Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೋದಿ ಕರೆ ತಂದು ಭರ್ಜರಿ ಪ್ರಚಾರಕ್ಕೆ ಬಿಜೆಪಿ ಪ್ಲಾನ್ !

 

ದೆಹಲಿ :
ಕರ್ನಾಟಕದಲ್ಲಿ ಸದ್ಯ ಬಿಜೆಪಿ ಆಡಳಿತ ಇದ್ದರೂ ಮತ್ತೆ ಚುನಾವಣೆ ಗೆಲ್ಲಲು ಆಡಳಿತ ವಿರೋಧಿ ಅಲೆ ಕಂಡುಬಂದಿದ್ದು ಹಲವು ಸಮೀಕ್ಷೆಗಳು ಬಿಜೆಪಿ ಪಾಲಿಗೆ ಹಿನ್ನಡೆಯಾಗುವ ಅಂಶಗಳನ್ನು ಈಗಾಗಲೇ ಸಮೀಕ್ಷೆಗಳ ಮೂಲಕ ನುಡಿದಿವೆ. ಈ ಹಿನ್ನಲೆಯಲ್ಲಿ ಬಿಜೆಪಿ ತನ್ನ ವರ್ಚಸ್ವಿ ನಾಯಕರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಕ್ಕೆ ಮೇಲಿಂದ ಮೇಲೆ ಕರೆತಂದು ಭರ್ಜರಿ ಪ್ರಚಾರ ನಡೆಸಿ ಮತ್ತೆ ಬಿಜೆಪಿಗೆ ಅಧಿಕಾರ ತಂದುಕೊಡಲು ಅಗತ್ಯ ತಯಾರಿ ಮಾಡುತ್ತಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗೆದ್ದೇ ಗೆಲ್ಲಬೇಕು ಎಂಬ ಛಲ ತೊಟ್ಟಿರುವ ಬಿಜೆಪಿ ತನ್ನ ವರ್ಚಸ್ವಿ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊನೆಯ ಅಸ್ತ್ರವಾಗಿ ಕರೆತರಲು ಮುಂದಾಗಿದೆ.

ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ 20 ಕ್ಕೂ ಹೆಚ್ಚು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿಯ ಚುನಾವಣಾ ಅಖಾಡದಲ್ಲಿ ನಂಬರ್ ಒನ್ ಸ್ಟಾರ್ ಪ್ರಚಾರಕರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸನ್ನು ವ್ಯಾಪಕ ಪ್ರಮಾಣದಲ್ಲಿ ಬಳಸಿಕೊಳ್ಳಲು ಬಿಜೆಪಿ ಮುಂದಾಗಿದೆ. ಮೇ 10 ರಂದು ಕರ್ನಾಟಕ ವಿಧಾನಸಭೆಯ ಅತ್ಯಂತ ಮಹತ್ವದ ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದೆ. ಈ ಕಾರಣಕ್ಕೆ ಮೇ 6 ರಿಂದ 8 ರವರೆಗೆ ಪ್ರಧಾನಿಯವರು ಕರ್ನಾಟಕ ರಾಜ್ಯದಲ್ಲಿ ಮೊಕ್ಕಾಂ ಹೂಡಿ ಭಾರೀ ಪ್ರಚಾರ ನಡೆಸುವ ಸಾಧ್ಯತೆಗಳು ಗೋಚರವಾಗಿವೆ. ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಆಡಳಿತರೂಢ ಬಿಜೆಪಿ ಕರ್ನಾಟಕ ಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸುವ ಸಾಧ್ಯತೆ ಇದೆ. ಜೊತೆಗೆ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಯನ್ನು ಅನೇಕ ಸಮೀಕ್ಷೆಗಳು ನುಡಿದಿವೆ.

ಮೋದಿ ಅವರು ಮಾಡಲಿರುವ ಮ್ಯಾಜಿಕ್ ನಿಂದ ಮಾತ್ರ ಕರ್ನಾಟಕವನ್ನು ಬಿಜೆಪಿ ಹಿಡಿತಕ್ಕೆ ಮತ್ತೆ ತರಲು ಸಾಧ್ಯ ಎಂದು ಒಟ್ಟಾರೆ ಕಮಲ ಪಕ್ಷ ಬಲವಾಗಿ ನಂಬಿದೆ. ರಾಜ್ಯದ ವಿವಿಧಡೆ ಪ್ರಧಾನಿಯವರ ಹತ್ತು ಹಲವು ಸಮಾವೇಶಗಳನ್ನು ನಡೆಸಲು ಪಕ್ಷ ಸಿದ್ಧತೆ ನಡೆಸಿದೆ. ಹೈದರಾಬಾದ್ ಕರ್ನಾಟಕ ಭಾಗದಲ್ಲಿ 40 ವಿಧಾನಸಭಾ ಮತಕ್ಷೇತ್ರಗಳಿದ್ದು ಆ ಭಾಗದಲ್ಲಿ ಪ್ರಧಾನಿಯವರು ಹೆಚ್ಚು ಹೆಚ್ಚು ಸಮಾವೇಶ ನಡೆಸುವ ಸಾಧ್ಯತೆ ಬಹುತೇಕ ಕಂಡು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಈಗಾಗಲೇ ಏಳು ಸಮಾವೇಶಗಳನ್ನು ನಡೆಸಿದ್ದಾರೆ. ಬೆಳಗಾವಿ, ಹುಬ್ಬಳ್ಳಿ, ಮಂಡ್ಯ, ದಾವಣಗೆರೆ ಮುಂತಾದ ಕಡೆಗಳಲ್ಲಿ ಸಮಾವೇಶ ನಡೆಸಿದ್ದಾರೆ. ಆದರೆ ಚುನಾವಣೆ ಹತ್ತಿರವಾದಂತೆ ರಾಜ್ಯಕ್ಕೆ ಮೋದಿಯವರನ್ನು ಕರೆತಂದು ಭರ್ಜರಿ ಪ್ರಚಾರ ನಡೆಸುವ ಮೂಲಕ ಕಳೆಗುಂದಿರುವ ಬಿಜೆಪಿಗೆ ಚೈತನ್ಯ ನೀಡಲು ಮುಂದಾಗಿರುವುದು ಎದ್ದುಕೊಂಡಿದೆ. ಆಡಳಿತರೂಢ ಬಸವರಾಜ ಬೊಮ್ಮಾಯಿ ಸರಕಾರದ ಹಲವರ ವಿರುದ್ಧ ಭ್ರಷ್ಟಾಚಾರದ ಆರೋಪ ದೊಡ್ಡ ಪ್ರಮಾಣದಲ್ಲಿ ಕೇಳಿ ಬಂದಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಡಳಿತ ವಿರೋಧಿ ಅಲೆ ಬಹುದೊಡ್ಡ ಮಟ್ಟದಲ್ಲಿ ಕೇಳಿ ಬರುತ್ತಿದ್ದು ಇದನ್ನು ತೆರೆಯ ಮರೆಗೆ ಸರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಆಡಳಿತದ ಕಲ್ಪನೆ ಅಗತ್ಯ. ಈ ನಿಟ್ಟಿನಲ್ಲಿ ಪ್ರಧಾನಿ ಅವರನ್ನು ಕರೆತಂದು ಬಿಜೆಪಿಯ ಅಭಿವೃದ್ಧಿ ಕಾರ್ಯಗಳನ್ನು ಪ್ರಸ್ತಾಪಿಸಿ ಸಮಾವೇಶ ನಡೆಸುವುದು ಬಿಜೆಪಿಯ ಪಡಸಾಲೆಯಲ್ಲಿ ಚರ್ಚಿತವಾಗಿದೆ.

ಮೋದಿ ಅವರು ಕರ್ನಾಟಕಕ್ಕೆ ಮೇಲಿಂದ ಮೇಲೆ ಆಗಮಿಸಿ ಭರ್ಜರಿ ಪ್ರಚಾರ ನಡೆಸುವ ಸಾಧ್ಯತೆ ಕಂಡು ಬಂದಿದ್ದು ಮೋದಿ ಅವರ ಅಭಿಮಾನಿಗಳಿಗೆ ಸಂತಸ ಸುದ್ದಿಯಾಗಿದೆ.

ಆಡಳಿತ ವಿರೋಧಿ ಅಲೆಯನ್ನು ಹಿಮ್ಮೆಟ್ಟಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯವಿದೆ ಎಂದು ನಂಬಿರುವ ಬಿಜೆಪಿ ಪಾಲಿಗೆ ಇದೀಗ ಮೋದಿ ಒಬ್ಬರೇ ಆಶಾಕಿರಣದಂತೆ ಗೋಚರವಾಗಿದ್ದಾರೆ. ಮೋದಿ ಭಾಷಣ ಕೇಳಲು ಕರುನಾಡಿನ ಬಿಜೆಪಿ ಕಾರ್ಯಕರ್ತರು ತುದಿಗಾಲಲ್ಲಿ ನಿಂತಿದ್ದಾರೆ.
ಸದ್ಯ ದಕ್ಷಿಣ ಭಾರತದ ಬಿಜೆಪಿ ಭದ್ರಕೋಟೆ ಎಂದೇ ಗುರುತಿಸಲ್ಪಟ್ಟಿರುವ ಕರ್ನಾಟಕದ ಅತ್ಯಂತ ಮಹತ್ವದ ಚುನಾವಣೆ ಗೆಲ್ಲಲು ಬಿಜೆಪಿ ಗಮನಹರಿಸಿದ್ದು ಮೋದಿ ಎಂಬ ಬ್ರಹ್ಮಾಸ್ತ್ರದ ಮೂಲಕ ತನ್ನ ಭದ್ರಕೋಟೆಯನ್ನು ಉಳಿಸಿಕೊಳ್ಳುವ ಪ್ರಯತ್ನಕ್ಕೆ ಕೊನೆ ಗಳಿಗೆಯಲ್ಲಿ ಕೈ ಹಾಕಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ