Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತೀವ್ರ ಕುತೂಹಲ ಕೆರಳಿಸಿದ ಬೆಳಗಾವಿ ಮೇಯರ್-ಉಪಮೇಯರ್ ಚುನಾವಣೆ ಇಂದು

ಬೆಳಗಾವಿ:ಭಾರೀ ಕುತೂಹಲ ಕೆರಳಿಸಿರುವ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಹುದ್ದೆಯ ಚುನಾವಣೆ ಇಂದು ನಡೆಯಲಿದೆ. ಪ್ರತಿಷ್ಠಿತ ಹುದ್ದೆಗಾಗಿ ಹಲವರು ಕಣ್ಣಿಟ್ಟಿದ್ದು ಯಾರು ಮೇಯರ್, ಯಾರು ಉಪಮೇಯರ್ ಆಗುತ್ತಾರೆ ಎಂದು ಕಾದುನೋಡಬೇಕಾಗಿದೆ.

58 ಸದಸ್ಯರನ್ನು ಹೊಂದಿರುವ ಪಾಲಿಕೆಯಲ್ಲಿ

ಬಿಜೆಪಿ ಬಹುಮತ ಹೊಂದಿದೆ.
ಬೆಳಗಾವಿ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್‌, ಉಪ ಮೇಯರ್‌ ಚುನಾವಣೆಯ ಚಟುವಟಿಕೆಗಳು ತೆರೆಮರೆಯಲ್ಲಿ ಜೋರಾಗಿದೆ.
ಮೇಯರ್‌ ಹುದ್ದೆ ಪರಿಶಿಷ್ಟ ಮಹಿಳೆ ಹಾಗೂ ಉಪ ಮೇಯರ್‌ ಹುದ್ದೆ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. 17ನೇ ವಾರ್ಡ್‌ನ ಬಿಜೆಪಿ ಸದಸ್ಯೆ ಸವಿತಾ ಕಾಂಬಳೆ ಮೇಯರ್‌ ಪಟ್ಟಕ್ಕೇರುವ ಸಾಧ್ಯತೆ ಹೆಚ್ಚಿದೆ. 35ನೇ ವಾರ್ಡ್‌ನ ಲಕ್ಷ್ಮೀ ರಾಠೋಡ ಅವರೂ ಕಣದಲ್ಲಿದ್ದಾರೆ. ಕಾಂಗ್ರೆಸ್‌ನಲ್ಲಿ ಪರಿಶಿಷ್ಟ ಜಾತಿ ಮಹಿಳಾ ಸದಸ್ಯರು ಇಲ್ಲ. ಮಹಾನಗರ ಪಾಲಿಕೆಯಲ್ಲಿ ಹೆಚ್ಚಿನ ಸಂಖ್ಯಾಬಲ ಹೊಂದಿರುವ ಬಿಜೆಪಿಯವರಿಗೆ ಮೇಯರ್‌ ಸ್ಥಾನ ಲಭಿಸಲಿವೆ.

ಉಪ ಮೇಯರ್‌ ಹುದ್ದೆ ಪುರುಷ ಅಭ್ಯರ್ಥಿಗೆ ಸಿಗುವ ಸಾಧ್ಯತೆಯಿದೆ. ಶಾಸಕ ಅಭಯ್‌ ಪಾಟೀಲ ಹಾಗೂ ಮಾಜಿ ಶಾಸಕ ಅನಿಲ್‌ ಬೆನಕೆ ಅವರು ಅವಿರೋಧವಾಗಿ ಮೇಯರ್‌ ಆಯ್ಕೆಗೆ ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಪಾಲಿಕೆ ಸದಸ್ಯರೊಂದಿಗೆ ಈ ಕುರಿತು ಚರ್ಚೆ ಮಾಡಿದ್ದಾರೆ. ಉಪ ಮೇಯರ್‌ ಹುದ್ದೆಗೆ ಕೆಲವು ಆಕಾಂಕ್ಷಿಗಳು ತೀವ್ರ ಸ್ಪರ್ಧೆ ನಡೆಸಿದ್ದಾರೆ. ಈಗಾಗಲೇ ಎರಡು ಬಾರಿ ಬಿಜೆಪಿ ನಾಯಕರು ಸರ್ವ ಸದಸ್ಯರ ಸಭೆ ನಡೆಸಿ ಒಮ್ಮತದ ಆಯ್ಕೆಗೆ ಪ್ರಯತ್ನಿಸಿದ್ದು ಕಂಡು ಬಂದಿದೆ.

21ನೇ ಅವಧಿಗೆ 2023ರ ಫೆಬ್ರವರಿಯಲ್ಲಿ ನಡೆದ ಚುನಾವಣೆಯಲ್ಲಿ ಮೇಯರ್‌ ಆಗಿ ಶೋಭಾ ಸೋಮನಾಚೆ ಹಾಗೂ ಉಪಮೇಯರ್‌ ಆಗಿ ರೇಷ್ಮಾ ಪಾಟೀಲ ಆಯ್ಕೆಯಾಗಿದ್ದರು. ಅವರ ಅಧಿಕಾರಾವಧಿ ಫೆ.5ಕ್ಕೆ ಪೂರ್ಣಗೊಂಡಿದ್ದರಿಂದ ಪಾಲಿಕೆಯ ಚುನಾವಣಾಧಿಕಾರಿಯಾಗಿರುವ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟೆಣ್ಣವರ ಫೆ.15ರಂದು ಮೇಯರ್‌ - ಉಪ ಮೇಯರ್‌ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಿದ್ದರು.

 

ಒಟ್ಟಾರೆ, ಇದೀಗ ಬೆಳಗಾವಿ ಮಹಾನಗರ ಸಭೆಯ ಹೊಸ ಮೇಯರ್ ಮತ್ತು ಉಪಮೇಯರ್ ಚುನಾವಣೆ ಭವಿಷ್ಯ ಕುತೂಹಲ ಕೆರಳಿಸಿದ್ದು, ಮುಂದಿನ ಒಂದು ವರ್ಷದವರೆಗೆ ಈ ಹುದ್ದೆ ಅಲಂಕರಿಸಲಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ