Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೇರಳದಲ್ಲಿ ಅರಳಿದ ಕಮಲ; ತ್ರಿಶೂರ್‌ನಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶ ಗೋಪಿ ಭರ್ಜರಿ ಜಯ

 

ತಿರುವನಂತಪುರಂ: ಕೊನೆಗೂ ಬಿಜೆಪಿಯ ಕನಸು ನನಸಾಗಿದೆ. ಕೇರಳದಲ್ಲಿ ಮೊದಲ ಬಾರಿಗೆ ಖಾತೆ ತೆರೆದಿದೆ. ತ್ರಿಶೂರ್‌ನಲ್ಲಿ ನಟ, ಬಿಜೆಪಿ ಅಭ್ಯರ್ಥಿ ಸುರೇಶ್‌ ಗೋಪಿ ಜಯ ಗಳಿಸಿದ್ದಾರೆ. ಇವರು ಕಾಂಗ್ರೆಸ್‌ನ ಕೆ. ಮುರಳೀಧರನ್‌ ಮತ್ತು ಸಿಪಿಐಯ ವಿ.ಎಸ್‌. ಸುನೀಲ್‌ ಕುಮಾರ್‌ ಅವರನ್ನು ಸೋಲಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ

ಈ ಹಿಂದಿನ ಲೋಕಸಭೆ ಚುನಾವಣೆ (2019)ಯಲ್ಲಿಯೂ ಸುರೇಶ್‌ ಗೋಪಿ ಉತ್ತಮ ಪ್ರದರ್ಶನ ತೋರಿದ್ದರು. ಶೇ. 28.19ರಷ್ಟು ಮತಗಳನ್ನು ತನ್ನದಾಗಿಸಿಕೊಂಡಿದ್ದರು. ಆ ಸಮಯದಲ್ಲಿ ಸಿಪಿಐಯ ರಾಜಾಜಿ ಮ್ಯಾಥ್ಯೂ ಥಾಮಸ್ ಶೇ. 30.85 ಮತ ಪಡೆದಿದ್ದರು. ಕಾಂಗ್ರೆಸ್‌ನ ಟಿ.ಎಸ್.ಪಾರ್ಥಪನ್ ಶೇ. 39.83ರಷ್ಟು ಮತ ಪಡೆದು ಜಯ ಗಳಿಸಿದ್ದರು. ಅವರು 4,15,089 ಮತಗಳನ್ನು ಗಳಿಸಿ 3,21,456 ಮತಗಳನ್ನು ಪಡೆದ ಸಿಪಿಐಯ ರಾಜಾಜಿ ಮ್ಯಾಥ್ಯೂ ಥಾಮಸ್ ಅವರನ್ನು ಸೋಲಿಸಿದ್ದರು.

ಸುರೇಶ್‌ ಗೋಪಿ ಹಿನ್ನೆಲೆ :
ಮಾಲಿವುಡ್‌ನ ಜನಪ್ರಿಯ ನಟರಲ್ಲಿ ಸುರೇಶ್‌ ಗೋಪಿ ಕೂಡ ಒಬ್ಬರು. 65 ವರ್ಷದ ಸುರೇಶ್ ಗೋಪಿ ಮಲಯಾಳಂ ಜತೆಗೆ ಕನ್ನಡ, ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳ ಕೆಲವು ಚಿತ್ರಗಳಲ್ಲಿಯೂ ನಟಿಸಿದ್ದಾರೆ. 1988ರಲ್ಲಿ ತೆರೆಕಂಡ ʼನ್ಯೂ ಡೆಲ್ಲಿʼ ಸಿನಿಮಾ ಮೂಲಕ ಅವರು ಸ್ಯಾಂಡಲ್‌ವುಡ್‌ಗೆ ಕಾಲಿಟ್ಟಿದ್ದರು. 1997ರಲ್ಲಿ ತೆರೆಕಂಡ ಮಲಯಾಳಂನ ʼಕಲಿಯಾಟ್ಟಂʼ ಚಿತ್ರದ ಅಭಿನಯಕ್ಕಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿದ್ದರು. ಖಡಕ್‌ ಪೊಲೀಸ್‌ ಪಾತ್ರ ಮತ್ತು ಆ್ಯಕ್ಷನ್‌ ಚಿತ್ರಗಳಿಗೆ ಅವರು ಪ್ರಸಿದ್ಧರಾಗಿದ್ದು, ರಿಯಾಲಿಟಿ ಶೋಗಳನ್ನೂ ನಡೆಸಿಕೊಟ್ಟಿದ್ದಾರೆ. ಕಾಲೇಜು ದಿನಗಳಲ್ಲಿ ಎಡ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಅವರು 2016ರಲ್ಲಿ ಅವರು ಬಿಜೆಪಿ ಸೇರ್ಪಡೆಯಾಗಿದ್ದರು. ಅಂದು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು, 2021ರಲ್ಲಿ ಕೇರಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ಇದೀಗ ಎರಡನೇ ಪ್ರಯತ್ನದಲ್ಲಿ ಗೆದ್ದು ಬೀಗಿದ್ದಾರೆ. ಸುಮಾರು 30 ಸಾವಿರ ಅಂತರದಿಂದ ಗೆದ್ದಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ