Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BJP ಬೆಳಗಾವಿ ಗ್ರಾಮಾಂತರ ಜಿಲ್ಲೆಯ ನೂತನ ಕಾರ್ಯಾಲಯ ಉದ್ಘಾಟನೆ

ಬೆಳಗಾವಿ : ನಗರದ ಧರ್ಮನಾಥ ಭವನದ ಹತ್ತಿರ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ನೂತನ ಕಾರ್ಯಾಲಯವನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಉದ್ಘಾಟಿಸಿದರು.

ನಂತರ ಮಾತನಾಡಿ, ನೂತನವಾದ ಕಾರ್ಯಾಲಯ ನಮ್ಮ ಕಾರ್ಯಕರ್ತರಿಗೆ ಸಭೆ ಹಾಗೂ ಪಕ್ಷದ ಕಾರ್ಯಕ್ರಮವನ್ನು ಮಾಡಲು ಅನುಕೂಲಕರವಾಗಲಿದೆ. ಈ ಕಾರ್ಯಾಲಯಕ್ಕೆ ವಾರಕ್ಕೊಮ್ಮೆ ಒಂದು ದಿನ ನಾನು ಭೇಟಿ ನೀಡಿ ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸುತ್ತೇನೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭ್ರಷ್ಟಾಚಾರ ಪ್ರಕರಣದಲ್ಲಿ ಗೌರವಾನ್ವಿತ ರಾಜ್ಯಪಾಲರು ವಿಚಾರಣೆಗೆ ಅವಕಾಶ ಕೊಟ್ಟಿದ್ದು, ಅದನ್ನು ಸಿದ್ದರಾಮಯ್ಯನವರು ಬಹಳ ನೈತಿಕವಾಗಿ ಪರಿಗಣಿಸಿ ರಾಜೀನಾಮೆ ಕೊಡಬೇಕು ಎಂದು ಹೇಳಿದರು.

ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿ, ಮುಂಬರುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾತನಾಡಿ
ಹಿಂದೆ ಇಂಥದ್ದೇ ಪ್ರಕರಣದಲ್ಲಿ ಸಿದ್ದರಾಮ್ಯನವರು ಮಾನ್ಯ ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜೀನಾಮೆಗೆ ಒತ್ತಾಯ ಮಾಡಿದ್ದು ಸತ್ಯ. 4 ದಶಕಗಳ ಕಾಲ ಸಾರ್ವಜನಿಕ ಜೀವನ ಮಾಡಿದ ಸಿದ್ದರಾಮ್ಯನವರು, ತಾವು ಪರಿಶುದ್ಧರು ಎಂದು ತಮಗೆ ತಾವೇ ಅಫಿಡವಿಟ್ ಹಾಕಿಕೊಂಡು ಅನೇಕ ಸಂದರ್ಭಗಳಲ್ಲಿ ಅವರ ಮೇಲೆ ಬಂದ ಎಲ್ಲ ಆರೋಪಗಳನ್ನು ಲೋಕಾಯುಕ್ತ ಮುಂದಿದ್ದ 106 ಕೇಸುಗಳಲ್ಲಿ 65 ಪ್ರಕರಣಗಳಲ್ಲಿ ಅವರೇ ಅವುಗಳಿಗೆ ಬಿ ರಿಪೋರ್ಟ್ ಹಾಕಿಸಿಕೊಂಡಿದ್ದರು. ಚಳವಳಿ ರೂಪದಲ್ಲಿ ನಡೆಯುತ್ತಿದ್ದ ಲೋಕಾಯುಕ್ತವನ್ನು (ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ನ್ಯಾ. ವೆಂಕಟಾಚಲಯ್ಯ ಮೊದಲಾದವರ ನೇತೃತ್ವ) ಆ ಸಂಸ್ಥೆಯನ್ನೇ ಮುಚ್ಚಿಸಲು ಕಾರಣರಾಗಿದ್ದರು ಎಂದು ಆರೋಪಿಸಿದರು.

ಮಾಜಿ ಸಂಸದೆ ಮಂಗಳಾ ಅಂಗಡಿ, ಮಾಜಿ ಸಚಿವ ಶ್ರೀಮಂತ ಪಾಟೀಲ, ಮಾಜಿ ಶಾಸಕರಾದ ಸಂಜಯ್ಲ ಪಾಟೀಲ, ಜಗದೀಶ ಮೆಟಗುಡ್, ವಿ. ಐ ಪಾಟೀಲ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಅನಿಲ್ ಬೆನಕೆ, ಬಿಜೆಪಿ ರಾಷ್ಟ್ರೀಯ ಓಬಿಸಿ ಮೋರ್ಚಾ ಕಾರ್ಯಕಾರಣಿ ಸದಸ್ಯ ಲಕ್ಷ್ಮಣ ತಪಸಿ, ಎಂ.ಬಿ ಜಿರಲಿ, ಬಸವರಾಜ್ ಯಂಕಂಚಿ, ವಿರೂಪಾಕ್ಷ ಮಾಮನಿ, ಬಸವರಾಜ್ ಹುಂದ್ರಿ, ಎಫ್.ಎಸ್ ಸಿದ್ದನಗೌಡ್ರ, ಶಕೀಲಾ ದಾರವಾಡೇಕರ್, ಡಾ. ರಾಜಶೇಖರ್ ನೇರ್ಲಿ ಹಾಗೂ ಬೆಳಗಾವಿಯ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ