Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

31 ವರ್ಷದ ಹಳೆಯ ಕೇಸ್ ತೆರೆ ಸಿದ್ದರಾಮಯ್ಯ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

 

ಬೆಳಗಾವಿ :
31 ವರ್ಷಗಳ ಹಳೆಯ
ಕೇಸ್ ಗಳನ್ನು ತೆರೆದು ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿರುವ ಸಿದ್ದರಾಮಯ್ಯ ನೇತೃತ್ವದ ಸರಕಾರಕ್ಕೆ ಸೂಕ್ತ ಸಲಹೆ ನೀಡುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿ ಮನವಿ ರವಾನಿಸಿದರು.

ದೇಶವೇ ರಾಮಮಂದಿರ ಉದ್ಘಾಟನೆಯ ಅಮೃತಘಳಿಗೆಗಾಗಿ ಎದುರು ನೋಡುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ 3 ದಶಕಗಳ ಹಿಂದಿನ ರಾಮಜನ್ಮಭೂಮಿ ಹೋರಾಟಗಾರರ ಹಿಂದೂ ಕಾರ್ಯಕರ್ತರ ಪ್ರಕರಣ ಹೆಕ್ಕಿ ಸಮಾಜದಲ್ಲಿ ಕೋಮುಗಲಭೆಗೆ ಪ್ರಚೋದನೆ ಮಾಡುತ್ತಿರುವ ಸಿದ್ದರಾಮಯ್ಯನವರ ಸರ್ಕಾರಕ್ಕೆ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲು ನಿರ್ದೇಶನ ನೀಡುವಂತೆ ಬಿಜೆಪಿ ಕಾರ್ಯಕರ್ತರು ರಾಜ್ಯಪಾಲರಲ್ಲಿ ವಿನಂತಿ ಮಾಡಿಕೊಂಡರು.

 

ಐನೂರು ವರ್ಷಗಳ ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣ ಇತ್ಯರ್ಥ ವಾಗಿ, ದೇಶವೇ ರಾಮಮಂದಿರ ಉದ್ಘಾಟನೆಯ ಅಮೃತಘಳಿಗೆಗಾಗಿ ಎದುರು ನೋಡುತ್ತಿರುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರ 3 ದಶಕಗಳ ಹಿಂದಿನ ರಾಮಜನ್ಮಭೂಮಿ ಹೋರಾಟಗಾರರ ಹಿಂದೂ ಕಾರ್ಯಕರ್ತರ ಪ್ರಕರಣಗಳನ್ನು ಹೆಕ್ಕಿ ಸಮಾಜದಲ್ಲಿ ಕೋಮು ಗಲಭೆಗೆ ಪ್ರಚೋದನೆ ಮಾಡುತ್ತಿರುವ ಸಿದ್ದರಾಮಯ್ಯನವರ ಸರ್ಕಾರದ ಕ್ರಮ ಖಂಡನೀಯ. ರಾಜ್ಯದಲ್ಲಿ ಗಂಭೀರ ಸ್ವರೂಪದ ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿ ಪ್ರಕರಣದಲ್ಲಿ ಪೋಲಿಸ್ ಠಾಣೆಗೆ ನುಗ್ಗಿ, ಶಾಸಕರ‌ಮನೆಗೆ ಬೆಂಕಿ ಇಟ್ಟವರು ಅಮಾಯಕರು ಅಂಥ ಹೇಳಿ ಪ್ರಕರಣ ಹಿಂಪಡೆಯುವ ನೀಚ ಬುದ್ದಿಯ ಈ ಸರ್ಕಾರಕ್ಕೆ ತಾವುಗಳು ನಿರ್ದೇಶನ ನೀಡಿ ಹಿಂದೂ ಕಾರ್ಯಕರ್ತರ ಎಲ್ಲ ಪ್ರಕರಣಗಳನ್ನು ಹಿಂಪಡೆಯುವಂತೆ ಮಾರ್ಗದರ್ಶನ ಮಾಡಬೇಕೆಂದು ವಿನಂತಿಸುತ್ತೇವೆ.

ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಶ್ರೀರಾಮ ಮಂದಿರ ನಿರ್ಮಾಣದ ಬಗ್ಗೆ ಅಸಂತುಷ್ಟರಾಗಿರುವ ಕಾಂಗ್ರೆಸ್ ನಾಯಕರ ಮನಸ್ಥಿತಿ ನೋಡಿದರೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸಂಪೂರ್ಣವಾಗಿ ನಿಷ್ಕ್ರೀಯವಾಗಿದ್ದು ತಮ್ಮ ಸರ್ಕಾರದ ವಿಫಲತೆಗಳನ್ನು ಮುಚ್ಚಿಕೊಳ್ಳಲು ಇಂತಹ ದುಸ್ಸಾಹಸಕ್ಕೆ ಕೈ ಹಾಕುತ್ತಿದೆ. ಅಲ್ಪಸಂಖ್ಯಾತರನ್ನು ಹಾಗೂ ತಮ್ಮ ಹೈಕಮಾಂಡ್ ಮೆಚ್ಚಿಸಲು ಕರಸೇವಕರ ಮೇಲಿನ ಮೊಕದ್ದಮೆಗಳನ್ನು ಮುನ್ನೆಲೆಗೆ ತಂದು ಬಡಾಯಿಕೊಚ್ಚಿಕೊಳ್ಳುತ್ತಿರುವ ಸರ್ಕಾರಕ್ಕೆ ನಿರ್ದೇಶನ ನೀಡಿ ರಾಜ್ಯದಲ್ಲಿ ಸೌಹಾರ್ದತೆ ಕಾಪಾಡಬೇಕು.

ರಾಮ ಜನ್ಮ ಭೂಮಿಯ ವಿವಾದವನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ ಮುಸ್ಲಿಂ ನಾಯಕರೆ ಪ್ರಧಾನಿ ಮೋದಿಯವರನ್ನು ಸ್ವಾಗತಿಸಿ ರಾಮ ಮಂದಿರ ಉದ್ಘಾಟನೆಗೆ ಪಾಲ್ಗೊಳ್ಳಲು ತುದಿಗಾಲಿನಲ್ಲಿ ನಿಂತಾಗ ರಾಜ್ಯ ಸರ್ಕಾರದ ಕಾರ್ಯ ಜನರಲ್ಲಿ ಅಸಹ್ಯ ಮೂಡಿಸಿದೆ.

ಕಾಂಗ್ರೆಸ್ ಸರ್ಕಾರದ ಈ ಕ್ರಮವನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಇಂತಹ ಘಟನೆ ಮತ್ತೊಮ್ಮೆ ರಾಜ್ಯದಲ್ಲಿ ಘಟಿಸಬಾರದು. ರಾಮ ಮಂದಿರ ಉದ್ಘಾಟನೆಯ ಈ ಐತಿಹಾಸಿಕ ಕ್ಷಣಗಳಿಗೆ ಯಾವುದೆ ಅಡ್ಡಿಯಾಗದಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ವಿನಂತಿಸುತ್ತೇವೆ. ಇಂತಹ ಪ್ರಚೋದನಕಾರಿ ಕ್ರಮ ಕೈಗೊಳ್ಳುವ ಸಚಿವರ
ಹೆಡೆಮುರಿ ಕಟ್ಟಬೇಕೆಂದು ಬಿಜೆಪಿ ಕಾರ್ಯಕರ್ತರು ರಾಜ್ಯಪಾಲರಲ್ಲಿ ವಿನಂತಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ