Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಿರಂತರವಾಗಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಸಾರ್ವಜನಿಕ ನೆಮ್ಮದಿ ಹಾಳು ಮಾಡುತ್ತಿದ್ದ ಮೂವರ ಬಂಧನ ಮಾಡಿದ ಬೆಳಗಾವಿ ಪೊಲೀಸರು

ಬೆಳಗಾವಿ : ನಿರಂತರವಾಗಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಸಾರ್ವಜನಿಕರ ನೆಮ್ಮದಿ ಹಾಳು ಮಾಡುತ್ತಿದ್ದ ಮೂವರನ್ನು ಕೊನೆಗೂ ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಶಹಾಪುರದ ಸರ್ಫರಾಜ ಶಬ್ಬೀರ ಅಹ್ಮದ್ ಶೇಖ್, ಟಿಳಕವಾಡಿ ಅಯೋಧ್ಯಾ ನಗರದ ವಿನಾಯಕ ಪ್ರಕಾಶ ಕೊಲ್ಲಾಪುರಿ ಮತ್ತು ಶಹಾಪುರ ಹೊಸೂರ ಬಸವನಗಲ್ಲಿಯ ಸಾಗರ ಪಾಂಡುರಂಗ ಸಾಲಗುಡೆ ಬಂಧಿತರು.

ಇವರು ಪದೇಪದೇ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿ ಸಾರ್ವಜನಿಕ ನೆಮ್ಮದಿಯನ್ನು ಹಾಳು ಮಾಡುತ್ತಿದ್ದ ಮೇಲೆ ಬೆಳಗಾವಿ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಸರ್ಫರಾಜ್ ವಿವಿಧ ಪೊಲೀಸ್ ಠಾಣೆಗಳಲ್ಲಿ ಇಸ್ಪೀಟ್ ಆಟ ಆಡಿಸುವುದು ಮತ್ತು ಇತರ ಅಪರಾಧಗಳಿಗೆ ಸಂಬಂಧಿಸಿ ಒಟ್ಟು 16 ಪ್ರಕರಣ ದಾಖಲಾಗಿವೆ.

ವಿನಾಯಕ ಮೇಲೆ ಗಾಂಜಾ ಮಾರಾಟ ಮತ್ತು ಇತರ ಅಪರಾಧಗಳಿಗೆ ಸಂಬಂಧಿಸಿ ಐದು ಪ್ರಕರಣ ದಾಖಲಾಗಿದೆ. ಸಾಗರ ಮೇಲೆ ಇಸ್ಪೀಟ್ ಮತ್ತು ಇತರ ಅಪರಾಧಗಳಿಗೆ ಸಂಬಂಧಿಸಿದ ಆರು ಪ್ರಕರಣ ದಾಖಲಾಗಿದೆ.

ಇವರನ್ನು ಬಂಧಿಸಿರುವ ಪೊಲೀಸರು ಮುಂದಿನ ಐದು ತಿಂಗಳ ಅವಧಿಗೆ ವಿಜಯಪುರ , ಕಾರವಾರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಇವರನ್ನು ಗಡಿಪಾರು ಮಾಡಿ ಆದೇಶಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವುಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ