Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಖ್ಯಾತನಾಮ ವಕೀಲರಿಗೆ ಟಿಕೆಟ್ ನೀಡಿದ ಬಿಜೆಪಿ

ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 15ನೇ ಪಟ್ಟಿ ಬಿಡುಗಡೆಯಾಗಿದ್ದು, ಸಂಸದೆ ಪೂನಂ ಮಹಾಜನ್‌ಗೆ 26/11 ಮುಂಬೈ ದಾಳಿಯ ಉಗ್ರ ಅಜ್ಜಲ್‌ ಕಸಬ್‌ನನ್ನು ಗಲ್ಲಿಗೇರಿಸುವಂತೆ ಮಾಡಲು ಸರ್ಕಾರದ ಪರ ವಾದ ಮಂಡಿಸಿದ್ದ ವಕೀಲ ಉಜ್ವಲ್ ನಿಕಮ್ ಮುಂಬೈ ನಾರ್ತ್ ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಸಿದೆ. ಉಜ್ವಲ್ ನಿಕಮ್ ದೇಶದ ಅತ್ಯಂತ ಪ್ರಸಿದ್ಧ ಸರ್ಕಾರಿ ವಕೀಲರಲ್ಲಿ ಒಬ್ಬರಾಗಿದ್ದರು. ಅವರು ಭಯೋತ್ಪಾದಕ ಅಜ್ವಲ್ ಕಸಬ್‌ನನ್ನು ಗಲ್ಲಿಗೇರಿಸಲು ಸಂಬಂಧಪಟ್ಟಂತೆ ವಾದ ಮಂಡಿಸಿದ್ದು, 1993 ರ ಸರಣಿ ಬಾಂಬ್ ಸ್ಫೋಟ, ಗುಲ್ಕನ್ ಕುಮಾರ್ ಹತ್ಯೆ ಪ್ರಕರಣ ಮತ್ತು ಪ್ರಮೋದ್ ಮಹಾಜನ್ ಹತ್ಯೆಯಂಥ ಉನ್ನತ ಪ್ರಕರಣಗಳಲ್ಲಿ ಸರ್ಕಾರದ ಪರವಾಗಿ ವಾದ ಮಂಡಿಸಿದ್ದಾರೆ.

 

ದೆಹಲಿ : ಮುಂಬೈ ಉತ್ತರ ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದ ದಿ. ಪ್ರಮೋದ ಮಹಾಜನ್ ಪುತ್ರಿ ಪೂನಂ ಅವರ ಹೆಸರು ಕೈಬಿಟ್ಟ ಬಿಜೆಪಿ, 26/11 ದಾಳಿ ಪ್ರಕರಣದಲ್ಲಿ ಸರ್ಕಾರಿ ವಕೀಲರಾಗಿದ್ದ ಉಜ್ವಲ್‌ ನಿಕ್ಕಂ ಅವರನ್ನು ಕಣಕ್ಕಿಳಿಸುತ್ತಿರುವುದಾಗಿ ಘೋಷಿಸಿದೆ.

ಮುಂಬೈ ಮೇಲೆ 2011ರಲ್ಲಿ ನಡೆದ ದಾಳಿಯ ಪ್ರಕರಣದಲ್ಲಿ ನಿಕ್ಕಂ ಅವರು ಸರ್ಕಾರಿ ವಕೀಲರಾಗಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದರು. ಮತ್ತೊಂದೆಡೆ ಪೂನಂ ಮಹಾಜನ್ ಅವರು 2014ರಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿದ್ದರು. ಅವರು ಬಿಜೆಪಿ ಯುವ ಘಟಕದ ಮಾಜಿ ಅಧ್ಯಕ್ಷರೂ ಹೌದು.

ಆದರೆ ಪಕ್ಷದ ಸಂಘಟನಾ ವಲಯದಿಂದ ವ್ಯಕ್ತವಾದ ಅಭಿಪ್ರಾಯಗಳನ್ನು ದಾಖಲಿಸಿ, ಪೂನಂ ಅವರ ಹೆಸರನ್ನು ಕೈಬಿಡಲಾಗಿದೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.

ಆದರೆ, ಮಹಾಜನ್ ಅವರ ಹೆಸರನ್ನು ಕೈಬಿಡುವ ಯೋಜನೆ ಪಕ್ಷಕ್ಕೆ ಮೊದಲೇ ಇತ್ತು. ಸೂಕ್ತ ಅಭ್ಯರ್ಥಿಯ ಹುಡುಕಾಟ ನಡೆಯುತ್ತಿತ್ತು. ನಿಕ್ಕಂ ಅವರು ಒಪ್ಪಿದ್ದರಿಂದ ಪೂನಂ ಹೆಸರು ಕೈಬಿಡಲಾಗಿದೆ ಎಂದು ಮೂಲಗಳು ಹೇಳಿರುವುದಾಗಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇದೇ ಕ್ಷೇತ್ರಕ್ಕೆ ಧಾರಾವಿ ಶಾಸಕಿ ವರ್ಷಾ ಗಾಯಕ್ವಾಡ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಲೋಕಸಭಾ ಚುನಾವಣೆಯ 5ನೇ ಹಂತದಲ್ಲಿ ಮೇ 20ರಂದು ಇಲ್ಲಿ ಮತದಾನ ನಡೆಯಲಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ