Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ-ಚೋರ್ಲಾ-ಗೋವಾ ರಸ್ತೆ : ಹನ್ನೊಂದು ತಿಂಗಳಿನಲ್ಲಿ ಕಾಮಗಾರಿ ಪೂರ್ಣ: ಸಚಿವ ಸತೀಶ ಜಾರಕಿಹೊಳಿ

ಖಾನಾಪುರ ಶಾಸಕ ವಿಠ್ಠಲ ಹಲಗೇಕರ ಮಾತನಾಡಿ, "ಈಗಿರುವ ರಸ್ತೆ ಮಳೆಗಾಲದಲ್ಲಿ ಬಹಳಷ್ಟು ಹಾಳಾಗುತ್ತಿದೆ. ಬೆಳಗಾವಿಯಿಂದ ಗೋವಾ ವರೆಗೆ ಸಂಚರಿಸುವ ರಸ್ತೆಗಳಲ್ಲಿ ಚೋರ್ಲಾ ಮಾರ್ಗ ರಸ್ತೆ ಸಹ ಮುಖ್ಯ ರಸ್ತೆಯಾಗಿದೆ. ಆದ್ದರಿಂದ ಪ್ರಯಾಣಿಕರು ಹಾಗೂ ಸ್ಥಳೀಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ" ಎಂದು ತಿಳಿಸಿದರು.

ಬೆಳಗಾವಿ : ಬೆಳಗಾವಿ-ಚೋರ್ಲಾ-ಗೋವಾ ರಸ್ತೆ ನಿರ್ಮಾಣ ಮಾಡಬೇಕು ಎಂಬುದು ಅನೇಕ ದಿನಗಳ ಬೇಡಿಕೆಯಾಗಿತ್ತು. ಈ ನಿಟ್ಟಿನಲ್ಲಿ 43.35 ಕಿ.ಮೀ ರಸ್ತೆ, ಚರಂಡಿ, ಸೇತುವೆ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, 11 ತಿಂಗಳ ಅವಧಿಯಲ್ಲಿ ಪೂರ್ಣಗೊಳ್ಳಲಿವೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಖಾನಾಪುರ ತಾಲ್ಲೂಕಿನ ಕಣಕುಂಬಿಯಲ್ಲಿ ಶನಿವಾರ (ಫೆ.24) ಬೆಳಗಾವಿ-ಚೋರ್ಲಾ-ಗೋವಾ ಗಡಿಯವರೆಗಿನ ರಾಜ್ಯ ಹೆದ್ದಾರಿ-748ಎ ದುರಸ್ತಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಕರ್ನಾಟಕ ಗೋವಾ ಎರಡು ರಾಜ್ಯಗಳ ಮುಖ್ಯ ಹೆದ್ದಾರಿ ಇದಾಗಿದ್ದು, ರಸ್ತೆ ಸುಧಾರಣೆಯಿಂದ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ. ಹೊಸ ರಸ್ತೆ ನಿರ್ಮಾಣದ ಜೊತೆಗೆ 10 ರಿಂದ 12 ಕಿಮೀ ರಸ್ತೆ ದುರಸ್ತಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ರಸ್ತೆ ಹಾಳಾಗದಂತೆ ರಸ್ತೆ ಬದಿಯಲ್ಲಿ ಚರಂಡಿ ನಿರ್ಮಾಣ ಮಾಡಲಾಗುವುದು.

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಈಗಾಗಲೇ ಚರ್ಚಿಸಲಾಗಿದೆ. ರಾಜ್ಯದಲ್ಲಿ ಅತೀ ವೇಗವಾಗಿ ರಾಷ್ಟ್ರೀಯ ಹೆದ್ದಾರಿ ರಸ್ತೆಗಳ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ. ಅರಣ್ಯ ಇಲಾಖೆಯ ಸ್ಥಳ ಇರುವುದರಿಂದ ರಸ್ತೆ ಅಗಲೀಕರಣ ಸಾಧ್ಯವಿಲ್ಲ ಎಂದು ಹೇಳಿದರು.

ಗೋಕಾಕ್ ಫಾಲ್ಸ್ ಪ್ರವಾಸಿ ತಾಣವಾಗಿ ಮಾರ್ಪಾಡು ಮಾಡಲು ಹಾಗೂ ಬೆಳಗಾವಿ ನಗರದಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಇದರಿಂದ ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗಲಿದೆ ಎಂದರು.

ರಾಜ್ಯದಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಅದರಂತೆ ಹೊಸ ಬಜೆಟ್ ನಲ್ಲಿ ಘೋಷಿಸಿರುವ ಅನೇಕ ಉತ್ತಮ ಯೋಜನೆಗಳನ್ನು ಜನರಿಗೆ ತಲುಪಿಸಲಾಗುವುದು ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

ರಸ್ತೆ ನಿರ್ಮಾಣ ಕಾಮಗಾರಿ ಭೂಮಿ ಪೂಜೆ:
ಇದಕ್ಕೂ ಮುಂಚೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಖಾನಾಪುರ ಶಾಸಕ ವಿಠ್ಠಲ ಹಲಗೇಕರ, ವಿಧಾನ ಪರಿಷತ್ ಸದಸ್ಯ ನಾಗರಾಜ ಯಾದವ ಅವರು
ಬೆಳಗಾವಿ-ಚೋರ್ಲಾ-ಗೋವಾ ರಸ್ತೆ ಕಾಮಗಾರಿಯ ಭೂಮಿ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು.

ಬೆಳಗಾವಿ ಉತ್ತರ ವಿಧಾನ ಸಭಾ ಮತ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್, ಸವದತ್ತಿ ಶಾಸಕ ವಿಶ್ವಾಸ ವೈದ್ಯ, ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ, ವಿಧಾನ ಪರಿಷತ್ ಸದಸ್ಯ ನಾಗರಾಜ ಯಾದವ, ಕಣಕುಂಬಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರು, ರಾಷ್ಟ್ರೀಯ ಹೆದ್ದಾರಿ ಮುಖ್ಯ ಇಂಜಿನಿಯರ್ ಸೇರಿದಂತೆ ಕಣಕುಂಬಿ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ