Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬೆಳಗಾವಿ ಅಧಿವೇಶನ ಶತಮಾನೋತ್ಸವ; ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ : "ಬೆಳಗಾವಿ ಅಧಿವೇಶನ ಶತಮಾನೋತ್ಸವ ಆಚರಣೆ ಐತಿಹಾಸಿಕ ಕಾರ್ಯಕ್ರಮ. ದೇಶದ ಇತಿಹಾಸವನ್ನು ಸಂಭ್ರಮಿಸುವ ಕಾರ್ಯಕ್ರಮ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

"ಅಂದು 1924ರಲ್ಲಿ ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದಾಗ ಜವಹಾರ್ ಲಾಲ್ ನೆಹರು ಹಾಗೂ ಕರ್ನಾಟಕದವರಾದ ಗಂಗಾಧರ ದೇಶಪಾಂಡೆ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾಗಿದ್ದರು. ಅವರಿಬ್ಬರು ಸೇರಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸಿ ಕಾಂಗ್ರೆಸ್ ಅಧ್ಯಕ್ಷರಾಗುವಂತೆ ಮಾಡಿದರು" ಎಂದು ತಿಳಿಸಿದರು.

"ಇಲ್ಲಿಂದ ಗಾಂಧಿ ಅವರು ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದರು. 2023ರ ಚುನಾವಣೆ ಸಮಯದಲ್ಲಿ ಇದೇ ಜಾಗದಿಂದ ಪ್ರಜಾಧ್ವನಿ ಯಾತ್ರೆ ಆರಂಭಿಸಿ ನಮ್ಮ ಹೋರಾಟ ಮಾಡಿದೆವು. ನಂತರ ರಾಜ್ಯದಲ್ಲಿ 136 ಕ್ಷೇತ್ರಗಳನ್ನು ಗೆದ್ದು ಸುಭದ್ರ ಸರ್ಕಾರ ಸ್ಥಾಪಿಸಿದೆವು" ಎಂದು ಹೇಳಿದರು.

"ಮತ್ತೆ ಇದೇ ಭೂಮಿಯಿಂದ ದೇಶ ಹಾಗೂ ರಾಜ್ಯವನ್ನು ಯಾವ ದಿಕ್ಕಿನಲ್ಲಿ ಕೊಂಡೊಯ್ಯಬೇಕು ಎಂದು ತೀರ್ಮಾನ ಮಾಡಲು ಈ ಕಾರ್ಯಕ್ರಮ ಮಾಡಲಾಗುತ್ತಿದೆ. ಈಗಿನ ಕಾಲಘಟ್ಟದಲ್ಲಿ ದೇಶ ಹಾಗೂ ರಾಜ್ಯ ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಿ ಯಾವ ರೀತಿ ಹೋರಾಟ ಮಾಡಬೇಕು ಎಂಬುದನ್ನು ದೇಶದ ಎಲ್ಲಾ ಪ್ರಮುಖ ನಾಯಕರು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಲಿದ್ದಾರೆ" ಎಂದರು.

ಸುವರ್ಣ ಸೌಧದ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷಕ್ಕೂ ಆಹ್ವಾನ ಇದೆಯೇ ಎಂದು ಕೇಳಿದಾಗ, "ವಿರೋಧ ಪಕ್ಷಗಳ ನಾಯಕರು, ಸಂಸದರು, ಉಭಯ ಸದನಗಳ ಸಭಾಧ್ಯಕ್ಷರು ಹಾಗೂ ಸಭಾಪತಿಗಳು, ಎಲ್ಲಾ ಪಕ್ಷಗಳ ಶಾಸಕರು ಹಾಗೂ ಪರಿಷತ್ ಸದಸ್ಯರು ಸೇರಿ ಎಲ್ಲಾ ಪಕ್ಷಗಳಿಗೂ ಆಹ್ವಾನ ನೀಡಲಾಗುವುದು. ಇದು ಸಂಪೂರ್ಣ ಸರ್ಕಾರಿ ಕಾರ್ಯಕ್ರಮ. ಭದ್ರತಾ ದೃಷ್ಟಿಯಿಂದ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಆಹ್ವಾನ ಇರುವುದಿಲ್ಲ. ಬೆಳಗಾವಿಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಇತರೆ ವಿಶೇಷ ಅತಿಥಿಗಳಿಗೆ ಆಹ್ವಾನ ನೀಡಲಾಗುವುದು" ಎಂದು ತಿಳಿಸಿದರು.

ದೇಶದಾದ್ಯಂತ ಎಷ್ಟು ಜನ ಕಾಂಗ್ರೆಸ್ ನಾಯಕರು ಆಗಮಿಸುತ್ತಿದ್ದಾರೆ ಎಂದು ಕೇಳಿದಾಗ, "ದೇಶಾದ್ಯಂತ ಕಾಂಗ್ರೆಸ್ ಪಕ್ಷದ ಪ್ರಮುಖ 500ರಿಂದ 600 ಜನ ಕಾಂಗ್ರೆಸ್ ನಾಯಕರು ಮಾತ್ರ ಆಗಮಿಸುತ್ತಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಎಲ್ಲಾ ರಾಜ್ಯಗಳ ಶಾಸಕಾಂಗ ಪಕ್ಷದ ನಾಯಕರು, ಸಂಸದರು ಆಗಮಿಸಲಿದ್ದಾರೆ. ಇವರೆಲ್ಲರೂ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದು, ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮಿತಿಯ ಸದಸ್ಯರು ಮಾತ್ರ ಭಾಗವಹಿಸಲಿದ್ದಾರೆ" ಎಂದು ತಿಳಿಸಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಕಲಗಿ ಪಟ್ಟಣದಲ್ಲಿ ವಿಜಯ ದಶಮಿ ನಿಮಿತ್ತ ಶ್ರೀ ಮಹಾಲಕ್ಷ್ಮೀ ದೇವಿ ಅಗ್ನಿ ಹಾಯುವ ಕಾರ್ಯಕ್ರಮ.ಮಾರ್ಕಂಡೇಯ ನದಿಯಲ್ಲಿ  ಮರ್ಡರ್..?ಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerನೀಲಿ ಡ್ರಮ್ ಕೊಲೆ ಪ್ರಕರಣ : ಪತ್ನಿ ಮುಸ್ಕಾನ್‌, ಪ್ರಿಯಕರ ಸಾಹಿಲ್‌ಗೆ ಮರಣದಂಡನೆ ಶಿಕ್ಷೆRCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರು