Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲಂಚ ಪಡೆಯುತ್ತಿದ್ದ ಬೆಳಗಾವಿ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆ PU ಉಪಪ್ರಾಚಾರ್ಯ ಕೆ. ಬಿ. ಹಿರೇಮಠ ಬಂಧನ.

ಗಳಿಕೆ ರಜೆ ನಗದೀಕರಣಕ್ಕಾಗಿ ಲಂಚ ಪಡೆಯುತ್ತಿದ್ದ ಬೆಳಗಾವಿ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆ PU ಉಪಪ್ರಾಚಾರ್ಯ ಕೆ. ಬಿ. ಹಿರೇಮಠ ಬಂಧನ.

ಲೋಕಾಯುಕ್ತರಿಂದ ನಾಗನೂರ HM ಮದಾಳೆಗೆ ನೆಮ್ಮದಿ, ಕಿರುಕುಳ ನೀಡಿದ KB ಗೆ ಹಿಂಡಲಗಾ ಕಂಬಿ..!

ಬೆಳಗಾವಿ : ಗಳಿಕೆ (EL) ರಜೆ ನಗದೀಕರಣ ಮಾಡಲು ಠರಾವು ಪ್ರತಿ ನೀಡಿದ್ದಕ್ಕಾಗಿ ಲಂಚ ಪಡೆಯುತ್ತಿದ್ದ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆ ಬೆಳಗಾವಿಯ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ, ಪ್ರೌಢ ಶಾಲಾ ವಿಭಾಗದ ಉಪಪ್ರಾಚಾರ್ಯ ಹಾಗೂ ಕಾರ್ಯದರ್ಶಿ ಕೆ. ಬಿ. ಹಿರೇಮಠ ಅವರನ್ನು ಬೆಳಗಾವಿ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿ ಬಂಧಿಸುವಲ್ಲಿ ಇಂದು(ಮಂಗಳವಾರ -23) ಯಶಸ್ವಿಯಾಗಿದ್ದಾರೆ.

ಬೈಲಹೊಂಗಲ ತಾಲೂಕಿನ ನಾಗನೂರ ಗ್ರಾಮದಲ್ಲಿರುವ ಶ್ರೀಬಸವೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರವೀಂದ್ರ ರಾಜಾರಾಮ ಮದಾಳೆ ಅವರು ತಮ್ಮ ಗಳಿಕೆ ರಜೆ ನಗದೀಕರಣ ಮಾಡುವುದಕ್ಕೆ ಆಡಳಿತ ಮಂಡಳಿಯಿಂದ ಠರಾವು ಪ್ರತಿಯನ್ನು ನೀಡುವುದ್ದಕ್ಕಾಗಿ ಗಳಿಕೆ ರಜೆಯ ಹಣದ ನಗದೀಕರಣ ಮೊತ್ತದ ಶೇ. 25% ರಂತೆ ಒಟ್ಟು 13,150/- ರೂಪಾಯಿಗಳ ಲಂಚಕ್ಕೆ ಬೇಡಿಕೆ ಇಟ್ಟು, ಈ ಬಗ್ಗೆ ಲಂಚ ಕೊಡಲು ಮನಸ್ಸಿಲ್ಲದೇ ಫಿರ‍್ಯಾದಿದಾರರ ಮಧಾಳೆ ಆಪಾದಿತ ಅಧಿಕಾರಿಯ ಲಂಚ ಬೇಡಿಕೆಯ ಬಗ್ಗೆ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್ ಠಾಣೆ ಬೆಳಗಾವಿಯಲ್ಲಿ ಪ್ರಕರಣ ಸಂಖ್ಯೆ 01/2024 ಕಲಂ 7(ಬಿ) ಪಿಸಿ ಕಾಯ್ದೆ 1988 (ತಿದ್ದುಪಡಿ- 2018) ರಡಿಯಲ್ಲಿ ದಾಖಲಿಸಿಕೊಳ್ಳಲಾಗಿತ್ತು.
ಈ ಪ್ರಕರಣದ ಹಿನ್ನೆಲೆಯಲ್ಲಿ ಆಪಾದಿತ ಅಧಿಕಾರಿಯು ಇಂದು ದಿನಾಂಕಃ 23/01/2024 ರಂದು ತನ್ನ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆ ಬೆಳಗಾವಿಯ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ, ಪ್ರೌಢ ಶಾಲಾ ವಿಭಾಗದ ಕಾರ್ಯಾಲಯದಲ್ಲಿ ಫಿರ್ಯಾದಿಯಿಂದ ಲಂಚದ ಹಣವನ್ನು ಸ್ವೀಕರಿಸುವ ವೇಳೆ ಯಶಸ್ವಿಯಾಗಿ ಟ್ರ್ಯಾಪ್ ಮಾಡಿದ್ದು, ಸದರಿ ಉಪಪ್ರಾಚಾರ್ಯ ಹಾಗೂ ಕಾರ್ಯದರ್ಶಿಯಾಗಿರುವ ಕೆ. ಬಿ. ಹಿರೇಮಠ ಬೆಳಗಾವಿ ರವರನ್ನು ಬಂಧಿಸಿ ಜೈಲಿಗಟ್ಟಿ ಸೂಕ್ತ ಕಾನೂನು ಕ್ರಮ ಜರುಗಿಸಿದ್ದಾರೆ.

ಈ ಕಾರ್ಯಾಚರಣೆಯನ್ನು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಹನುಮಂತರಾಯ ಐಪಿಎಸ್ ಹಾಗೂ ಬಿ. ಎಸ್. ಪಾಟೀಲ ಪೊಲೀಸ್ ಉಪಾಧೀಕ್ಷಕ ಮಾರ್ಗದರ್ಶನದಲ್ಲಿ ತನಿಖಾಧಿಕಾರಿಯಾದ ಆರ್. ಎಲ್. ಧರ್ಮಟ್ಟಿ ಪೊಲೀಸ್ ಇನ್ಸ್ಪೆಕ್ಟರ್, ಅಜೀಜ್ ಕಲಾದಗಿ ಪೊಲೀಸ್ ಇನ್ಸಪೆಕ್ಟರ, ಅನ್ನಪೂರ್ಣ ಹುಲಗೂರ ಪೊಲೀಸ್ ಇನ್ಸಪೆಕ್ಟರ, ಲೋಕಾಯುಕ್ತ ಬೆಳಗಾವಿ ಹಾಗೂ ಸಿಬ್ಬಂದಿಗಳಾದ ರವಿ ಮಾವರಕರ, ಗಿರಿಶ್ ಪಾಟೀಲ, ವಿಠಲ ಬಸಕ್ರಿ, ಸಂತೋಷ ಬೆಡಗ, ಹಾಗೂ ತಂಡದವರಿಂದ ಕೈಗೊಳ್ಳಲಾಗಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ