Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭೀಕರ ಅಪಘಾತಕ್ಕೆ ಬೈಕ್ ಸವಾರ ಬಲಿ

ಬೆಳಗಾವಿ : ಅತಿವೇಗದಲ್ಲಿ ಸಾಗುತ್ತಿದ್ದ ಟ್ರಕ್‌ ಮತ್ತು ದ್ವಿಚಕ್ರ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ. ಪೀರವಾಡಿ- ಜಾಂಬೋಟಿ ರಸ್ತೆಯ ಬಾಮನವಾಡಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ.

ಕಿಣಿಯೆ ಗ್ರಾಮದ ಸೂರಜ್ ದೀಪಕ ಪಾಟೀಲ (30)ಮೃತಪಟ್ಟಿದ್ದಾರೆ.

ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಬೆಳಗಾವಿ- ಚೋರ್ಲಾ ರಸ್ತೆಯ ಬಾಮನವಾಡಿ ಕ್ರಾಸ್ ಬಳಿ ಗೋವಾದಿಂದ ಸರಕು ಸಾಗಿಸುತ್ತಿದ್ದ ಟ್ರಕ್ ಹಾಗೂ ಬೆಳಗಾವಿಯಿಂದ ಕಿಣಿಯೇ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಮೃತ ಸೂರಜ್ ಬೈಕ್ 50 ಅಡಿ ಎತ್ತರಕ್ಕೆ ಎಸೆಯಲ್ಪಟ್ಟಿತ್ತು. ಆಗ ಟ್ರಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸಿದ ಕೂಡಲೇ ತೀವ್ರ ಗಾಯಗೊಂಡ ಸೂರಜ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಅವರು ಎಂಆರ್ ಕೆಲಸ ಮಾಡುತ್ತಿದ್ದು, ಸೂರಜ್ ಅವರು ತಂದೆ, ತಾಯಿ ಮತ್ತು ಇಬ್ಬರು ಸಹೋದರರನ್ನು ಅಗಲಿದ್ದಾರೆ. ಟ್ರಕ್ ವಾಹನದ ಚಾಲಕ ಪಾನಮತ್ತನಾಗಿದ್ದ ಎಂದು ತಿಳಿದು ಬಂದಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ