Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಜೆಪಿ ಜನರನ್ನು ಫೂಲ್ ಮಾಡುತ್ತಿದೆ

 

ಬೆಂಗಳೂರು :
ಬಿಜೆಪಿ ಸರ್ಕಾರ ರಾಜ್ಯದ ಜನರನ್ನು ಫೂಲ್ ಮಾಡುತ್ತಲೇ ಬಂದಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ ಇದು.

ಬಿಜೆಪಿ ಸರ್ಕಾರ ರಾಜ್ಯದ ಜನರನ್ನು ಫೂಲ್ ಮಾಡುತ್ತಲೇ ಬಂದಿದೆ. ದುಡಿಯುವ ಮಹಿಳೆಯರಿಗೆ ಉಚಿತ ಬಸ್ ಪಾಸ್ ಮಾತ್ರವಲ್ಲ, ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿದ್ದ ಅಷ್ಟೂ ಭರವಸೆಗಳು ರಾಜ್ಯದ ಜನರನ್ನು ಮೂರ್ಖರನ್ನಾಗಿ ಮಾಡುವ ಪ್ರಯತ್ನ ಎಂದು ಹೇಳಿದರು.

ಬೋವಿ ಸಮಾಜದವರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಲಾಗುವುದು ಎಂದು ಚುನಾವಣೆ ಸಮಯದಲ್ಲಿ ಭರವಸೆ ನೀಡಿದ್ದರು. ಆದರೆ ಮಾಡಲಿಲ್ಲ. ಈ ಕಾರಣಕ್ಕೆ ಬಾಬುರಾವ್ ಚಿಂಚನಸೂರ್ ಅವರು ಬಿಜೆಪಿಯಲ್ಲಿ ನ್ಯಾಯ ಸಿಗುವುದಿಲ್ಲ ಎಂದು ಮತ್ತೆ ನಮ್ಮ ಪಕ್ಷಕ್ಕೆ ಮರಳಿದ್ದಾರೆ. ಇನ್ನು ಒಕ್ಕಲಿಗರು ಹಾಗೂ ಲಿಂಗಾಯತರು ಕೂಡ ಕ್ರಮವಾಗಿ 12% ಹಾಗೂ 15% ಮೀಸಲಾತಿ ಹೆಚ್ಚಳಕ್ಕೆ ಆಗ್ರಹ ಮಾಡಿದ್ದು, ಕೇವಲ 2% ನೀಡುವುದಾಗಿ ಸರಕಾರ ಹೇಳಿದೆ. ಅಲ್ಪಸಂಖ್ಯಾತರ ಮೀಸಲಾತಿ ಕಿತ್ತು ಬೇರೆಯವರಿಗೆ ಕೊಟ್ಟಿದ್ದಾರೆ. 2 % ಮೀಸಲಾತಿ ಹೆಚ್ಚಳ ನಾವು ಒಪ್ಪುವುದಿಲ್ಲ. ನಮಗೆ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಕೊಡಬೇಕು. ಹೀಗಾಗಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಆದೇಶ ವಜಾ ಮಾಡಲಿದೆ.

ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಮಾಡಿರುವ ಮೀಸಲಾತಿ ಹೆಚ್ಚಳ ಕಾನೂನು ಸಂವಿಧಾನದ 9 ನೇ ಶೆಡ್ಯೂಲ್ ಗೆ ಸೇರಿಸಿಲ್ಲ. ಇವರು ಯಾವುದನ್ನು ಕಾನೂನು ಪ್ರಕಾರ ಮಾಡಿಲ್ಲ.

ಮಾಜಿ ಮುಖ್ಯಮಂತ್ರಿ ಕ್ಷೇತ್ರದಲ್ಲಿ ಜನ ಗಲಾಟೆ ಮಾಡುತ್ತಿದ್ದಾರೆ ಎಂದರೆ ಸರ್ಕಾರದ ಈ ನಿರ್ಧಾರ ಜನರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಅರ್ಥ. ಸರ್ಕಾರ ಇತ್ತೀಚೆಗೆ ತೆಗೆದುಕೊಂಡಿರುವ ಎಲ್ಲಾ ನಿರ್ಧಾರಗಳು ಜನರನ್ನು ಮೂರ್ಖರನ್ನಾಗಿಸುವ ಕ್ರಮ. ಇದರ ಪರಿಣಾಮ ಮುಂದಿನ ಚುನಾವಣೆಯಲ್ಲಿ ತಿಳಿಯಲಿದೆ. ಜನ ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಈ ಸರ್ಕಾರದ ತಪ್ಪುಗಳನ್ನು ನಮ್ಮ ಸರ್ಕಾರ ಸರಿಪಡಿಸಿ, ಎಲ್ಲರಿಗೂ ನ್ಯಾಯ ಒದಗಿಸಲಿದೆ.

ಸಿಇಸಿ ಸಭೆ ಯಾವಾಗ, 2ನೇ ಪಟ್ಟಿ ಯಾವಾಗ ಪ್ರಕಟವಾಗಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, 'ಏಪ್ರಿಲ್ 4 ರಂದು ಸಿಇಸಿ ಸಭೆ ನಡೆಯಲಿದ್ದು, ನಾವು ದೆಹಲಿಗೆ ತೆರಳುತ್ತೇವೆ. 2ನೇ ಪಟ್ಟಿಯನ್ನು ನಾನು ಪ್ರಕಟಿಸುವುದಿಲ್ಲ. ಸಭೆಯಲ್ಲಿ ಚರ್ಚೆ ಮಾಡಿ ಮಲ್ಲಿಕಾರ್ಜುನ ಖರ್ಗೆ ಅವರು ತೀರ್ಮಾನ ಮಾಡಲಿದ್ದಾರೆ' ಎಂದು ತಿಳಿಸಿದರು.

ಕೆಲವು ಕಡೆ ಗೊಂದಲ, ಸಾಮೂಹಿಕ ರಾಜೀನಾಮೆ ಕೊಡುವ ಬಗ್ಗೆ ಕೇಳಿದಾಗ, 'ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಯಾವುದೇ ಗೊಂದಲ ಇಲ್ಲ. ಬೇರೆ ಪಕ್ಷಗಳಲ್ಲಿ ಬೆದರಿಕೆ ತಂತ್ರ ನಡೆಯಬಹುದು, ಕಾಂಗ್ರೆಸ್ ಪಕ್ಷದಲ್ಲಿ ನಡೆಯುವುದಿಲ್ಲ. ಬಿಜೆಪಿಯಲ್ಲಿ ಬೆದರಿಕೆ ಇಲ್ಲವೇ? ಅವರು ಪಟ್ಟಿ ಪ್ರಕಟಿಸದಿರುವುದೇಕೆ? ದಿನಾಂಕ ಮುಂದೂಡುತ್ತಿರುವುದೇಕೆ? ಅವರ ಪಕ್ಷದಲ್ಲಿ ಆಂತರಿಕ ಸಮಸ್ಯೆ ಇದೆ. ಜೆಡಿಎಸ್ ನಲ್ಲೂ ಆಂತರಿಕ ಸಮಸ್ಯೆ ಇದೇ ಕಾರಣಕ್ಕೆ ಅನೇಕ ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಬಿಜೆಪಿಯನ್ನು ಜನ ತಿರಸ್ಕರಿಸಲಿದ್ದಾರೆ' ಎಂದು ತಿಳಿಸಿದರು.

ವಲಸಿಗ ಸಚಿವರು ಕಾಂಗ್ರೆಸ್ ಸೇರುತ್ತಾರಾ ಎಂಬ ಪ್ರಶ್ನೆಗೆ, 'ಅವರ ಪಕ್ಷದಲ್ಲಿ ಅವರು ಏನಾದರೂ ಮಾಡಿಕೊಳ್ಳಲಿ' ಎಂದು ತಿಳಿಸಿದರು.

ಸಚಿವ ಮುನಿರತ್ನ ಅವರ ಹೊಡೀರಿ ಬಡೀರಿ ಹೇಳಿಕೆ ಬಗ್ಗೆ ಕೇಳಿದಾಗ, 'ಕಾಂಗ್ರೆಸ್ ಪಕ್ಷದಿಂದ ಯಾರೇ ಮತ ಕೇಳಲು ಬಂದರೂ ಹೊಡೆದು ಓಡಿಸಿ ಎಂದು ಹೇಳಿದ್ದಾರೆ. ಈ ಬಗ್ಗೆ ಸಂಸದರು ದೂರು ನೀಡಿದ್ದು, ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ ನೋಡೋಣ' ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸಬೇಕು ಎಂದು ಸರ್ಜೇವಾಲ ಅವರ ಭಾಷಣಕ್ಕೆ ಅಡ್ಡಿ ಮಾಡಿದ ಬಗ್ಗೆ ಹಾಗೂ ಸಿದ್ದರಾಮಯ್ಯ ಅವರು 2 ಕಡೆ ಸ್ಪರ್ಧೆಗೆ ಟಿಕೆಟ್ ಕೇಳಿರುವ ಬಗ್ಗೆ ಪ್ರಶ್ನಿಸಿದಾಗ, 'ಕೇಳುವವರನ್ನು ಬೇಡ ಎನ್ನಲು ಸಾಧ್ಯವೇ? ನೀವು ಕೂಡ ಕೇಳಬಹುದು. ಅಭಿಮಾನಿಗಳು ಬಹಳ ಆಸೆಯಿಂದ ಕೇಳುತ್ತಾರೆ. ಅದರಲ್ಲಿ ತಪ್ಪಿಲ್ಲ. ಅಂತಿಮವಾಗಿ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ' ಎಂದು ತಿಳಿಸಿದರು.

ವಿಜಯೇಂದ್ರ ವರುಣಾದಿಂದ ಸ್ಪರ್ಧಿಸಲ್ಲ ಎಂಬ ಯಡಿಯೂರಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, 'ಯಡಿಯೂರಪ್ಪ ಅವರು ಬಿಜೆಪಿ ಸುದ್ದಿ ಮಾತನಾಡುತ್ತಾರೆ. ನಾನು ಕಾಂಗ್ರೆಸ್ ಪಕ್ಷದ ಸುದ್ದಿ ಮಾತ್ರ ಮಾತನಾಡುತ್ತೇನೆ' ಎಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ