವಾದಿ ಶರಣರ ವಚನ ಚಳವಳಿ ತಾರತಮ್ಯದಿಂದ ಕೂಡಿದ ಕರ್ಮ ಸಿದ್ಧಾಂತವನ್ನು, ಮೌಡ್ಯವನ್ನು ತೊಡೆದು ಹಾಕಿತು. ಹಣೆ ಬರಹ ಮತ್ತು ಕರ್ಮ ಸಿದ್ಧಾಂತವನ್ನು, ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದನ್ನು ಬಸವಣ್ಣನವರು ಸಂಪೂರ್ಣ ತಿರಸ್ಕರಿಸಿದರು.

ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಬಸವಾದಿ ಶರಣರು ಪ್ರತಿಪಾದಿಸಿದರು. ಧರ್ಮ ತಾರತಮ್ಯ ಮಾಡಬೇಡಿ, ಮನುಷ್ಯ ಮನುಷ್ಯನನ್ನು ದ್ವೇಷಿಸುವುದನ್ನು ಬಸವಾದಿ ಶರಣರು ವಿರೋಧಿಸಿದ್ದರು. ಈ ಕಾರಣಕ್ಕೇ ಇವ ನಮ್ಮವ, ಇವ ನಮ್ಮವ ಎನ್ನುವ ಉದಾತ್ತವಾದ ಮೌಲ್ಯವನ್ನು 800 ವರ್ಷಗಳ ಹಿಂದೆಯೇ ಹೇಳಿದರು. ಹೀಗಾಗಿ ಜಾತಿ ವ್ಯವಸ್ಥೆಯನ್ನು ಶರಣರೇ ಹೋಗಲಾಡಿಸಬೇಕು ಎಂದರು.

ಜಾತಿ ಕಾರಣಕ್ಕೆ ಹಿಂದುಳಿದಿರುವ ಸಮುದಾಯಗಳಿಗೆ ಆರ್ಥಿಕ ಶಕ್ತಿ ನೀಡಬೇಕು. ಜಾತಿ, ವರ್ಗ, ಅಂತಸ್ತನ್ನು ಸೋಕಿಸಿಕೊಳ್ಳದೆ ಇರುವವರು ಮಾತ್ರ ನಿಜ ಶರಣರು ಎಂದು ಬಣ್ಣಿಸಿದರು.

ಪಟ್ಟಭದ್ರ ಹಿತಾಸಕ್ತರು ಇರುವುದು ಬಹಳ ಕಡಿಮೆ ಜನ. ಆದರೆ ಇವರು ಸ್ಟ್ರಾಂಗ್ ಇದ್ದಾರೆ. ಆದರೆ, ಶೋಷಣೆಗೆ, ದೌರ್ಜನ್ಯಕ್ಕೆ ಒಳಗಾದವರು ಬಹುಸಂಖ್ಯಾತರು. ಇವರು ಒಗ್ಗಟ್ಟಾಗಬೇಕು ಎಂದರು.

ಬಸವಧರ್ಮ ಪೀಠದ ಪೀಠಾಧ್ಯಕ್ಷೆ ಡಾ.ಮಾತೆಗಂಗಾದೇವಿ, ಪೀಠದ ಉಪಾಧ್ಯಕ್ಷ ಮಹದೇಶ್ವರ ಸ್ವಾಮೀಜಿ, ಕುಂಬಳಗೋಡಿನ ವಿಶ್ವಕಲ್ಯಾಣ ಮಿಷನ್ ನ ಬಸವಯೋಗಿ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹುನಗುಂದ ಶಾಸಕರಾದ ಶರಣ ವಿಜಯಾನಂದ ಕಾಶಪ್ಪನವರ್ ವಹಿಸಿದ್ದರು.

ಸಚಿವರಾದ ಬೈರತಿ ಸುರೇಶ್, ತಿಮ್ಮಾಪುರ ಅವರ ಜತೆಗೆ ಶಾಸಕರಾದ ಎಂ.ನರೇಂದ್ರ ಸ್ವಾಮಿ, ಎಚ್.ವೈ.ಮೇಟಿ, ರಾಘವೇಂದ್ರ ಹಿಟ್ನಾಳ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ