Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜಮೀನು ವಿವಾದ : ಹೊಡೆದಾಡಿಕೊಂಡ ಇಬ್ಬರೂ ಸಾವು

ಬೆಳಗಾವಿ : ಅಥಣಿ ತಾಲೂಕಿನ ಖೋತವಾಡಿ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿ ಹೊಡೆದಾಡಿಕೊಂಡ ಇಬ್ಬರೂ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಖೋತವಾಡಿ ಗ್ರಾಮದ ಹನುಮಂತ ರಾಮಚಂದ್ರ ಖೋತ (34)ಮತ್ತು ಖಂಡೋಬಾ ತಾನಾಜಿ ಖೋತ(32) ಮೃತಪಟ್ಟವರು. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಇಬ್ಬರೂ ಸೋಮವಾರ ರಾತ್ರಿ ಜಗಳ ಮಾಡಿಕೊಂಡು ಹೊಡೆದಾಡಿಕೊಂಡಿದ್ದಾರೆ. ನಂತರ ತೀವ್ರ ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಜಮೀನಿಗೆ ಸಂಬಂಧಿಸಿ ಕೆಲವು ದಿನಗಳಿಂದ ವಿವಾದ ಇತ್ತು. ಗ್ರಾಮದ ಹಿರಿಯರು ಸಂಧಾನ ಮಾಡಿದ್ದರು. ಆದರೂ ತಕರಾರು ಕಾಣಿಸಿಕೊಂಡ ಕಾರಣ ಇಬ್ಬರೂ ಜಗಳ ಮಾಡಿಕೊಂಡು ಮೃತಪಟ್ಟಿದ್ದಾರೆ.

ಪ್ರಕರಣದ ವಿವರ : ದಾಯಾದಿಗಳ ಕಲಹ ಸಾವಿನಲ್ಲಿಅಂತ್ಯವಾಗಿದೆ. ಅಣ್ಣ-ತಮ್ಮಂದಿರು ಪರಸ್ಪರ ಹೊಡೆದಾಡಿಕೊಂಡು ಮೃತಪಟ್ಟಿದ್ದಾರೆ.
ಸೋಮವಾರ ತಡರಾತ್ರಿ ಭೂ ವಿವಾದ ಹಿನ್ನೆಲೆಯಲ್ಲಿ ಸಹೋದರ ಸಂಬಂಧಿಕರ ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಒಬ್ಬರಿಗೊಬ್ಬರು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ.
ಕುಟುಂಬಸ್ಥರು ಇಬ್ಬರನ್ನು ಮಹಾರಾಷ್ಟ್ರ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಕೂಡ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೆಳಗಾವಿ ಎಸ್‌ಪಿ ಭೀಮಶಂಕರ್ ಗುಳೇದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

 
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ