Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸರ್ಕಾರೇತರ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆಗೆ ಬ್ರೇಕ್; ವಿಶೇಷ ತಂಡ ಕಾರ್ಯಾಚರಣೆ

ಬೆಂಗಳೂರು : ರಾಜ್ಯದಲ್ಲಿ ಕೇಂದ್ರ ಹಾಗೂ ಸರ್ಕಾರದ ವಾಹನಗಳಿಗೆ ಮಾತ್ರ ಕರ್ನಾಟಕ ಸರ್ಕಾರದ ಹೆಸರು, ಲಾಂಛನ ಹಾಗೂ ಚಿಹ್ನೆ ಬಳಸಲು ಅವಕಾಶವಿದೆ. ಆದರೆ ಬೆಂಗಳೂರಲ್ಲಿ ಸರ್ಕಾರದ ಅಧೀನದ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು, ವ್ಯಕ್ತಿಗಳು ತಮ್ಮ ವಾಹನಗಳ ಮೇಲೆ ಅನಧಿಕೃತವಾಗಿ ಸರ್ಕಾರದ ಲಾಂಛನ, ಚಿಹ್ನೆಗಳನ್ನು ಅಳವಡಿಸಿರುವುದು ಕಂಡುಬರುತ್ತಿದೆ. ಈಗಾಗಲೇ ಸಾರಿಗೆ ಇಲಾಖೆಯಲ್ಲಿ ಈ ಬಗ್ಗೆ ನೂರಾರು ಪ್ರಕರಣಗಳು ದಾಖಲಾಗಿವೆ. ಇಂತಹ ನೋಂದಣಿ ಫಲಕಗಳನ್ನು ತೆರವುಗೊಳಿಸಲು ರಾಜ್ಯ ಸಾರಿಗೆ ಇಲಾಖೆ ಏಳು ವಿಶೇಷ ತನಿಖಾ ತಂಡಗಳನ್ನು ರಚಿಸಿ, ಜೂನ್ ಒಂದರಿಂದ ಕಾರ್ಯಾಚರಣೆಗೊಳಿಸಲು ಪ್ಲಾನ್ ಮಾಡಿದೆ. ಮೊದಲಿಗೆ 500, ಎರಡನೇ ಬಾರಿ ಒಂದು ಸಾವಿರ ರೂಪಾಯಿ ಅದಾದ ನಂತರ ವಾಹನವನ್ನು ಸೀಜ್ ಮಾಡಲಾಗುತ್ತದೆ.

ಸಾರಿಗೆ ಇಲಾಖೆಯ ನಿಯಮದಂತೆ, ಕೇವಲ ಸರ್ಕಾರಿ ವಾಹನಗಳಿಗೆ ಅಂದರೇ ಜಿ ಸಿರೀಸ್ ಇರೋ ನಂಬರ್ ಪ್ಲೇಟ್ ಇರೋ ವಾಹನಗಳಲ್ಲಿ ಮಾತ್ರ ಕರ್ನಾಟಕ ಸರ್ಕಾರದ ಹೆಸರು, ಲಾಂಛನ ಇರಬೇಕು. ಅದನ್ನು ಹೊರತು ಪಡಿಸಿ, ಸರ್ಕಾರದ ಅಧೀನದಲ್ಲಿ ಬರುವ ಸರ್ಕಾರಿ ನಿಗಮ, ಮಂಡಳಿ, ಸಂಸ್ಥೆ, ಲೋಕಲ್ ಬಾಡಿ, ಮುನ್ಸಿಪಲ್ ವಾಹನಗಳಲ್ಲಿಯೂ ಸರ್ಕಾರದ ಲಾಂಛನ ಬಳಕೆಗೆ ಅವಕಾಶವಿಲ್ಲ‌. ಉದಾಹರಣೆಗೆ ಕೆಎಸ್​ಆರ್​ಟಿಸಿ ನಿಗಮವಾದ್ರೂ ಅಧಿಕಾರಿಗಳು ಸರ್ಕಾರದ ಚಿಹ್ನೆ, ಹೆಸರು ಬಳಸುವಂತಿಲ್ಲ. ಅನಧಿಕೃತವಾದ ಲಾಂಛನ ಅಥವಾ ಚಿಹ್ನೆ ಹೊಂದಿರುವ ವಾಹನಗಳ ವಿರುದ್ಧ ಮೋಟಾರು ವಾಹನಗಳ ಕಾಯ್ದೆಯಡಿ ಕ್ರಮ ಕೈಗೊಂಡು, ಕೇಸ್ ದಾಖಲಿಸಲಿಸುವ ಎಚ್ಚರಿಕೆಯನ್ನು ಸಾರಿಗೆ ಇಲಾಖೆ ನೀಡಿದೆ.

ಕೂಡಲೇ ಇಂತಹ ನಾಮಫಲಗಳನ್ನು ತೆರವುಗೊಳಿಸಬೇಕೆಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಖಾಸಗಿ ವಾಹನ ಮಾಲೀಕರ ಸಂಘದ ಅಧ್ಯಕ್ಷ ಖಾಸಗಿ ವಾಹನಗಳ ಮೇಲೆ ಸರ್ಕಾರದ ಯಾವುದೇ ಲಾಂಛನವನ್ನು ಬಳಸುವಂತಿಲ್ಲ ಸರ್ಕಾರಿ ಇಲಾಖೆ ಮತ್ತು ಬ್ಯಾಂಕ್ ಉದ್ಯೋಗಿಗಳು ತಮ್ಮ ಸ್ವಂತ ವಾಹನಗಳ ಮೇಲೆ ಕರ್ನಾಟಕ ಸರ್ಕಾರ, ಭಾರತ ಸರ್ಕಾರ ಎಂದು ಹಾಕಿಕೊಂಡಿರುತ್ತಾರೆ ಅದನ್ನು ಮೊದಲು ತೆರವು ಮಾಡಬೇಕು.
ಇಷ್ಟು ದಿನಗಳ ಕಾಲ ತಮ್ಮ ಸ್ವಂತ ವಾಹನಗಳ ಮೇಲೆ ಅನಧಿಕೃತವಾಗಿ ಸರ್ಕಾರದ ಲಾಂಛನ ಬೋರ್ಡ್ ಹಾಕುತ್ತಿದ್ದವರಿಗೆ ಸಾರಿಗೆ ಇಲಾಖೆ ಸರಿಯಾಗಿ ಬಿಸಿ ಮುಟ್ಟಿಸಲು ಪ್ಲಾನ್ ಮಾಡ್ತಿದ್ದು ಈ ಕಾರ್ಯಾಚರಣೆ ಎಷ್ಟರಮಟ್ಟಿಗೆ ಯಶಸ್ವಿಯಾಗುತ್ತದೆ ಕಾದು ನೋಡಬೇಕಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ