Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಧಾನ ಪರಿಷತ್ತಿನ ವಿಪಕ್ಷದ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ ಮಾಡಿದ ಬಿಜೆಪಿ

Advertisement
ಬೆಂಗಳೂರು: ವಿಧಾನಸಭೆಯಲ್ಲಿ ಪ್ರಮುಖ ವಿರೋಧ ಪಕ್ಷವಾಗಿರುವ ಬಿಜೆಪಿಯು ವಿಧಾನ ಪರಿಷತ್ತಿನ ವಿಪಕ್ಷದ ನಾಯಕರನ್ನಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಿದೆ.
ಪರಿಷತ್ ವಿಪಕ್ಷ ನಾಯನಾಗಿದ್ದ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿತ್ತು. ಈಗ ಬಿಜೆಪಿಯು ವಿಪಕ್ಷ ನಾಯಕನ ಸ್ಥಾನಕ್ಕೆ ಛಲವಾದಿ ನಾರಾಯಣ ಸ್ವಾಮಿ ಅವರನ್ನು ನೇಮಿಸಿದೆ. ವಿಪಕ್ಷ ನಾಯಕನ ಹುದ್ದೆ ರೇಸ್​ನಲ್ಲಿದ್ದ ಸಿಟಿ ರವಿ ಮತ್ತು ರವಿಕುಮಾರ ಅವರನ್ನು ಬಿಟ್ಟು ಛಲವಾದಿ ನಾರಾಯಣ ಸ್ವಾಮಿ ಅವರನ್ನು ಹೈಕಮಾಂಡ್‌ ಪರಿಗಣಿಸಿದೆ.



ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿ ಛಲವಾದಿ ನಾರಾಯಾಣಸ್ವಾಮಿಗೆ ಅಭಿನಂದನೆ ತಿಳಿಸಿದ್ದಾರೆ. ಪರಿಶಿಷ್ಟ ಸಮುದಾಯಗಳ ಹಾಗೂ ಸಾಂವಿಧಾನಿಕ ಹಕ್ಕುಗಳ ಪರ ನಿರಂತರ ದನಿಯಾಗಿ ನಿಂತು ಹೋರಾಟ ನಡೆಸಿಕೊಂಡು ಬಂದ ಛಲವಾದಿ ನಾರಾಯಣ ಸ್ವಾಮಿ ಅವರ ನಾಯಕತ್ವ ಹಾಗೂ ಪಕ್ಷ ಬದ್ಧತೆಯನ್ನು ಗುರುತಿಸಿ ವಿಧಾನ ಪರಿಷತ್ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದ ಬಿಜೆಪಿ ವರಿಷ್ಠರು ಈಗ ಅವರನ್ನು ವಿಧಾನ ಪರಿಷತ್ತಿನ ವಿಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಮೂಲಕ ‘ಸಾಮಾಜಿಕ ನ್ಯಾಯ’ ನಮ್ಮ ಪಕ್ಷದ ಆದ್ಯತೆ ಎಂಬ ಸಂದೇಶ ರವಾನಿಸಿದ್ದಾರೆ ಎಂದು ಟ್ವೀಟ್‌ ಮಾಡಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ