Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ನೇಹಾಳನ್ನು ಕೊಲೆಗೈದ ಫಯಾಜ್ ತಂದೆ-ತಾಯಿ ಇಬ್ಬರೂ ಮುನವಳ್ಳಿಯ ಶಿಕ್ಷಕ ವೃತ್ತಿಯವರು

ಬೆಳಗಾವಿ : ಹುಬ್ಬಳ್ಳಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್​ನ ಪೋಷಕರಿಬ್ಬರೂ ಶಾಲಾ ಶಿಕ್ಷಕರು ಎಂಬ ಮಾಹಿತಿ ಇದೀಗ ಪೊಲೀಸ್ ತನಿಖೆ ವೇಳೆ ಬೆಳಕಿಗೆ ಬಂದಿದೆ.

ವಿದ್ಯೆ ತಲೆಗೆ ಹತ್ತಿಸಿಕೊಳ್ಳದ ಆತ ಕಾಲೇಜಿನಿಂದ ಫೇಲ್ ಆಗಿ ಹೊರಕ್ಕೆ ಬಿದ್ದಿದ್ದ. ಇದೀಗ ಹಳೇ ಸಹಪಾಠಿಯನ್ನೇ ಕೊಲೆ ಮಾಡಿದ್ದಾನೆ. ಆಕೆಯನ್ನು ಕೊಲ್ಲಲು ಚಾಕು ಹಿಡಿದುಕೊಂಡು ಕಾಲೇಜ್​ ಕ್ಯಾಂಪಸ್​ಗೆ ಬಂದಿದ್ದ ಎಂಬ ಮಾಹಿತಿ ಪೊಲೀಸರ ತನಿಖೆ ವೇಳೆ ಬಹಿರಂಗವಾಗಿದೆ.

ಆರೋಪಿ ಫಯಾಜ್ ಮೂಲತಃ ಸವದತ್ತಿ ತಾಲೂಕಿನ ಮುನವಳ್ಳಿ ನಿವಾಸಿ. ತಂದೆ ಬಾಬಾಸಾಬ್, ತಾಯಿ ಮುಮ್ತಾಜ್ ಇಬ್ಬರೂ ಸರ್ಕಾರಿ ಶಾಲೆಯ ಶಿಕ್ಷಕರು.

ಫಯಾಜ್​ ಫೇಲ್ ಆಗಿದ್ದರಿಂದ ಕಾಲೇಜ್ ಬಿಟ್ಟಿದ್ದ. ಆತ ಹುಬ್ಬಳ್ಳಿ ಕಾಲೇಜಿನಲ್ಲಿ ಬಿಸಿಎ ಕೋರ್ಸ್​ನಲ್ಲಿ ಫೇಲ್ ಆಗಿದ್ದ. ಬಿಸಿಎ ಕಲಿಯುವಾಗ ವೇಳೆ ನೇಹಾ ಆತನ ಕ್ಲಾಸ್​ಮೇಟ್ .

ಹಲವು ಸಮಯದಿಂದ ಆಕೆಯ ಹಿಂದೆ ಬಿದ್ದಿದ್ದ ಫಯಾಜ್​ ಪ್ರೀತಿ ಮಾಡುವಂತೆ ಸತಾಯಿಸಿದ್ದ. ಆದರೆ ಅದಕ್ಕೆ ನಿರಾಕರಿಸಿದ್ದಳು. ಇದರಿಂದ ಗುರುವಾರ ಕಾಲೇಜಿಗೆ ಚಾಕು ಸಮೇತ ಬಂದು ಬರ್ಬರವಾಗಿ ಕೊಲೆ ಮಾಡಿದ್ದಾನೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು