Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಲೋಕಸಭೆಗೆ ಬಿಜೆಪಿಯ 195 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿಯಿಂದ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಗುಜರಾತ್‌ನ ಗಾಂಧಿನಗರ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಲಖನೌ, ಸ್ಮೃತಿ ಇರಾನಿ ಅವರು ಅಮೇಥಿಯಿಂದ, ಕಿರಣ್‌ ರಿಜಿಜು ಅರುಣಾಚಲ ಪಶ್ಚಿಮ, ಪೋರ್‌ಬಂದರ್‌ನಿಂದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಂಡಾವಿಯ, ಕೇರಳದ ಪಥಣಂತಿಟ್ಟದಿಂದ ಎ.ಕೆ. ಆ್ಯಂಟನಿ ಪುತ್ರ ಅನಿಲ್‌ ಆ್ಯಂಟನಿ, ಸಚಿವ ರಾಜೀವ್‌ ಚಂದ್ರಶೇಖರ್‌ ಅವರಿಗೆ ತಿರುವನಂತಪುರಂನಿಂದ ಟಿಕೆಟ್‌ ನೀಡಲಾಗಿದೆ. ಮಧ್ಯಪ್ರದೇಶದ ವಿದಿಶಾದಿಂದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಕಣಕ್ಕಿಳಿದಿದ್ದಾರೆ.

ಉತ್ತರ ಪ್ರದೇಶದ ಮಥುರಾದಿಂದ ಹೇಮಾಮಾಲಿನಿ, ಉನ್ನಾವೋದಿಂದ ಸಾಕ್ಷಿ ಮಹಾರಾಜ್‌, ತೆಲಂಗಾಣದ ಕರೀಂ ನಗರದಿಂದ ಬಂಡಿ ಸಂಜೀವ್‌ ಕುಮಾರ್‌, ಸಿಕಂದರಾಬಾದ್‌ ಜಿ. ಕಿಶನ್‌ ರೆಡ್ಡಿ ಅವರಿಗೂ ಬಿಜೆಪಿ ಸಿಕ್ಕಿದೆ.

ಬಿಜೆಪಿಯು ಈ ಬಾರಿ ಹಲವು ಬದಲಾವಣೆ ಮಾಡಿದೆ. ನವದೆಹಲಿ ಕ್ಷೇತ್ರದ ಸಂಸದೆ, ಸಚಿವೆಯೂ ಆಗಿರುವ ಮೀನಾಕ್ಷಿ ಲೇಖಿ ಅವರನ್ನು ಕೈಬಿಡಲಾಗಿದೆ. ನವದೆಹಲಿಯಲ್ಲಿ ವಿದೇಶಾಂಗ ವ್ಯವಹಾರಗಳ ಖಾತೆ ಮಾಜಿ ಸಚಿವೆ ಸುಷ್ಮಾ ಸ್ವರಾಜ್‌ ಪುತ್ರಿ ಬನ್ಸೂರಿ ಸ್ವರಾಜ್‌ ಅವರಿಗೆ ಸ್ಪರ್ಧಿಸಲಿದ್ದಾರೆ. ಮಧ್ಯಪ್ರದೇಶದ ಭೋಪಾಲ್ ಕ್ಷೇತ್ರದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ಅವರನ್ನು ಕೈಬಿಡಲಾಗಿದ್ದು, ಅಲೋಕ್‌ ಶರ್ಮಾ ಅವರಿಗೆ ಟಿಕೆಟ್‌ ಘೋಷಿಸಲಾಗಿದೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ವಿದಿಶಾದಿಂದ ಟಿಕೆಟ್‌ ನೀಡಲಾಗಿದೆ. ದೆಹಲಿ ಉತ್ತರ ಮನೋಜ್‌ ತಿವಾರಿ ಅವರು ಕಣಕ್ಕಿಳಿದಿದ್ದಾರೆ. ಉತ್ತರ ಗೋವಾದಿಂದ ಶ್ರೀಪಾದ್‌ ನಾಯಕ್‌ ಅವರು ಟಿಕೆಟ್‌ ಗಿಟ್ಟಿಸಿಕೊಂಡಿದ್ದಾರೆ.

ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿ ಇದೀಗ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರತಿಷ್ಠಿತ ನಾಯಕರನ್ನು ಬಿಜೆಪಿ ಕಣಕ್ಕಿಳಿಸಿದೆ. ಈ ಸಲದ ಚುನಾವಣೆಯಲ್ಲಿ 400 ಹೆಚ್ಚು ಸ್ಥಾನಗಳನ್ನು ಗೆಲ್ಲುವ ಬಯಕೆಯಲ್ಲಿರುವ ಬಿಜೆಪಿ ಇದೀಗ ಚುನಾವಣೆ ಘೋಷಣೆಗೂ ಮುನ್ನ ತನ್ನ ಅಭ್ಯರ್ಥಿಗಳ ಪಟ್ಟಿ ಘೋಷಿಸಿದೆ.

ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕಸರತ್ತು ನಡೆಸುತ್ತಿದ್ದ ಬಿಜೆಪಿಯು ಕೊನೆಗೂ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ನಾಯಕ ವಿನೋದ್‌ ತಾವ್ಡೆ ಸೇರಿ ಹಲವು ನಾಯಕರು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದರು. 195 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ನಾಯಕರು ಬಿಡುಗಡೆ ಮಾಡಿದರು. ಪಟ್ಟಿಯಲ್ಲಿ ಕರ್ನಾಟಕದ ಯಾವ ಕ್ಷೇತ್ರಕ್ಕೂ ಟಿಕೆಟ್‌ ಘೋಷಿಸಿಲ್ಲ ಎಂಬುದು ಗಮನಾರ್ಹವಾಗಿದೆ.

16 ರಾಜ್ಯ ಹಾಗೂ 2 ಕೇಂದ್ರಾಡಳಿತ ಪ್ರದೇಶಗಳ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಿದ್ದಾರೆ. ಯುವಕರು, ಸುಲಭವಾಗಿ ಗೆಲ್ಲುವ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ. ಮೊದಲ ಪಟ್ಟಿಯಲ್ಲಿ ಉತ್ತರ ಪ್ರದೇಶದ 51 ಕ್ಷೇತ್ರಗಳಿಗೆ, ಪಶ್ಚಿಮ ಬಂಗಾಳ 20, ಮಧ್ಯಪ್ರದೇಶ 24, ಗುಜರಾತ್‌ 15, ರಾಜಸ್ಥಾನ 15, ಕೇರಳ 12, ತೆಲಂಗಾಣ 9, ಅಸ್ಸಾಂ 11, ಜಾರ್ಖಂಡ್‌ 11, ಛತ್ತೀಸ್‌ಗಢ 11, ದೆಹಲಿ 5, ಜಮ್ಮು-ಕಾಶ್ಮೀರ 2, ಉತ್ತರಾಖಂಡ 3, ಅರುಣಾಚಲ ಪ್ರದೇಶ 2, ಗೋವಾ 1, ತ್ರಿಪುರ 1, ಅಂಡಮಾನ್‌ ನಿಕೋಬಾರ್‌ 1 ಹಾಗೂ ದಿಯು ಮತ್ತು ದಮನ್‌ನ 1 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ.

ಭೂ ವಿಜ್ಞಾನಗಳ ಖಾತೆ ಸಚಿವ ಕಿರಣ್‌ ರಿಜಿಜು, ಸರ್ಬಾನಂದ ಸೋನೋವಾಲ್‌ ಸೇರಿ ಹಲವರು ಟಿಕೆಟ್‌ ಪಡೆದ ಗಣ್ಯರಾಗಿದ್ದಾರೆ. ದೆಹಲಿಯ ಚಾಂದಿನಿ ಚೌಕ್‌ನಿಂದ ಪ್ರವೀಣ್‌ ಕಂಡೇಲ್‌ವಾಲ್‌, ದೆಹಲಿ ಉತ್ತರ ಮನೋಜ್‌ ತಿವಾರಿ ಕಣಕ್ಕಿಳಿದಿದ್ದಾರೆ. ಉತ್ತರ ಗೋವಾದಿಂದ ಶ್ರೀಪಾದ ನಾಯಕ್‌, ಗಾಂಧಿನಗರದಿಂದ ಅಮಿತ್‌ ಶಾ, ಅಹ್ಮದಾಬಾದ್‌ ಪಶ್ಚಿಮ ಕ್ಷೇತ್ರದಿಂದ ದಿನೇಶ್‌ಭಾಯಿ ಮಕ್ವಾನ, ಪೋರ್‌ಬಂದರ್‌ನಿಂದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಂಡಾವಿಯ ಅವರಿಗೆ ಟಿಕೆಟ್‌ ನೀಡಲಾಗಿದೆ.

ಕೇರಳದ ಕಾಸರಗೋಡು ಕ್ಷೇತ್ರದಿಂದ ಎಂ.ಎಲ್.ಅಶ್ವಿನಿ, ಕೇರಳದಲ್ಲಿ ಎ.ಕೆ. ಆ್ಯಂಟನಿ ಪುತ್ರ ಅನಿಲ್‌ ಆ್ಯಂಟನಿ, ಸಚಿವ ರಾಜೀವ್‌ ಚಂದ್ರಶೇಖರ್‌ ಅವರಿಗೆ ತಿರುವನಂತಪುರಂನಿಂದ ಟಿಕೆಟ್‌ ನೀಡಲಾಗಿದೆ. ಮಧ್ಯಪ್ರದೇಶದ ವಿದಿಶಾದಿಂದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಕಣಕ್ಕಿಳಿದಿದ್ದಾರೆ. ತೆಲಂಗಾಣದ ಕರೀಂ ನಗರದಿಂದ ಬಂಡಿ ಸಂಜೀವ್‌ ಕುಮಾರ್‌, ಸಿಕಂದರಾಬಾದ್‌ ಜಿ. ಕಿಶನ್‌ ರೆಡ್ಡಿ, ಹೈದರಾಬಾದ್‌ ಮಾಧವಿ ಲತಾ ಸ್ಪರ್ಧಿಸುತ್ತಿದ್ದಾರೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು