Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕಾಂಗ್ರೆಸ್ಸಿನ 50 ಮಂದಿ ಶಾಸಕರಿಗೆ ತಲಾ 50 ಕೋಟಿ ಆಫರ್ ನೀಡಿ ಖರೀದಿಸಲು ಬಿಜೆಪಿ ಪ್ಲ್ಯಾನ್

ಟಿ.ನರಸೀಪುರ : ED, CBI, IT ಹಾಗೂ ರಾಜ್ಯಪಾಲರನ್ನು ದುರುಪಯೋಗ ಪಡಿಸಿಕೊಂಡು ಆಟ ಆಡ್ತೀರಾ?

ಅರವಿಂದ್ ಕೇಜ್ರಿವಾಲ್ ಆಯ್ತು. ಈಗ ನನ್ನ ಮತ್ತು ನನ್ನ ಪತ್ನಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿನ 470 ಕೋಟಿ ರೂಪಾಯಿ ಮೌಲ್ಯದ ಕಾಮಗಾರಿಗಳ ಉದ್ಘಾಟನೆ ಮತ್ತು ಕಟ್ಟಡಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ಫಲಾನುಭವಿಗಳಿಗೆ ನೇರವಾಗಿ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ನಾನು ನೆನ್ನೆ ಮೊನ್ನೆ ಮಂತ್ರಿಯಾದವನಲ್ಲ. 40 ವರ್ಷದಿಂದ ಮಂತ್ರಿಯಾಗಿದ್ದೀನಿ: ಸುಳ್ಳು ಕೇಸಲ್ಲಿ ನನ್ನನ್ನು, ನನ್ನ ಧರ್ಮಪತ್ನಿಯನ್ನು ಎಳೀತೀರಾ? ರಾಜ್ಯದ ಜನರೇನು ಮೂರ್ಖರಾ. ರಾಜ್ಯದ ಜನ‌ರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನಾನು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಷಡ್ಯಂತ್ರಗಳಿಗೆ ಜಗ್ಗಲ್ಲ, ಬಗ್ಗಲ್ಲ. ನೀವೂ ಕೂಡ ಸುಖಾ ಸುಮ್ಮನೆ ತಂಟೆಗೆ ಬಂದರೆ ಸುಮ್ಮನಿರಲ್ಲ ಎನ್ನುವ ಎಚ್ಚರಿಕೆ ಕೊಡಬೇಕಿದೆ ಎಂದು ಕರೆ ನೀಡಿದರು.

ಬಿಜೆಪಿ ಇವತ್ತಿನವರೆಗೂ ರಾಜ್ಯದಲ್ಲಿ ಸ್ವಂತ ಶಕ್ತಿಯಿಂದ ಒಂದು ಬಾರಿಯೂ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಮಾತ್ರ ಅಧಿಕಾರಕ್ಕೆ ಬಂದಿದೆ. ಈ ಬಾರಿ ಕಾಂಗ್ರೆಸ್ಸಿನ 50 ಮಂದಿ ಶಾಸಕರಿಗೆ ತಲಾ 50 ಕೋಟಿ ಆಫರ್ ನೀಡಿ ಖರೀದಿಸಲು ಯತ್ನಿಸಿದ್ದಾರೆ. ಎಲ್ಲಿಂದ ಬರತ್ತೆ ಈ ಹಣ? ಯಡಿಯೂರಪ್ಪ, ಬೊಮ್ಮಾಯಿ, ಆರ್.ಅಶೋಕ್ ಪ್ರಿಂಟ್ ಹಾಕಿದ್ದಾ ಈ ಹಣ? ರಾಜ್ಯವನ್ನು ಲೂಟಿ ಹೊಡೆದ ಹಣ ತಾನೇ. ಆದರೆ ನಮ್ಮ ಶಾಸಕರು ಇವರ ಆಮಿಷಕ್ಕೆ ಒಳಗಾಗಲಿಲ್ಲ ಎಂದರು.

*ಬಿಜೆಪಿಯವರು ಗ್ಯಾರಂಟಿಯ ಹಣ ತಗೊತಾ ಇಲ್ವಾ? ಎದೆ ಮುಟ್ಟಿಕೊಂಡು ಹೇಳಲಿ

ರಾಜ್ಯದಲ್ಲಿ ನಮ್ಮ ಐದೂ ಗ್ಯಾರಂಟಿಗಳು ಯಶಸ್ವೀ ಜಾರಿ ಆದ ಬಳಿಕ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಭಯಾನಕ ಸುಳ್ಳುಗಳನ್ನು ಹೊಸೆಯುತ್ತಿದ್ದಾರೆ.
ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಹಸಿ ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಗ್ಯಾರಂಟಿಗಳಿಗಾಗಿ 56 ಸಾವಿರ ಕೋಟಿ ರೂಪಾಯಿ ಕೊಟ್ಟರೆ, ಅಭಿವೃದ್ಧಿ ಕಾರ್ಯಗಳಿಗೆ 1 ಲಕ್ಷದ 20 ಸಾವಿರ ಕೋಟಿ ರೂಪಾಯಿ ನೀಡಿದೆ.‌ ಇಂದು ನರಸೀಪುರದಲ್ಲಿ 470 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ದೊರೆತಿದೆ. ಬಿಜೆಪಿಯ ಸುಳ್ಳುಗಳಿಗೆ ಇವತ್ತಿನ ಅಭಿವೃದ್ಧಿ ಕಾರ್ಯಕ್ರಮ ಕನ್ನಡಿ ಹಿಡಿದಿದೆ ಎಂದರು.

ಹೋಗಲಿ ಈ ಬಿಜೆಪಿಯವರಿಗೆ ನಾನು ನೇರವಾಗಿ ಒಂದು ಪ್ರಶ್ನೆ ಕೇಳ್ತೀನಿ. ರಾಜ್ಯದಲ್ಲಿ ಬಿಜೆಪಿಯವರು ನಮ್ಮ ಗ್ಯಾರಂಟಿಗಳ ಫಲಾನುಭವಿಗಳಲ್ಲವಾ? ಬಿಜೆಪಿಯವರು ಉಚಿತವಾಗಿ ಬಸ್ಸಲ್ಲಿ ಓಡಾಡುತ್ತಿಲ್ಲವಾ? ಬಿಜೆಪಿಯವರು ಉಚಿತ ವಿದ್ಯುತ್ ಪಡೆಯುತ್ತಿಲ್ಲವಾ ? ಬಿಜೆಪಿಯವರು ಗೃಹಲಕ್ಷ್ಮಿ ಹಣ ಪಡೆಯುತ್ತಿಲ್ಲವಾ? ಇಲ್ಲಾ, ನಾವು ತಗೊತಾ ಇಲ್ಲ ಅಂತ ಬಿಜೆಪಿಯವರು ಎದೆ ಮುಟ್ಟಿಕೊಂಡು ಹೇಳಲಿ ನೋಡೋಣ ಎಂದು ಸವಾಲೆಸೆದ ಸಿಎಂ, ರಾಜ್ಯ ಸರ್ಕಾರದ ಗ್ಯಾರಂಟಿ ಫಲಾನುಭವಿಗಳನ್ನು ಅವಮಾನಿಸಿ, ಅಪಪ್ರಚಾರ ಮಾಡುವುದನ್ನು ನಿಲ್ಲಿಸದಿದ್ದರೆ ಕೋಟಿ ಕೋಟಿ ಫಲಾನುಭವಿಗಳು ನಿಮಗೆ ಸರಿಯಾದ ಪಾಠ ಕಲಿಸ್ತಾರೆ ಎಂದು ಎಚ್ಚರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಸಂಸದ ಸುನಿಲ್ ಬೋಸ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ಡಾ.ತಿಮ್ಮಯ್ಯ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಹಲವು ಪ್ರಮುಖರು ಉಪಸ್ಥಿತರಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಕಲಗಿ ಪಟ್ಟಣದಲ್ಲಿ ವಿಜಯ ದಶಮಿ ನಿಮಿತ್ತ ಶ್ರೀ ಮಹಾಲಕ್ಷ್ಮೀ ದೇವಿ ಅಗ್ನಿ ಹಾಯುವ ಕಾರ್ಯಕ್ರಮ.ಮಾರ್ಕಂಡೇಯ ನದಿಯಲ್ಲಿ  ಮರ್ಡರ್..?ಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerನೀಲಿ ಡ್ರಮ್ ಕೊಲೆ ಪ್ರಕರಣ : ಪತ್ನಿ ಮುಸ್ಕಾನ್‌, ಪ್ರಿಯಕರ ಸಾಹಿಲ್‌ಗೆ ಮರಣದಂಡನೆ ಶಿಕ್ಷೆRCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರು