Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಉದ್ಘಾಟನೆಗೆ ಸಜ್ಜಾದ ಬೆಳಗಾವಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ

 

ಬೆಳಗಾವಿ :
140 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಬೆಳಗಾವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತಾಂತ್ರಿಕ ಕಾರಣದಿಂದ ಉದ್ಘಾಟನೆ ಸಾಧ್ಯವಾಗಿಲ್ಲ. ಶೀಘ್ರದಲ್ಲೇ ಲೋಕಾರ್ಪಣೆಗೊಂಡು ಜನಸೇವೆಗೆ ತೆರೆದುಕೊಳ್ಳಲಿದೆ ಎಂದು ಬಿಮ್ಸ್ ನಿರ್ದೇಶಕ ಅಶೋಕ ಕುಮಾರ ಶೆಟ್ಟಿ ಹೇಳಿದರು.
ಪತ್ರಕರ್ತರಿಗೆ ಮಾಹಿತಿ ನೀಡಿದ ಅವರು, ಬೆಳಗಾವಿ ನಗರದಲ್ಲಿ ಸೂಪ‌ರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿ ಮುಕ್ತಾಯ ಹಂತದಲ್ಲಿದೆ ಎಂದು ವಿವರಿಸಿದರು.

ಬೆಳಗಾವಿ ಜಿಲ್ಲೆಯ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ದೃಷ್ಟಿಯಿಂದ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುತ್ತಿದೆ. ತುರ್ತು ಸೇವೆ ಜನರಿಗೆ ಲಭ್ಯವಾಗುವ ರೀತಿಯಲ್ಲಿ ಆಸ್ಪತ್ರೆ ಸಕಲ ಸೌಲಭ್ಯ ಅಳವಡಿಸಿಕೊಂಡಿದೆ. ಬೆಳಗಾವಿ ಜಿಲ್ಲೆಯ ಜನರ ಜೊತೆಗೆ ನೆರೆಯ ಗೋವಾ, ಮಹಾರಾಷ್ಟ್ರ ರಾಜ್ಯಗಳ ಜನರಿಗೆ ಈ ಆಸ್ಪತ್ರೆಯಿಂದ ಅನುಕೂಲವಾಗಲಿದೆ ಎಂದರು.

ಮೊದಲ ಮಹಡಿಯಲ್ಲಿ ನರವಿಜ್ಞಾನ, ನ್ಯೂರೋ ಸರ್ಜರಿ, ಪ್ಲಾಸ್ಟಿಕ್ ಸರ್ಜರಿ ಮತ್ತು ಇಂಡೋ ಕ್ರೋನಾಲಜಿ ವಿಭಾಗವಿದೆ. ಎರಡನೇ ಮಹಡಿಯಲ್ಲಿ ಗ್ಯಾಸ್ಟೋಲಜಿ, ನೆಫ್ರಾಲಜಿ, ಸರ್ಜಿಕಲ್ ಗ್ಯಾಸ್ಟೋಲಾಜಿ ವಿಭಾಗಗಳಿವೆ. ಮೂರನೇ ಮಹಡಿಯಲ್ಲಿ ವಿಐಪಿ ಕೊಠಡಿ ಮತ್ತು ಜನರಲ್ ಕೊಠಡಿ, ನಾಲ್ಕನೇ ಮಹಡಿಯಲ್ಲಿ ಆಪರೇಷನ್ ಥಿಯೇಟರ್ ಗಳು ಇರಲಿವೆ ಎಂದು ಹೇಳಿದರು.

ಬೆಳಗಾವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತಾಂತ್ರಿಕ ಕಾರಣದಿಂದ ಉದ್ಘಾಟನೆ ಮಾಡಲು ಸಾಧ್ಯವಾಗಲಿಲ್ಲ. ಶೀಘ್ರದಲ್ಲೇ ಲೋಕಾರ್ಪಣೆ ಮಾಡಲಾಗುತ್ತದೆ. ಬೆಳಗಾವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆಯಾದರೆ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ. ಈಗಾಗಲೇ ಬೆಳಗಾವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸಣ್ಣ ಪುಟ್ಟ ಕಾಮಗಾರಿ ಪೂರ್ಣಗೊಂಡಿದೆ ಎಂದು ಹೇಳಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ