Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯ ಚಳಿಗಾಲದ ಅಧಿವೇಶನ ಮಾದರಿಯಾಗಲಿ, ಎಲ್ಲರ ಸಹಕಾರವಿರಲಿ: ಯು.ಟಿ.ಖಾದರ್

ಬೆಳಗಾವಿ ಸುವರ್ಣಸೌಧ : ರಾಜ್ಯದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಡಿಸೆಂಬರ್ 9 ರಿಂದ ಡಿಸೆಂಬರ್ 20ರವರೆಗೆ ನಿಗದಿಯಾಗಿರುವ ವಿಧಾನಮಂಡಲ ಅಧಿವೇಶನವು ಈ ಬಾರಿಯು ಸಹ ಮಾದರಿಯಾಗುವ ರೀತಿಯಲ್ಲಿ ನಡೆಯಲು ಎಲ್ಲರ ಸಹಕಾರ ಕೋರುವೆ ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಹೇಳಿದರು.

ಸುವರ್ಣಸೌಧದ ಕೊಠಡಿ ಸಂಖ್ಯೆ 238 ರಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.
ಡಿಸೆಂಬರ್ 09ರಂದು ಮೊದಲ ದಿನ ಬೆಳಗ್ಗೆ 11 ರಿಂದ ಅಧಿವೇಶನವು ವಿದ್ಯುಕ್ತವಾಗಿ ಆರಂಭವಾಗಲಿದೆ. ಇದಕ್ಕು ಮೊದಲು 10.30ಕ್ಕೆ ಐತಿಹಾಸಿಕ ಅನುಭವ ಮಂಟಪ ಸ್ಮರಣೆಯ ಬೃಹತ್ ತೈಲ ವರ್ಣದ ಚಿತ್ರದ ಅನಾವರಣವನ್ನು ಮಾನ್ಯ ಮುಖ್ಯಮಂತ್ರಿಗಳು ಲೋಕಾರ್ಪಣೆ ಮಾಡುವರು. ವಿಧಾನಸಭೆಯ ಸಭಾಧ್ಯಕ್ಷರು, ವಿಧಾನ ಪರಿಷತನ ಸಭಾಪತಿಗಳು, ಉಪ ಸಭಾಪತಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಹಲವಾರು ಗಣ್ಯರು ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.
ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ವಿಧಾನಸಭೆ ಸದಸ್ಯರಿಗೆ ಪ್ರಮಾಣ ವಚನ ಬೋಧನೆ ನಡೆಯಲಿದೆ. ಮಧ್ಯಾಹ್ನ ಬಿಎಸ್‌ಸಿ (ಕಲಾಪ ಸಲಹಾ ಸಮಿತಿ) ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಮುಂದಿನ ಅಧಿವೇಶನದ ರೂಪುರೇಷಗಳ ಬಗ್ಗೆ ಸಮಗ್ರ ಚರ್ಚಿಸಿ ಅಂತಿಮಗೊಳಿಸಲಾಗುವುದು.
ಈ ಬಾರಿ ಅಧಿವೇಶನದಲ್ಲಿ 5 ವಿಧೇಯಕಗಳ ಮೇಲೆ ಸುಧೀರ್ಘ ಚರ್ಚೆ ನಡೆಯಲಿದೆ. ಎರಡು ಆಧ್ಯಾದೇಶದ ಬದಲಿ ವಿಧೇಯಕಗಳನ್ನು ಪರ್ಯಾಲೋಚನೆಗೆ ತೆಗೆದುಕೊಳ್ಳಲಾಗುವುದು.
ಅಧಿವೇಶನದಲ್ಲಿ 10 ದಿನಗಳ ಕಾಲ ಪ್ರಶ್ನೋತ್ತರ ಅವಧಿ ನಿಗದಿಪಡಿಸಲಾಗಿದೆ. ಗಮನ ಸೆಳೆಯುವ ಸೂಚನೆಗಳು, ಶೂನ್ಯ ವೇಳೆ, ನಿಲುವಳಿ ಸೂಚನೆ ನಡೆಸಲಾಗುವುದು.
ಈವರೆಗೆ 3004 ಪ್ರಶ್ನೆಗಳು, 205 ಗಮನ ಸೆಳೆಯುವ ಸೂಚನೆಗಳು, 96 ನಿಯಮ 351ರ ಸೂಚನೆಗಳನ್ನು ಸ್ವೀಕರಿಸಲಾಗಿದೆ. ಜತೆಗೆ 3 ಖಾಸಗಿ ವಿಧೇಯಕಗಳನ್ನು ಸಹ ಸ್ವೀಕರಿಸಲಾಗಿದೆ ಎಂದರು.
ನಮ್ಮೆಲ್ಲರ ಸ್ವಾಭಿಮಾನದ ಊರಾದ ಬೆಳಗಾವಿಯ ಸುವರ್ಣಸೌಧದಲ್ಲಿ ಪರಂಪರೆಯಂತೆ ಪ್ರತಿ ವರ್ಷ ನಡೆಯಲಿರುವ ಈ ವಿಶೇಷ ಅಧಿವೇಶನದಲ್ಲಿ ಭಾಗಿಯಾಗಿ ಅಧಿವೇಶನದ ಯಶಸ್ಸಿಗೆ ಸಹಕಾರ ನೀಡುವ ನಾನಾ ಪತ್ರಿಕೆಗಳು ಮತ್ತು ಸುದ್ದಿವಾಹಿನಿಗಳ ಪ್ರತಿನಿಧಿಗಳಿಗೆ ವಸತಿ, ಊಟ, ಆಸನದ ವ್ಯವಸ್ಥೆಗೆ ಹೆಚ್ಚಿನ ಒತ್ತು ಕೊಡಲಾಗಿದೆ. ಕಲಾಪದಲ್ಲಿ ಲಿಖಿತ ಪ್ರಶ್ನೆಗಳಿಗೆ ಉತ್ತರ ಪಡೆಯುವ ಪ್ರಕ್ರಿಯೆ ಸೇರಿದಂತೆ ನಾನಾ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ ಎಂದರು.
ಬೆಂಗಳೂರಿನ ವಿಧಾನಸೌಧದ ವಿಧಾನಸಭೆಯ ಮೊಗಸಾಲೆಯಲ್ಲಿ ಇರುವ ಮಾದರಿಯಲ್ಲಿಯೇ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಈ ಬಾರಿ ಹೊಸದಾಗಿ ಸಭಾಧ್ಯಕ್ಷರ ಪೀಠವನ್ನು ಸಿದ್ದಪಡಿಸಲಾಗಿದೆ ಎಂದರು.
ಅಧಿವೇಶನದ ಕಾರ್ಯವ್ಯವಸ್ಥೆಗಾಗಿ 2500 ಅಧಿಕಾರಿಗಳು ಮತ್ತು ಸಿಬ್ಬಂದಿ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತಗಾಗಿ ಅಂದಾಜು 6000 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿ ಒಟ್ಟು 8500 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ 10 ಸಮಿತಿಗಳನ್ನು ರಚಿಸಿ ವಸತಿ, ಸಾರಿಗೆ ಸೇರಿದಂತೆ ನಾನಾ ವ್ಯವಸ್ಥೆ ಮಾಡಲಾಗಿದೆ ಎಂದರು.
ಸುವರ್ಣಸೌಧಕ್ಕೆ ಬರುವವರಿಗೆ ಅನುಕೂಲವಾಗಲು ಮುಖ್ಯದ್ವಾರದಿಂದ ಸೌಧದ ಕಟ್ಟಡದವರೆಗೆ ಕೆಲ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.
ಕಲಾಪ ವೀಕ್ಷಣೆಗೆ ಆಗಮಿಸುವ ವಿದ್ಯಾರ್ಥಿ, ಶಿಕ್ಷಕರಿಗೆ ಮಾಹಿತಿಗಾಗಿ ಬೆಳಗಾವಿಯಲ್ಲಿ 1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ದಶಮಾನೋತ್ಸವ ನೆನಪಿನ ಛಾಯಾಚಿತ್ರಗಳ ಪ್ರದರ್ಶನಕ್ಕೆ ಏರ್ಪಾಡು ಮಾಡಲಾಗಿದೆ ಎಂದರು. ಇದಕ್ಕಾಗಿ ಮಹಾತ್ಮ ಗಾಂಧೀಜಿಯವರ ಅಪರೂಪದ ಭಾವಚಿತ್ರಗಳನ್ನು ಸಂಗ್ರಹಿಸಿ ಸುವರ್ಣಸೌಧದ ಆಯಾ ಕಡೆಗಳಲ್ಲಿ ಹಾಕಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಇದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ