ಬೆಳಗಾವಿ: ಈಜಲು ಹೋದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ನಡೆದಿದೆ.
ಕಪಿಲೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ಕೆರೆಗೆ ಶಿವಾಜಿನಗರದ ಇಬ್ಬರು ಅಪ್ರಾಪ್ತ ಬಾಲಕರು ಈಜಲು ತೆರಳಿ ಕೆರೆಗೆ ಇಳಿದಾಗ ಈ ದುರ್ಘಟನೆ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾಲಕರನ್ನು ಹೊರಗೆ ತೆಗೆದರೂ ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ. ಖಡೇ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
