Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಜೆಪಿ ಮೂರನೇ ಪಟ್ಟಿ ಪ್ರಕಟ

ದೆಹಲಿ : ತಮಿಳುನಾಡಿನ ಒಂಬತ್ತು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಗುರುವಾರ ಪ್ರಕಟಿಸಿದೆ.

ಕೊಯಮತ್ತೂರು ಕ್ಷೇತ್ರದಿಂದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಹಾಗೂ ಚೆನ್ನೈ ದಕ್ಷಿಣ ಕ್ಷೇತ್ರದಿಂದ ತೆಲಂಗಾಣದ ಮಾಜಿ ರಾಜ್ಯಪಾಲೆ ತಮಿಳಿಸೈ ಸೌಂದರ್‌ರಾಜನ್ ಸ್ಪರ್ಧಿಸಲಿದ್ದಾರೆ. ಬಿಜೆಪಿ ಈವರೆಗೆ 272 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದಂತಾಗಿದೆ.

ಕೇಂದ್ರ ಸಚಿವ ಎಲ್‌.ಮುರುಗನ್ ಅವರು ನೀಲಗಿರಿ ಮೀಸಲು ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಮಾದಿಗ ಸಮುದಾಯಕ್ಕೆ ಸೇರಿದ ಮುರುಗನ್‌ ಅವರು ಈ ಹಿಂದೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದರು. ಬಳಿಕ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿತ್ತು. ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶದಿಂದ ಅವರು ಆಯ್ಕೆಯಾಗಿದ್ದಾರೆ.

ತಮಿಳಿಸೈ ಅವರು ಸೋಮವಾರವಷ್ಟೇ ರಾಜ್ಯ‍ಪಾಲ ಹುದ್ದೆಗೆ ರಾಜೀನಾಮೆ ನೀಡಿದ್ದರು. ಸೌಂದರ್‌ರಾಜನ್‌ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ತೂತ್ತುಕುಡಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ನಿಂದ ಸ್ಪರ್ಧಿಸಿ, ಡಿಎಂಕೆಯ ಕನಿಮೊಳಿ ಎದುರು ಪರಾಭವಗೊಂಡಿದ್ದರು. ಕೊಯಮತ್ತೂರು ಕ್ಷೇತ್ರದಲ್ಲಿ 2019ರಲ್ಲಿ ಕಾಂಗ್ರೆಸ್‌ ಜಯ ಗಳಿಸಿತ್ತು. ಈ ಸಲ ಕ್ಷೇತ್ರವನ್ನು ಡಿಎಂಕೆಗೆ ಬಿಟ್ಟುಕೊಟ್ಟಿದೆ.

ಕೇಂದ್ರದ ಮಾಜಿ ಸಚಿವ ಪೊನ್‌ ರಾಧಾಕೃಷ್ಣನ್‌ ಅವರು ಕನ್ಯಾಕುಮಾರಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಡಿಎಂಕೆ ಮಾಜಿ ನಾಯಕ ಹಾಗೂ ಹಾಲಿ ಸಂಸದ ಟಿ.ಆರ್.ಪರಿವೆಂಧರ್‌ ಅವರು ಪೆರಂಬಲೂರಿನಿಂದ ಕಣಕ್ಕಿಳಿಯಲಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಒಂದೇ ಒಂದು ಸ್ಥಾನವನ್ನು ಗೆದ್ದಿರಲಿಲ್ಲ. ರಾಜ್ಯದ 39 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಏಪ್ರಿಲ್‌ 19ರಂದು ಮತದಾನ ನಡೆಯಲಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ