Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಪೊಲೀಸರ ಕಾರ್ಯಾಚರಣೆ : ಕಳವಾದ ಬಂಗಾರದ ಆಭರಣ ಪತ್ತೆ !

 

ಬೆಳಗಾವಿ :
ಹಿಂಡಲಗಾ ಗ್ರಾಮದ ಶಾಂತಾ ಬಸವರಾಜ ಪರಗೊನ್ನವರ ಸಾಃ ಹಿಂಡಲಗಾ ಕೇಂದ್ರ ಕಾರಾಗೃಹ ಇವರ ಬಂಗಾರ ಆಭರಣ ಕಳುವಾದ ಬಗ್ಗೆ ನೀಡಿದ ದೂರಿನಂತೆ ದಿನಾಂಕ .30 / 11 / 2022 ರಂದು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು . ಹಿರಿಯ ಪೊಲೀಸ್ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಎಸ್.ವಿ. ಗಿರೀಶ , ಎಸಿಪಿ ಬೆಳಗಾವಿ ಗ್ರಾಮೀಣ ಉಪವಿಭಾಗರವರ ಮಾರ್ಗದರ್ಶನದಲ್ಲಿ ಶ್ರೀನಿವಾಸ ಹಾಂಡ , ಪಿಐ , ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ಇವರ ನೇತೃತ್ವದಲ್ಲಿ ಎಲ್.ಎಸ್ . ಜೋಡಟ್ಟಿ ಪಿಎಸ್‌ಐ ( ಕಾ & ಸು ) ಮತ್ತು ಸಿಬ್ಬಂದಿ ತಂಡ ಆರೋಪಿತರ ಮಾಹಿತಿ ಕಲೆ ಹಾಕಿ ದಿನಾಂಕ : 09/12/2022 ರಂದು ಮಲ್ಲಸರ್ಜ ಗಂಗಪ್ಪಾ ಕೊಟಬಾಗಿ , ವಯಸ್ಸು 26 ವರ್ಷ , ಕಡಸಗಟ್ಟಿ ತಾಃ ಬೈಲಹೊಂಗಲ ಈತನನ್ನು ಬೈಲಹೊಂಗಲ ತಾಲೂಕಿನ ಕಡಸಗಟ್ಟಿ ಗ್ರಾಮದಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆದುಕೊಳ್ಳಲಾಗಿದೆ . ಆತನನ್ನು ವಿಚಾರಣೆಗೊಳಪಡಿಸಿದಾಗ ಸದರಿಯವನು ಕಳ್ಳತನ ಮಾಡಿ , ಬಂಗಾರವನ್ನು ಕಿತ್ತೂರಿನ ಖಾಸಗಿ ಬ್ಯಾಂಕಿನಲ್ಲಿ ಅಡ ಇಟ್ಟಿರುವುದಾಗಿ ಒಪ್ಪಿಕೊಂಡಿದ್ದು , ಆರೋಪಿತನ ವಶದಿಂದ ಕಳ್ಳತನ ಮಾಡಿದ 46 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ . ಆತನ ವಿರುದ್ಧ ಕಾನೂನು ಕ್ರಮ ಜರುಗಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ.

*ಮಾಳಮಾರುತಿ ಪೊಲೀಸ್‌ ಕಾರ್ಯಾಚರಣೆ : 1,30,000 ರೂ.ಬಂಗಾರದ ಆಭರಣ ಪತ್ತೆ*
ದಿನಾಂಕ 01/12/2022 ರಂದು ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸುನೀಲ.ಬಿ.ಪಾಟೀಲ ಪಿಐ ಮಾಳಮಾರುತಿ ಪೊಲೀಸ ಠಾಣೆ ಬೆಳಗಾವಿ ಇವರ ನೇತೃತ್ವದ ತಂಡವು ಮಾಳಮಾರುತಿ ಪೊಲೀಸ ಠಾಣಾ ಹದ್ದಿಯಲ್ಲಿ ಸರಗಳ್ಳತನ ಮಾಡಿದ ಆರೋಪಿತನಾದ ರಾಜು ಯಲ್ಲಪ್ಪಾ ಆಲಟ್ಟಿ ( 20 ) ಸಾ || ವಂಟಮೂರಿ ಕಾಲನಿ ಜನತಾ ಪ್ಲಾಟ ಬೆಳಗಾವಿ ಈತನನ್ನು ಪತ್ತೆ ಮಾಡಿರುತ್ತಾರೆ. ಆತನಿಂದ ಸುಮಾರು 1,30,000 / - ರೂ ಕಿಮ್ಮತ್ತಿನ ಬಂಗಾರದ ಮಂಗಳಸೂತ್ರವನ್ನು ವಶಪಡಿಸಿಕೊಂಡು , ಆರೋಪಿತನಿಗೆ ಮಾನ್ಯ ನ್ಯಾಯಾಲಯಕ್ಕೆ ಹಾಜರಪಡಿಸಲಾಗಿರುತ್ತದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ