Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಜೆಪಿ ಅಧ್ಯಕ್ಷ ನಡ್ಡಾ ಪತ್ನಿಯ ಕಾರು ಕಳ್ಳತನ

 

ದೆಹಲಿ :
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಪತ್ನಿ ಮಲ್ಲಿಕಾ ನಡ್ಡಾ ಕಾರನ್ನು ದೆಹಲಿಯಲ್ಲಿ ಕಳ್ಳತನ ಮಾಡಲಾಗಿದೆ. ಕದ್ದ ಕಾರನ್ನು ಗುರುಗ್ರಾಮದ ಕಡೆ ಕಳ್ಳರು ತೆಗೆದುಕೊಂಡು ಹೋಗುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ದೆಹಲಿಯ ಗೋವಿಂದಪುರ ಪ್ರದೇಶದಲ್ಲಿ ನಿಲ್ಲಿಸಿದ್ದ ಜೆ. ಪಿ. ನಡ್ಡಾ ಪತ್ನಿಯ Toyota Fortuner ಕಾರನ್ನು ಮಾರ್ಚ್‌ 19ರಂದು ಮಧ್ಯಾಹ್ನ 3 ರಿಂದ 4 ಗಂಟೆಯ ಅವಧಿಯಲ್ಲಿ ಕಳ್ಳತನ ಮಾಡಲಾಗಿದೆ. ಈ ಕುರಿತು ಕಾರಿನ ಚಾಲಕ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಕಾರು ಹಿಮಾಚಲ ಪ್ರದೇಶದ ನೋಂದಣಿ ಸಂಖ್ಯೆ ಹೊಂದಿತ್ತು. ಜೆ. ಪಿ. ನಡ್ಡಾ ಪತ್ನಿಯ ಕಾರು ಚಾಲಕ ಜೋಗಿಂದರ್ ಸರ್ವೀರ್ಸ್‌ಗಾಗಿ ಕಾರನ್ನು ತಂದಿದ್ದರು. ಸರ್ವೀಸ್ ಮುಗಿಸಿಕೊಂಡು ವಾಪಸ್ ಆಗುವಾಗ ಊಟಕ್ಕಾಗಿ ಗೋವಿಂದಪುರ ಪ್ರದೇಶದಲ್ಲಿ ನಿಲ್ಲಿಸಿದ್ದರು. ಅಲ್ಲಿಂದಲೇ ಕಾರನ್ನು ಕಳ್ಳತನ ಮಾಡಲಾಗಿದೆ.

ಮಾರ್ಚ್‌ 19ರಂದು Toyota Fortuner ಕಾರನ್ನು ಕಳ್ಳತನ ಮಾಡಲಾಗಿದೆ ಎಂದು ದೆಹಲಿ ಪೊಲೀಸರಿಗೆ ದೂರು ನೀಡಲಾಗಿದೆ. ಆದರೆ ಇದುವರೆಗೂ ಕಾರಿನ ಕುರಿತು ಯಾವುದೇ ಸುಳಿವು ಸಿಕ್ಕಿಲ್ಲ.

ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಗೋವಿಂದಪುರ ಸುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಆಗ ಕಾರು ಗುರುಗ್ರಾಮ ಕಡೆಗೆ ತೆರಳುತ್ತಿರುವ ದೃಶ್ಯಗಳು ಸೆರೆಯಾಗಿವೆ. ಬಳಿಕ ಯಾವುದೇ ಮಾಹಿತಿ ಸಿಕ್ಕಿಲ್ಲ.

ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಕಾರು ಹಿಮಾಚಲ ಪ್ರದೇಶದ ನೋಂದಣಿ ಸಂಖ್ಯೆ ಹೊಂದಿದೆ. ಕಾರನ್ನು ಹುಡುಕಲು ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜೆ. ಪಿ. ನಡ್ಡಾ ಪತ್ನಿ ಮಲ್ಲಿಕಾ ನಡ್ಡಾ ಕಾರು ಕಳ್ಳತನ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಇದು ಹೈ ಪ್ರೊಫೈಲ್ ಪ್ರಕರಣವಾದ ಕಾರಣ ವಿಶೇಷ ತಂಡವನ್ನು ರಚನೆ ಮಾಡಿಕೊಂಡು ಕಾರು ಚಾಲಕ ಜೋಗಿಂದರ್ ನೀಡಿದ ಮಾಹಿತಿ ಆಧರಿಸಿ ತನಿಖೆ ಕೈಗೊಂಡಿದ್ದಾರೆ.

ಕಾರನ್ನು ದೆಹಲಿ ಗಡಿ ದಾಟಿಸಿ ಬೇರೆ ರಾಜ್ಯಕ್ಕೆ ಸಾಗಣೆ ಮಾಡಿರಬಹುದು ಎಂದು ಪೊಲೀಸರು ಪ್ರಾಥಮಿಕವಾಗಿ ಅಂದಾಜಿಸಿದ್ದಾರೆ. ಅಲ್ಲದೇ ಕಾರು ಸರ್ವೀಸ್ ಮಾಡಿಸಿಕೊಂಡು ಬಂದ ಬಳಿಕ ಕಳ್ಳತನವಾಗಿದೆ ಎಂದರೆ ಸರ್ವೀಸ್ ಸೆಂಟರ್ ಸುತ್ತಲಿನ ಸ್ಥಳೀಯರ ಕೈವಾಡ ಇರಬಹುದು ಎಂದು ಶಂಕಿಸಲಾಗಿದ್ದು, ತನಿಖೆ ಮುಂದುವರೆದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ