ಬೆಳಗಾವಿ : ಬೆಲಗಾಮ ಎಜುಕೇಶನ್ ಸೊಸೈಟಿಯ ಶ್ರೀಮತಿ ಉಷಾತಾಯಿ ಗೋಗಟೆ ಬಾಲಕಿಯರ ವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರಿಗಾಗಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಅಭಿಷೇಕ್ ಅಲಾಯ್ಸ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮಧ್ವ ಆಚಾರ್ಯ ಅವರು RO Water Plant ಅನ್ನು ದೇಣಿಗೆಯಾಗಿ ನೀಡಿದ್ದಾರೆ.
ಗುರುವಾರ ಶಾಲೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು.
ಸಂಸ್ಥೆಯ ಅಧ್ಯಕ್ಷ ಅವಿನಾಶ ಪೋತದಾರ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಉಪಾಧ್ಯಕ್ಷ ಸುಧೀರ ಕುಲಕರ್ಣಿ, ಕಾರ್ಯದರ್ಶಿ ಶ್ರೀನಿವಾಸ ಶಿವಣಗಿ, ಸಹ ಕಾರ್ಯದರ್ಶಿ ಅರವಿಂದ ಹುನಗುಂದ, ಶಾಲಾ ಸುಧಾರಣಾ ಸಮಿತಿಯ ಅಧ್ಯಕ್ಷ ಚಿಂತಾಮಣಿ ಗ್ರಾಮೋಪಾಧ್ಯೆ, ಸುಹಾಸ್ ಸಾಂಗಲಿಕರ್, ಪ್ರದೀಪ ದೇಶಪಾಂಡೆ, ಶಾಲೆಯ ಮುಖ್ಯೋಪಾಧ್ಯಾಯ ಎಂ. ಕೆ. ಮಾದಾರ್, ಎಸ್. ಎನ್. ಜೋಶಿ, ಡಾ. ಸುಚೇತಾ ಕುಲಕರ್ಣಿ, ಭಾರತಿ ಜೋಶಿ ಹಾಗೂ ಶಿಕ್ಷಕ-ಶಿಕ್ಷಕಿಯರು ಉಪಸ್ಥಿತರಿದ್ದರು.
ಬೆಳಗಾವಿ ಎಜುಕೇಶನ್ ಸೊಸೈಟಿಯ ಶತಮಾನೋತ್ಸವ ಯೋಜನೆಯ ಅಂಗವಾಗಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಮುಖ್ಯೋಪಾಧ್ಯಾಯ ಎಂ. ಕೆ. ಮದಾರ್ ಅವರು ಎಲ್ಲರನ್ನು ಸ್ವಾಗತಿಸಿದರು. ಸುಲೋಚನಾ ಐವಳೆ ನಿರೂಪಿಸಿದರು. ದೀಪಾ ಸದಲಗಿ ವಂದಿಸಿದರು.
