ಬೆಳಗಾವಿ: ನಗರದ ಕೆಎಲ್ಇ ಶತಮಾನೋತ್ಸವ ಸಭಾಂಗಣದಲ್ಲಿ ನ. 28 ಹಾಗೂ 29ರಂದು ರಾಷ್ಟ್ರೀಯ ವೈದ್ಯಕೀಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಕಾಹೇರ್ ಕುಲಪತಿ ಡಾ.ಸಂದೀಪ ಶ್ರೀವಾಸ್ತವ ಹೇಳಿದರು.
29ರಂದು ಬೆಳಿಗ್ಗೆ 10ಕ್ಕೆ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ಡಾ.ಭಾಸ್ಕರ್ ಪಾಲ್ ಕೆಎಲ್ಇ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಭಾಗವಹಿಸುವರು ಎಂದರು.
ಭಾರತೀಯ ಪ್ರಸೂತಿ ಮತ್ತು ಸ್ತ್ರೀರೋಗ ಅಧ್ಯಯನ ಸಂಘಗಳ ಒಕ್ಕೂಟ, ಬೆಳಗಾವಿ ಪ್ರಸೂತಿ ಮತ್ತು ಸ್ತ್ರೀರೋಗ ಅಧ್ಯಯನ ಸಂಘ ಹಾಗೂ ಜೆಎನ್ಎಂಸಿಯ ಪ್ರಸೂತಿ ಹಾಗೂ ಸ್ತ್ರೀರೋಗ ವಿಭಾಗದಲ್ಲಿ ಈ ಸಮ್ಮೇಳನ ಆಯೋಜಿಸಲಾಗಿದೆ ಎಂದು ವಿವರಿಸಿದರು.