Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ, ಇದಕ್ಕೆ ಉತ್ತಮ ಭವಿಷ್ಯವಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: "ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ, ಇದಕ್ಕೆ ಉತ್ತಮ ಭವಿಷ್ಯವಿದೆ. ಇದರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಳಗಾವಿಯ ಅಶೋಕ ವೃತ್ತದಲ್ಲಿ ಬುಧವಾರ ಬೆಳಿಗ್ಗೆ ಸ್ವಚ್ಛತಾ ಓಟಕ್ಕೆ ಚಾಲನೆ ನೀಡಿ, ಮಾತಾಡಿದರು.

"ನಮ್ಮೆಲ್ಲರಿಗೂ ದೊಡ್ಡ ಜವಾಬ್ದಾರಿ ಇದೆ. ನಮಗೆ ಎಲ್ಲಾ ಧರ್ಮ, ಜಾತಿ ಒಂದೇ. ನಮಗೆ ಎಲ್ಲದರ ಮೇಲೂ ನಂಬಿಕೆ ಇದೆ. ನಾವೆಲ್ಲರೂ ನಮಗೆ ಸಿಕ್ಕ ಅವಕಾಶದಲ್ಲಿ ಪರಿಸರ ಕಾಪಾಡಲು ನಮ್ಮ ಸರ್ಕಾರದ ಯೋಜನೆಯಲ್ಲಿ ಅನುದಾನ ನೀಡಲಾಗಿದೆ. ಬೈರತಿ ಸುರೇಶ್ ಅವರು ನಗರಾಭಿವೃದ್ಧಿ ಸಚಿವರಾದ ಬಳಿಕ ಸುಮಾರು 200 ಕೋಟಿ ರೂ. ಗಳಷ್ಟು ಅನುದಾನವನ್ನು ಅನೇಕ ಯೋಜನೆಗಳ ಮೂಲಕ ಈ ನಗರಕ್ಕೆ ನೀಡಿದ್ದಾರೆ" ಎಂದು ಹೇಳಿದರು.

"ಮುಂದೆ ನಮ್ಮ ಸರ್ಕಾರ ಈ ಪ್ರದೇಶದ ಅಭಿವೃದ್ಧಿ ಮಾಡಿ, ಉದ್ಯೋಗ ನೀಡಲು ಅಗತ್ಯ ಕ್ರಮ ಕೈಗೊಳ್ಳಲಿದೆ. ನಾವು ನೀವು ಜೊತೆಯಾಗಿ ಕೈ ಜೋಡಿಸಿ ಹೆಜ್ಜೆ ಹಾಕೋಣ" ಎಂದು ಕರೆ ನೀಡಿದರು.

"ನೂರು ವರ್ಷಗಳ ಹಿಂದೆ ಮಹಾತ್ಮ ಗಾಂಧೀಜಿ ಅವರು ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿದ್ದರು. ಅದರ ಶತಮಾನೋತ್ಸವ ಹಿನ್ನೆಲೆಯಲ್ಲಿ ಕಳೆದ ವರ್ಷ ನಾವು ಬೆಳಗಾವಿಗೆ ಬಂದು ಗಾಂಧಿ ಭಾರತ ಎಂಬ ಕಾರ್ಯಕ್ರಮ ಮಾಡಿದೆವು. ಸ್ವಚ್ಛತೆ ಹಾಗೂ ಪರಿಸರ ಕಾಪಾಡುವುದು ಅವರ ಉದ್ದೇಶವಾಗಿತ್ತು" ಎಂದರು.

"ನಾನು ಚಿಕ್ಕ ವಯಸ್ಸಿನಲ್ಲಿ ಕ್ರಾಸ್ ಕಂಟ್ರಿ ಓಡುತ್ತಿದ್ದೆ. ಈಗ ವಯಸ್ಸಾಗಿದೆ. ಆದರೆ ನನ್ನ ಮನಸ್ಸು ನಿಮ್ಮಷ್ಟೇ ತಾರುಣ್ಯವಾಗಿದೆ. ನನ್ನ ಕೈಲಾದಷ್ಟು ನಡೆಯುತ್ತೇನೆ. ನಿಮಗೆ ಒಳ್ಳೆಯದಾಗಲಿ" ಎಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಂಗ್ಲಾದೇಶದ ಹೆಸರಲ್ಲಿ ವಿದೇಶಿ ಅಡಕೆ ಅಕ್ರಮ ಆಮದು ಪತ್ತೆ ; ₹2500 ಕೋಟಿ ನಷ್ಟದ ಶಂಕೆ : ನಮ್ಮ ಬೆಳೆಗಾರರ ಮೇಲೆ ಪರಿಣಾಮ ಏನು..?ಅಮೆರಿಕ ಸೈನಿಕನನ್ನು ಕೊಂದ್ರೆ ಅಥವಾ ಸೆರೆ ಹಿಡಿದ್ರೆ 30 ಸಾವಿರ ಡಾಲರ್ ಬಹುಮಾನ : ಮಹಿಳೆಯರಿಗೆ ದುಪ್ಪಟ್ಟು ಹಣ; ಇರಾನ್‌ ಘೋಷಣೆನಾಲ್ಸಾರ್‌ ನಂತರ ಬೆಂಗಳೂರಿನ ಪ್ರತಿಷ್ಠಿತ ಕಾನೂನು ಕಾಲೇಜಿನಿಂದಲೂ ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಕ್ಕೆ ವಿರೋಧದೇವಸ್ಥಾನದಲ್ಲಿ ಕಾಲ್ತುಳಿತ : 7 ಮಂದಿ ಸಾವು, ಹಲವರಿಗೆ ಗಾಯವಂದೇ ಮಾತರಂಗೆ ಅಪಮಾನ ಆರೋಪ ; ಸೋನಿಯಾ ಗಾಂಧಿ ವಿರುದ್ಧ ದೂರುಒಳಚರಂಡಿ ಕಾಮಗಾರಿ ವೇಳೆ 18 ವರ್ಷದ ಕಾರ್ಮಿಕನಿಗೆ ಸಿಕ್ಕಿತು 98 ಕೋಟಿ ರೂ. ಮೌಲ್ಯದ ನಿಧಿ….!ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನಕನ್ನಡ ಸಾಹಿತ್ಯ ಕಣಜವನ್ನು ಶ್ರೀಮಂತಗೊಳಿಸಿದವರು ಡಾ. ಸರಜೂ ಕಾಟ್ಕರ್ : ಡಾ. ಬಸವರಾಜ ಜಗಜಂಪಿಮೇಕೆ ಬೇಟೆಗೆ ಮಾಂಸದ ಅಂಗಡಿಗೆ ನುಗ್ಗಿದ ಹೆಬ್ಬಾವು; ಕುತ್ತಿಗೆಗೆ ಸುತ್ತಿಕೊಂಡು ಆಟವಾಡಿದ ಕುಡುಕ!