Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಗ್ರಾಮೀಣ: 2 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗಳಿಗೆ ಚಾಲನೆ

 

ಬೆಳಗಾವಿ:

ನಗರದಿಂದ ಬೆಳಗುಂದಿ ಗ್ರಾಮದವರೆಗಿನ ಸುಸಜ್ಜಿತ ರಸ್ತೆಯ ನಿರ್ಮಾಣಕ್ಕಾಗಿ ಲೋಕೋಪಯೋಗಿ ಇಲಾಖೆಯ ವತಿಯಿಂದ 2 ಕೋಟಿ ರೂ.ಗಳನ್ನು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಮಂಜೂರು ಮಾಡಿಸಿದ್ದು, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ ಹಾಗೂ ಆಯಾ ಗ್ರಾಮಗಳ ಪ್ರತಿನಿಧಿಗಳು ಸೇರಿ ರಸ್ತೆಯ ಡಾಂಬರೀಕರಣದ ಕಾಮಗಾರಿಗಳಿಗೆ ಶನಿವಾರ ಭೂಮಿ ಪೂಜೆ ಕೈಗೊಂಡು ಅಧಿಕೃತ ಚಾಲನೆ ನೀಡಿದರು.

ಈ ರಸ್ತೆಯ ನಿರ್ಮಾಣದಿಂದ ಬೆನಕನಹಳ್ಳಿ, ರಾಕಸಕೊಪ್ಪ, ಬೆಳಗುಂದಿ ಮುಂತಾದ ಗ್ರಾಮಗಳಿಗೆ ಸಂಪರ್ಕ ಕಲ್ಪಿಸಲು ಸಹಕಾರಿಯಾಗಲಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಚನ್ನರಾಜ ಹಟ್ಟಿಹೊಳಿ, ಕ್ಷೇತ್ರದ ಅಭಿವೃದ್ಧಿ ನಿಟ್ಟಿನಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಮೂಲಸೌಕರ್ಯಗಳಿಗೆ ಆದ್ಯತೆ ನೀಡಿದ್ದು ರಸ್ತೆಗಳ ಕಾಮಗಾರಿಯನ್ನು ಗುಣಮಟ್ಟದಲ್ಲಿ ನಿರ್ವಹಿಸಿ ಜನರಿಗೆ ಸುದೀರ್ಘ ಕಾಲ ಯಾವುದೇ ಅಡಚಣೆಗಳಿಲ್ಲದಂತೆ ಬಳಕೆ ಮಾಡಲು ಅನುವು ಮಾಡಿಕೊಡುವಂತೆ ಸಂಬಂಧಿಸಿದ ಅಧಿಕಾರಿಗಳು, ಗುತ್ತಿಗೆದಾರರಿಗೆ ಸೂಚಿಸಿದರು.

ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ ಮಾತನಾಡಿ, ರಸ್ತೆ ಕಾಮಗಾರಿ ಗುಣಮಟ್ಟದಲ್ಲಿ ನಡೆಯುವಲ್ಲಿ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯವಾಗಿದೆ ಎಂದರು.

ಕಾಮಗಾರಿಗಳ ಭೂಮಿಪೂಜೆ ಸಮಾರಂಭದಲ್ಲಿ ಬೆನಕನಹಳ್ಳಿಯ ಗ್ರಾಮದ ಹಿರಿಯರು, ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ ಮಹೇಶ ಕೋಲಕಾರ, ಬಾಳು ದೇಸೂರಕರ, ಕಲ್ಲಪ್ಪ ದೇಸೂರಕರ, ಮೀನಾಕ್ಷಿ ಪಾಟೀಲ, ಕಲಾವತಿ ದೇಸೂರಕರ, ಶಿಲ್ಪಾ ಮುಂಗಳಿಕರ, ಮಲ್ಲೇಶ ಕುರಂಗಿ, ಜ್ಯೋತಿಬಾ ದೇಸೂರಕರ, ಕಲ್ಲಪ್ಪ ಪಾಟೀಲ, ಮೊನಪ್ಪ ಪಾಟೀಲ, ಪ್ರೇಮಾ ಹಿರೋಜಿ, ಮೋಹನ ಸಾಂಬ್ರೆಕರ, ಜ್ಯೋತಿಬಾ ಪಿಸಾಳೆ, ಬಾಬು ಕೋಲಕಾರ, ರಾಜು ದನಗಲ್ಕರ, ಲಕ್ಷ್ಮೀ ಸುತಾರ, ಶಂಕರ ಪಾಟೀಲ, ನಾರಾಯಣ ಮುತಗೇಕರ್, ಸಾಗರ ಲಾಖೆ, ಸುಭಾಷ ನಾಯ್ಕ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಪಕ್ಷದ ಕಾರ್ಯಕರ್ತರು, ಆಪ್ತ ಸಹಾಯಕರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ