Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಗಣೇಶೋತ್ಸವ; ಶೀಘ್ರ ಅನುಮತಿಗೆ 12 ಕಡೆ ಏಕಗವಾಕ್ಷಿ ವ್ಯವಸ್ಥೆ: ಜಿಲ್ಲಾಧಿಕಾರಿ

ಬೆಳಗಾವಿ : ಗಣೇಶೋತ್ಸವ ಮಂಡಳಿಗಳಿಗೆ ಸುಲಭವಾಗಿ ಹಾಗೂ ಶೀಘ್ರವಾಗಿ ಒಂದೇ ಕಡೆ ಅನುಮತಿ ನೀಡಲು ಅನುಕೂಲವಾಗುವಂತೆ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ 12 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಆಯಾ ಪೊಲೀಸ್ ಠಾಣೆಗಳಲ್ಲಿಯೇ ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ(ಆ.31) ಜರುಗಿದ ಗಣೇಶ ಉತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹೆಸ್ಕಾಂ, ಪೊಲೀಸ್, ಮಹಾನಗರ ಪಾಲಿಕೆ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಆಯಾ ಪೊಲೀಸ್ ಠಾಣೆಯ ಏಕಗವಾಕ್ಷಿ ಕೇಂದ್ರದಲ್ಲಿ ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಉಪಸ್ಥಿತರಿದ್ದು, ಅಗತ್ಯ ಅನುಮತಿಯನ್ನು ನೀಡಲಿದ್ದಾರೆ ಎಂದು ಹೇಳಿದರು.

ಈ ಕುರಿತು ಏಕಗವಾಕ್ಷಿ ತಂಡಗಳಿಗಾಗಿ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗದಂತೆ ಗಣೇಶ ಮಂಟಪಗಳನ್ನು ನಿರ್ಮಿಸಬೇಕು.
ಸಾರ್ವಜನಿಕರ ಸಂಚಾರಕ್ಕೆ, ಮಹಾನಗರ ಪಾಲಿಕೆಯ ಕಸ ವಿಲೇವಾರಿ ಹಾಗೂ ಅಂಬ್ಯುಲೆನ್ಸ್ ಸಂಚಾರಕ್ಕೆ ತೊಂದರೆಯಾಗದಂತೆ ಮಂಟಪದ ಅಳತೆಯು ಮಿತಿಯೊಳಗೆ ಇರುವಂತೆ ನಿಗಾವಹಿಸಬೇಕು.

ಗಣೇಶ ಮೂರ್ತಿಗಳ ಆಗಮನ ಹಾಗೂ ವಿಸರ್ಜನೆ ಸಂದರ್ಭದಲ್ಲಿ ರಸ್ತೆಯಲ್ಲಿನ ವಿದ್ಯುತ್ ಹಾಗೂ ವಿವಿಧ ದೂರ ಸಂಪರ್ಕ ಕೇಬಲ್ ಗಳನ್ನು ಎತ್ತರಿಸಲು ಸೂಚಿಸಿದ ಅವರು, ಅರಣ್ಯ ಇಲಾಖೆ ವತಿಯಿಂದ ರೆಂಬೆಗಳನ್ನು ಕತ್ತರಿಸಲು‌‌ ಕ್ರಮ‌ವಹಿಸಬೇಕು.

ಹೆಸ್ಕಾಂ, ಪೋಲಿಸ್, ಪಾಲಿಕೆ, ಅರಣ್ಯ, ಅಗ್ನಿಶಾಮಕ, ಬಿ.ಎಸ್.ಎನ್.ಎಲ್ ಹಾಗೂ ಇತರೆ ಇಲಾಖೆ ಅಧಿಕಾರಿಗ‌ಳು ಮೆರವಣಿಗೆ ಮಾರ್ಗದಲ್ಲಿ ಜಂಟಿಯಾಗಿ ಸಮೀಕ್ಷೆ‌ ಜರುಗಿಸಿ ನಿಖರವಾದ ವರದಿಯನ್ನು ಒದಗಿಸಲು ಸೂಚಿಸಿದರು.

ಪಾಲಿಕೆ ವತಿಯಿಂದ ಗಣೇಶ‌ ಆಗಮನ ಹಾಗೂ ವಿಸರ್ಜನೆ ಮಾರ್ಗದಲ್ಲಿನ ರಸ್ತೆ ದುರಸ್ತಿಗೆ ಕ್ರಮ ವಹಿಸಬೇಕು. ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಲು ಕೂಡಲೆ ಕ್ರಮ ವಹಿಸಿ, ಕತ್ತಲೆ ಹೆಚ್ಚಿರುವ‌ ಪ್ರದೇಶಗಳಲ್ಲಿ ಬೆಳಕಿನ ವ್ಯವಸ್ಥೆ‌, ಕಣ್ಗಾವಳು ಸ್ಥಾವರ ಹಾಗೂ ಸಾರ್ವಜನಿಕರ ಗ್ಯಾಲರಿ ನಿರ್ಮಾಣಕ್ಕೆ ಸೂಕ್ತ ವ್ಯವಸ್ಥೆ ಮಾಡಲು ಸೂಚಿಸಿದರು.

ನಗರದಲ್ಲಿ ಬಂಟ್ಟಿಂಗ್, ಬ್ಯಾನರ್ ಅಳವಡಿಕೆ ಕುರಿತು ನೀಡಲಾಗುವ ಅನುಮತಿಗಳ ವಿವರಗಳನ್ನು ಪೋಲಿಸ್ ಇಲಾಖೆಗೆ‌ ನೀಡಲು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಪಿ.ಓ.ಪಿ ಗಣೇಶ ಮೂರ್ತಿಗಳ‌ ಬಳಸದಂತೆ ಪಾಲಿಕೆಯ ವಾಹನಗಳಲ್ಲಿ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ‌ಮೊಹಮ್ಮದ್ ರೋಷನ್ ಅವರು ತಿಳಿಸಿದರು.

ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಮಾತನಾಡಿ, ಪೋಲಿಸ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು. ಪೋಲಿಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳು ಜಂಟಿಯಾಗಿ ನಗರದಲ್ಲಿ ಸಂಚರಿಸಿ ಗಣೇಶ‌ ಪ್ರತಿಷ್ಠಾನ ಮಂಟಪಗಳ ಹಾಗೂ ಮೆರವಣಿಗೆಯ ಸ್ಥಳಗಳ ಕುರಿತು ಸಮೀಕ್ಷೆ ನಡೆಸಲು ಸೂಚಿಸಿದರು.

‌ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಡಿ.ಸಿ.ಪಿ. ರೋಹನ ಜಗದೀಶ, ಎಸಿಪಿ ಶ್ರೀಕಾಂತ ಕಟ್ಟಿಮನಿ, ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ ನಾಯಕ ಸೇರಿದಂತೆ ಹೆಸ್ಕಾಂ, ಪೊಲೀಸ್, ಅರಣ್ಯ, ಅಗ್ನಿಶಾಕಮ ದಳ, ಆರೋಗ್ಯ, ಕಂದಾಯ, ಬಿಎಸ್ ಎನ್ ಎಲ್, ಮಹಾನಗರ ಪಾಲಕೆ, ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.



ಕಪಿಲೇಶ್ವರ ಹೊಂಡಕ್ಕೆ ಜಿಲ್ಲಾಧಿಕಾರಿ‌ ಭೇಟಿ:

ಸಭೆಯ ಬಳಿಕ‌ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ನಗರದ ಕಪಿಲೇಶ್ವರ ಹೊಂಡಕ್ಕೆ ಭೇಟಿ ನೀಡಿ, ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಸಿದ್ಧತೆಗಳನ್ನು ಪರಿಶೀಲಿಸಿದರು.
ಪ್ರತಿವರ್ಷದಂತೆ ಸ್ವಚ್ಛತೆ, ಬೆಳಕಿನ ವ್ಯವಸ್ಥೆ, ಭದ್ರತೆ ಮತ್ತಿತರ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ನಿರ್ದೇಶನ ನೀಡಿದರು.

ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಡಿ.ಸಿ.ಪಿ. ರೋಹನ ಜಗದೀಶ, ಎಸಿಪಿ ಶ್ರೀಕಾಂತ ಕಟ್ಟಿಮನಿ ಮತ್ತಿತರರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ