Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಾಲೂರು ಕಾಂಗ್ರೆಸ್‌ ಶಾಸಕ ಕೆವೈ ನಂಜೇಗೌಡಗೆ ಬಿಗ್‌ ಶಾಕ್‌ ; ಆಯ್ಕೆ ಅಸಿಂಧು- ಹೈಕೋರ್ಟ್

ಬೆಂಗಳೂರು : ಕೋಲಾರ ಜಿಲ್ಲೆಯ ಮಾಲೂರು ಶಾಸಕ ಕಾಂಗ್ರೆಸ್‌ ಕೆ.ವೈ. ನಂಜೇಗೌಡ ಅವರ ಆಯ್ಕೆಯನ್ನು ಹೈಕೋರ್ಟ್‌ ಮಂಗಳವಾರ ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ. ಮುಂದಿನ ನಾಲ್ಕು ವಾರಗಳಲ್ಲಿ ಹೊಸದಾಗಿ ಮತ ಎಣಿಕೆ ನಡೆಸಿ, ಫಲಿತಾಂಶ ಪ್ರಕಟಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ (ಸಿಇಸಿ) ಹೈಕೋರ್ಟ್‌ ನಿರ್ದೇಶಿಸಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಶಾಸಕರಾಗಿ ಕೆ.ವೈ. ನಂಜೇಗೌಡ ಆಯ್ಕೆಯಾಗಿರುವುದನ್ನು ಅನೂರ್ಜಿತಗೊಳಿಸುವಂತೆ ಕೋರಿ 248 ಮತಗಳಿಂದ ಸೋತಿದ್ದ ಬಿಜೆಪಿಯ ಅಭ್ಯರ್ಥಿ ಕೆ.ಎಸ್. ಮಂಜುನಾಥ ಗೌಡ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್ ದೇವದಾಸ ಅವರಿದ್ದ ಏಕಸದಸ್ಯ ಪೀಠ ಪುರಸ್ಕರಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.

ವಿಧಾನಸಭೆ ಚುನಾವಣೆ ಮತ ಎಣಿಕೆ ವೇಳೆ ಲೋಪವಾಗಿದೆ. ಹೀಗಾಗಿ ಶಾಸಕರ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿದ್ದರು. ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್‌, ಶಾಸಕ ಕೆ.ವೈ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿ, 4 ವಾರಗಳಲ್ಲಿ ಹೈಕೋರ್ಟ್ ಮರು ಮತ ಎಣಿಕೆ ನಡೆಸಲು ಆದೇಶ ನೀಡಿದೆ. ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಂಜೇಗೌಡ ಪರ ವಕೀಲರು ಮಾಡಿದ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಈ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಒಂದು ತಿಂಗಳ ಮಟ್ಟಿಗೆ ಆದೇಶಕ್ಕೆ ತಡೆ ನೀಡಿ ಆದೇಶಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ