Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಾರಾಮತಿಯಲ್ಲಿ ಪವಾರ್ ಕುಟುಂಬದ ನಡುವೆ ಕದನ ; ಸುನೇತ್ರಾ ಪವಾರ್ V/S ಸುಪ್ರಿಯಾ ಸುಳೆ

ಮುಂಬೈ : ನೆರೆಯ ಮಹಾರಾಷ್ಟ್ರದಲ್ಲಿ ಈ ಬಾರಿ ಲೋಕಸಭಾ ಚುನಾವಣೆ ಸಲ ರಂಗು ಪಡೆದುಕೊಂಡಿದೆ. ಹಿರಿಯ ನಾಯಕ ಶರದ ಪವಾರ್ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಕುಟುಂಬದ ನಡುವೆ ನೇರ ಸ್ಪರ್ಧೆಗೆ ವೇದಿಕೆ ಒದಗಿಸಿದ್ದು ಇದೀಗ ಇಬ್ಬರು ಮಹಿಳೆಯರ ಸ್ಪರ್ಧೆ ದೇಶದ ಗಮನ ಸೆಳೆದಿದೆ.

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಶನಿವಾರ ಅಜಿತ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ಬಾರಾಮತಿ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.

ಸುನೇತ್ರಾ ಪವಾರ್ ಅವರು ಅಜಿತ ಪವಾರ್ ಅವರ ಚಿಕ್ಕಪ್ಪ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ವಿರುದ್ಧ ಸೆಣಸಲಿದ್ದಾರೆ.
ಹಿಂದಿನ ದಿನ, ಎನ್‌ಸಿಪಿ (ಶರದ್ ಪವಾರ್) 2024 ರ ಲೋಕಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿತು. ಹಾಲಿ ಸಂಸದೆ ಸುಪ್ರಿಯಾ ಸುಳೆ ಅವರನ್ನು ಬಾರಾಮತಿ ಕ್ಷೇತ್ರದಿಂದ ಕಣಕ್ಕಿಳಿಸಿತು. ಪಕ್ಷವು ವಾರ್ಧಾ, ದಿಂಡೋರಿ, ಬಾರಾಮತಿ, ಶಿರೂರು ಮತ್ತು ಅಹಮದ್‌ನಗರ ಎಂಬ ಐದು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

55 ವರ್ಷಗಳಿಂದ ಬಾರಾಮತಿ ಲೋಕಸಭಾ ಕ್ಷೇತ್ರವು ಪವಾರ್ ಕುಟುಂಬದ ಭದ್ರಕೋಟೆಯಾಗಿದೆ. ಶರದ್ ಪವಾರ್ ಅವರು 1967 ರಲ್ಲಿ ಬಾರಾಮತಿಯಿಂದ ಮೊದಲ ಬಾರಿಗೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದರು. ಅವರು 1972, 1978, 1980, 1985 ಮತ್ತು 1990 ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ನಂತರ, ಸುಪ್ರಿಯಾ ಸುಳೆ ಅವರು 2009 ರಿಂದ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಅಜಿತ್ ಪವಾರ್ 1991 ರಿಂದ ಬಾರಾಮತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗುತ್ತ ಬಂದಿದ್ದಾರೆ. 2019 ರ ಚುನಾವಣೆಯಲ್ಲಿ ಅವರು ಚಲಾವಣೆಯಾದ 83 ಶೇಕಡಾ ಮತಗಳನ್ನು ಗಳಿಸುವ ಮೂಲಕ ಅದ್ಭುತ ವಿಜಯವನ್ನು ದಾಖಲಿಸಿದ್ದರು.

ಕುಟುಂಬದಲ್ಲಿ ಭಿನ್ನಾಭಿಪ್ರಾಯ
ಶರದ್ ಪವಾರ್ ಮತ್ತು ಅವರ ಅಣ್ಣನ ಮಗ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯೊಳಗೆ ಎರಡು ಬಣಗಳ ಹೊರಹೊಮ್ಮುವಿಕೆಯು ನಾಟಕೀಯ ಚುನಾವಣಾ ಹಣಾಹಣಿಗೆ ವೇದಿಕೆಯನ್ನು ಸಿದ್ಧಪಡಿಸಿದೆ. ಎನ್‌ಸಿಪಿಯ ಸಂಸ್ಥಾಪಕ ಬಣವು 54 ವರ್ಷದ ಶರದ್‌ ಪವಾರ್‌ ಪುತ್ರಿ ಸುಪ್ರಿಯಾ ಸುಳೆ ಅವರನ್ನು ಕಣಕ್ಕಿಳಿಸಿದೆ. ಸುಪ್ರಿಯಾ ಸುಳೆ ವಿರುದ್ಧ ಅವರ ಅಣ್ಣನ ಅಜಿತ್‌ ಪವಾರ್‌ ಅವರ ಪತ್ನಿ ಸುನೇತ್ರಾ ಪವಾರ್ (60) ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ.
ಕಳೆದ ವರ್ಷ ಜುಲೈ 2 ರಂದು, ಎಂಟು ಎನ್‌ಸಿಪಿ ಶಾಸಕರೊಂದಿಗೆ ಅಜಿತ್ ಪವಾರ್ ಅವರು ಏಕನಾಥ ಶಿಂಧೆ ಸರ್ಕಾರದಲ್ಲಿ ಸೇರಿದರು. ಇದು ಎನ್‌ಸಿಪಿ ಪಕ್ಷದಲ್ಲಿ ಒಡಕಿಗೆ ಕಾರಣವಾಯಿತು. ಎನ್‌ಸಿಪಿಯೊಳಗಿನ ವಿಭಜನೆಯು ಮತದಾರರು ಮತ್ತು ಪಕ್ಷದ ಕಾರ್ಯಕರ್ತರನ್ನು ಇಬ್ಬರು ಪವಾರ್‌ಗಳ ನಡುವೆ ಆಯ್ಕೆ ಮಾಡುವಂತೆ ಮಾಡಿದೆ.

ಬಾರಾಮತಿ ಲೋಕಸಭಾ ಕ್ಷೇತ್ರವು ಬಾರಾಮತಿ ಪಟ್ಟಣ, ಇಂದಾಪುರ, ದೌಂಡ್, ಪುರಂದರ, ಭೋರ್ ಮತ್ತು ಖಡಕ್ವಾಸ್ಲಾ ಎಂಬ ಆರು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.
ಇದರಲ್ಲಿ, ಕಾಂಗ್ರೆಸ್ ಭೋರ್ ಮತ್ತು ಪುರಂದರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಿಡಿತ ಹೊಂದಿದೆ, ಆದರೆ ಬಾರಾಮತಿ ಮತ್ತು ಇಂದಪುರ ಐತಿಹಾಸಿಕವಾಗಿ ಎನ್‌ಸಿಪಿಗೆ (ಅದರ ವಿಭಜನೆಯ ಮೊದಲು) ಒಲವು ತೋರಿವೆ. ದೌಂಡ್ ಮತ್ತು ಖಡಕವಾಸಲದಲ್ಲಿ ಬಿಜೆಪಿ ಪ್ರಭಾವ ಹೊಂದಿದೆ.
2019 ರ ಚುನಾವಣೆಯಲ್ಲಿ, ಸುಪ್ರಿಯಾ ಸುಳೆ ಅವರು ಎನ್‌ಸಿಪಿ ಬ್ಯಾನರ್ ಅಡಿಯಲ್ಲಿ ಬಾರಾಮತಿ ಕ್ಷೇತ್ರದಲ್ಲಿ ಸತತ ಮೂರನೇ ಗೆಲುವು ಸಾಧಿಸಿದ್ದಾರೆ.
ಎನ್‌ಸಿಪಿ (ಶರದ್ ಪವಾರ್), ಶಿವಸೇನೆ (ಯುಬಿಟಿ) ಮತ್ತು ಕಾಂಗ್ರೆಸ್ ಅನ್ನು ಒಳಗೊಂಡಿರುವ ವಿಪಕ್ಷ ಮೈತ್ರಿಕೂಟದ ಮಹಾ ವಿಕಾಸ್ ಅಘಾಡಿ, ಒಟ್ಟು 48 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 10 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ