Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜೀನಾಮೆ ಕೊಡಲ್ಲ ಎಂದು ಹಠ ಹಿಡಿದ ಮಮತಾಗೆ ಬಿಗ್ ಶಾಕ್‌ ; ಕೊನೆಗೂ ವಿಧಾನಸಭೆ ವಿಸರ್ಜಿಸಿದ ರಾಜ್ಯಪಾಲ

Advertisement

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಸಂಘರ್ಷಕ್ಕೆ ಅಂತಿಮವಾಗಿ ತೆರೆ ಬಿದ್ದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಲು ನಿರಾಕರಿಸಿದ ಬೆನ್ನಲ್ಲೇ, ರಾಜ್ಯಪಾಲ ಆರ್.ಎನ್. ರವಿ ಅವರು ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ.

ವಿಧಾನಸಭೆಯ ಐದು ವರ್ಷಗಳ ಅವಧಿಯು ಗುರುವಾರ ಮಧ್ಯರಾತ್ರಿ ಅಂತ್ಯಗೊಳ್ಳಲಿದ್ದು, ಅದಕ್ಕೂ ಮುನ್ನವೇ ರಾಜ್ಯಪಾಲರು ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ರಾಜಭವನವು ಬುಧವಾರವೇ ಸಿದ್ಧಪಡಿಸಿದ್ದ ಪತ್ರವನ್ನು ಗುರುವಾರ ಸಂಜೆ ಸಾರ್ವಜನಿಕವಾಗಿ ಬಿಡುಗಡೆ ಮಾಡಿದೆ. ಅದರಲ್ಲಿ, “ಭಾರತದ ಸಂವಿಧಾನದ ವಿಧಿ 174 (2)(ಬಿ) ಅಡಿಯಲ್ಲಿ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ, ನಾನು ಮೇ 7, 2026 ರಿಂದ ಜಾರಿಗೆ ಬರುವಂತೆ ಪಶ್ಚಿಮ ಬಂಗಾಳದ ವಿಧಾನಸಭೆಯನ್ನು ವಿಸರ್ಜಿಸುತ್ತಿದ್ದೇನೆ ಎಂದು ತಿಳಿಸಲಾಗಿದೆ.

ಮಮತಾ ಹಠ ಮತ್ತು ಸಂವಿಧಾನಾತ್ಮಕ ಬಿಕ್ಕಟ್ಟು  

ಸಾಮಾನ್ಯವಾಗಿ ಚುನಾವಣೆಯಲ್ಲಿ ಸೋತ ನಂತರ ಮುಖ್ಯಮಂತ್ರಿಗಳು ರಾಜೀನಾಮೆ ನೀಡಿ, ಹೊಸ ಸರ್ಕಾರ ಬರುವವರೆಗೆ ‘ಹಂಗಾಮಿ’ (Caretaker) ಸರ್ಕಾರವಾಗಿ ಮುಂದುವರಿಯುವುದು ಸಂಪ್ರದಾಯ. ಆದರೆ ಮಮತಾ ಬ್ಯಾನರ್ಜಿ ಅವರು, “ನಾನು ಸೋತಿಲ್ಲ, ಈ ಫಲಿತಾಂಶ ಲೂಟಿಯ ಫಲ” ಎಂದು ವಾದಿಸಿ ರಾಜೀನಾಮೆ ನೀಡಲು ನಿರಾಕರಿಸಿದ್ದರು. ಭಾರತದ ಚುನಾವಣಾ ಇತಿಹಾಸದಲ್ಲೇ ಇಂತಹ ನಡೆ ಇದೇ ಮೊದಲು ಎನ್ನಲಾಗಿದೆ.

ಭರ್ಜರಿ ಬಹುಮತದೊಂದಿಗೆ ಗೆದ್ದಿರುವ ಬಿಜೆಪಿ, ಮಮತಾ ಬ್ಯಾನರ್ಜಿ ಅವರನ್ನು ಹಂಗಾಮಿ ಮುಖ್ಯಮಂತ್ರಿಯಾಗಿಯೂ ಆಗಿಯೂ ಮುಂದುವರಿಯಲು ಬಿಡಬಾರದು, ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಒತ್ತಾಯಿಸಿತ್ತು.

ಬಿಜೆಪಿ ಶನಿವಾರದಂದು ಹೊಸ ಸರ್ಕಾರ ರಚಿಸಲು ಸಿದ್ಧತೆ ನಡೆಸಿದ್ದು, ಅಲ್ಲಿಯವರೆಗೆ ಅಧಿಕಾರ ಹಸ್ತಾಂತರದ ಪ್ರಕ್ರಿಯೆ ಹೇಗೆ ನಡೆಯಲಿದೆ ಎಂಬ ಗೊಂದಲ ಸೃಷ್ಟಿಯಾಗಿತ್ತು.

ಇದೇ ವೇಳೆ, ಮೂರು ಅವಧಿಯ ಆಡಳಿತವನ್ನು ಅಂತ್ಯಗೊಳಿಸಿದ ಚುನಾವಣಾ ಫಲಿತಾಂಶವನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರುವುದಾಗಿ ತೃಣಮೂಲ ಕಾಂಗ್ರೆಸ್ ಹೇಳಿದೆ.

ರಾಜ್ಯಪಾಲರ ಈ ನಿರ್ಧಾರದಿಂದಾಗಿ ಮಮತಾ ಬ್ಯಾನರ್ಜಿ ಅವರ ಕೊನೆಯ ಪಟ್ಟು ವಿಫಲವಾದಂತಾಗಿದೆ. ಈಗ ಎಲ್ಲರ ಗಮನ ಶನಿವಾರ ನಡೆಯಲಿರುವ ಬಿಜೆಪಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭದತ್ತ ನೆಟ್ಟಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸರಕಾರದಿಂದ ವಿಶೇಷ ಯೋಜನೆ ಮತ್ತು ಅನುದಾನ ಒದಗಿಸುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದ ಕಿರಣ್ ಜಾಧವ ಆಟೋನಗರ, ರಾಮತೀರ್ಥನಗರ ಕೈಗಾರಿಕಾ ಪ್ರದೇಶಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಿ ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ ನೀಡಿSSLC ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ : ಶಿಕ್ಷಕನಿಗೆ ಥಳಿತವಾಯುಪಡೆ ಸಿಬ್ಬಂದಿ ಪತ್ನಿಗೆ ಮತ್ತು ಬರಿಸುವ ಪಾನೀಯ ನೀಡಿ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರಕ್ಕೆ ಯತ್ನ; ಇಬ್ಬರ ಬಂಧನಇನ್ಮುಂದೆ ವೈದ್ಯರ ಚೀಟಿ ಇಲ್ಲದೇ ಕೆಮ್ಮಿನ ಔಷಧ ಮಾರಾಟ ನಿಷೇಧಮಾರಿಹಾಳ ಗ್ರಾಮದಲ್ಲಿ ಎನ್‌ಎಸ್‌ಎಸ್ ವಿಶೇಷ ಶಿಬಿರ; ಉಚಿತ ನೇತ್ರ ತಪಾಸಣೆಯಿಂದ ಗ್ರಾಮಸ್ಥರಿಗೆ ಪ್ರಯೋಜನಟೆಲಿಗ್ರಾಮ್ ನಿರ್ಬಂಧಿಸಿದ ಕೇಂದ್ರ ಸರ್ಕಾರಶರಣರು ಜನಪರವಾದ ಸಾಹಿತ್ಯಕ್ಕೆ ಒತ್ತು ನೀಡಿದರು: ಡಾ.ವಿದ್ಯಾವತಿ ಕುಂದರಗಿ* *ಮಹಾಸಭೆಯಲ್ಲಿ ಅಮವಾಸ್ಯೆ ಅನುಭಾವ ಗೋಷ್ಠಿರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ಹಣದ ತೊಂದರೆಯುದ್ದರೂ ಪರರ ಹಣ ಬೇಡವೆಂದು ಚಿಕ್ಕೋಡಿಯಲ್ಲಿ ಪ್ರಾಮಾಣಿಕತೆ ಮೆರೆದ ಕುಂದಾಪುರದ ವ್ಯಕ್ತಿ..!ಐಎಎಸ್‌ ಅಧಿಕಾರಿಗಳೂ ಸೇರಿದಂತೆ ಎಲ್ಲರ ಮೇಲೂ ‘ಎಐ’ ಕಣ್ಗಾವಲು | ಕರ್ತವ್ಯದ ಸ್ಥಳದ ಮಾಹಿತಿ ಸರ್ಕಾರಕ್ಕೆ ಲಭ್ಯ