Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BIG BREAKING ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ನಿಧನ

ಬೆಳಗಾವಿ: ನಿಪ್ಪಾಣಿಯ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಅವರು ಮಂಗಳವಾರ ತಡರಾತ್ರಿ ಬೆಳಗಾವಿಯಲ್ಲಿ ನಿಧನರಾಗಿದ್ದಾರೆ.

71 ವರ್ಷ ವಯಸ್ಸಿನ ಕಾಕಾಸಾಹೇಬ್ ಪಾಟೀಲ್ ಅವರು ನಿಪ್ಪಾಣಿ ವಿಧಾನಸಭಾ ಮತಕ್ಷೇತ್ರವನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿನಿಧಿಸುತ್ತ ಬಂದಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರು ಸೋಲು ಅನುಭವಿಸಿದ್ದರು.

1975ರಲ್ಲಿ ದೇವ ಚಂದ್ ಕಾಲೇಜಿನಲ್ಲಿ ಬಿಎ ಪದವಿ ಪೂರೈಸಿದ ಅವರು ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಾಗಿ ಹಲವು ಬಾರಿ ನಿಪ್ಪಾಣಿ ವಿಧಾನಸಭಾ ಮತಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ವತಿಯಿಂದ ಕರ್ನಾಟಕ ವಿಧಾನಸಭೆಗೆ ಆಯ್ಕೆಯಾಗುತ್ತಾ ಬಂದಿದ್ದರು. ಮರಾಠಾ ಸಮುದಾಯಕ್ಕೆ ಸೇರಿರುವ ಅವರು ತಮ್ಮ ಸಮುದಾಯದ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಹರಿದು ಬರುವಂತೆ ಶ್ರಮಿಸಿದ್ದರು. ಮರಾಠಿ ಪ್ರಭಾವದ ನಿಪ್ಪಾಣಿಯನ್ನು ಪ್ರತಿನಿಧಿಸುತ್ತಿದ್ದರೂ ಕನ್ನಡವನ್ನು ಸಹಾ ಮಾತನಾಡುತ್ತಿದ್ದರು.

1999, 2004, 2008ರಲ್ಲಿ ಮೂರು ಬಾರಿ ಅವರು ನಿಪ್ಪಾಣಿ ಮತಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು‌ ಆದರೆ ನಂತರದ ಚುನಾವಣೆಗಳಲ್ಲಿ ಅವರು ಪರಾಭವ ಅನುಭವಿಸಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ