Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಆರ್ ಎಲ್ ಎಸ್ : ರಾಷ್ಟ್ರೀಯ ವಿಜ್ಞಾನ ದಿನಾಚರಣೆ

 

ಬೆಳಗಾವಿ :
ಕೆ ಎಲ್ ಇ ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯ ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶ ,ಐಐಸಿ ಹಾಗೂ ರಸಾಯನಶಾಸ್ತ್ರ ಸಂಘದ ಸಹಯೋಗದ ಆಶ್ರಯದಲ್ಲಿ ಆಯೋಜಿಸಿದ್ದ "ರಾಷ್ಟ್ರೀಯ ವಿಜ್ಞಾನ ದಿನಾಚರಣೆ" ನಿಮಿತ್ತ "ವಿಕಸಿತ ಭಾರತಗಾಗಿ ಸ್ಥಳೀಯ ತಂತ್ರಜ್ಞಾನ " ಎಂಬ ವಿಷಯ ಕುರಿತು ವಿಶೇಷ ಉಪನ್ಯಾಸ ವನ್ನು ದಿನಾಂಕ 28/2/2024 ರಂದು ಬೆಳಿಗ್ಗೆ 11 ಗಂಟೆಗೆ ಸರ್ ಸಿ ವಿ ರಾಮನ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಮುಂಬೈನ ಟಾಟಾ ಸಮೂಹದ ಉತ್ಪಾದನಾ ಘಟಕದ ಉಪಾಧ್ಯಕ್ಷ ಡಾ. ರಾಜಶೇಖರ ಎಸ್. ಕಿನ್ನವರ ಉದ್ಘಾಟಿಸಿ ಮಾತನಾಡಿ, ಇಂದಿನ ವಿಜ್ಞಾನ ವಿದ್ಯಾರ್ಥಿಗಳು ವಿಜ್ಞಾನ ವಿಷಯದ ಸಮಗ್ರ ಅಧ್ಯಯನ ಮಾಡಬೇಕು. ಆಸಕ್ತಿಯಿಂದ ಕಲಿಕೆಯಲ್ಲಿ ಓದುವ ಮೂಲಕ ಹೊಸ ಸಂಶೋಧನೆಯ ಮಾಡಬೇಕು. ಭಾರತದಲ್ಲಿ ಟಾಟಾ ಸಂಸ್ಥೆಯ ಪ್ರತಿಷ್ಠಿತವಾದದು. ಈ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿದರೆ ಬದುಕುವ ವಿವಿಧ ಕೌಶಲಗಳನು ಪಡೆಯಬಹುದು. ಸ್ಥಳೀಯ ತಂತ್ರಜ್ಞಾನ ವಸ್ತುಗಳು ತಯಾರಿ ಮಾಡಿದರೆ ಭಾರತ ದೇಶವು ಬಲಿಷ್ಠವಾಗುತ್ತದೆ. ಆಧುನಿಕ ಕಾಲದಲ್ಲಿ ವಿಷಕಾರಿಕ ವಸ್ತುಗಳು ಬಳಕೆ ಮಾಡಿದರೆ ವಾತಾವರಣ ಬದಲಾವಣೆಯಾಗುತದೆ. ನಂತರ ಮಾನವನ ಮೇಲೆ ಪರಿಣಾಮ ಬೀರುತ್ತದೆ. ಇಂದಿನ ಕಾಲದಲ್ಲಿ ನೈಸರ್ಗಿಕ ಸಂಪನ್ಮೂಲ ರಕ್ಷಣೆಯ ಅಗತ್ಯವಿದೆ.ಸ್ಥಳೀಯ ತಂತ್ರಜ್ಞಾನ ಬಳಕೆ ಮಾಡಿದರೆ ಜಗತ್ತಿನಲ್ಲಿ ದೇಶವು ವಿಕಾಸ ಭಾರತ ವಾಗಲಿಕೆ ಸಾಧ್ಯವಾಗುತ್ತದೆಂದು ಕರೆ ನೀಡಿದರು.



ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಜೆ ಎಸ್ ಕವಳೇಕರ ಮಾತನಾಡಿ, ಸರ್ ಸಿ.ವಿ. ರಾಮನ್ ರ ಜೀವನ ಮತ್ತು ಸಾಧನೆ ಅಧ್ಯಯನ ಮಾಡಬೇಕು. ಮುಂದುವರೆದ ದೇಶವಾಗಬೇಕಾದರೆ ಪ್ರತಿಯೊಬ್ಬರು ಸ್ಥಳೀಯ ತಂತ್ರಜ್ಞಾನ ಬಳಕೆ ಮಾಡಿಕೊಳ್ಳುಬೇಕು. ಸರ್ ಸಿ ವಿ ರಾಮನ್ ರ ಸಿದ್ಧಾಂತಗಳು ತಿಳಿದುಕೊಳ್ಳುಬೇಕೆಂದು ಹೇಳಿದರು.

ಸೌಮ್ಯ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಡಾ. ಬಿ.ಜಿ. ಬೇವಿನಕಟ್ಟಿ ಸ್ವಾಗತಿಸಿದರು. ಪ್ರೊ.ಎಸ್. ಡಿ.ಗೋರಿನಾಯಕ
ಪರಿಚಯಿಸಿದರು. ಪವಿತ್ರಾ ಸಮಾಜೆ ವಂದಿಸಿದರು. ಸಮೃದ್ಧಿ ಬರವೆ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ