Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಶೌರ್ಯ ಸಂಚಲನ ಕಾರ್ಯಕ್ರಮ

 

ಬೆಳಗಾವಿ: ನಮ್ಮ ಧರ್ಮ, ಭೂಮಿ ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ಎಲ್ಲರೂ ಒಂದಾಗಿ ಹೋರಾಡಬೇಕಿದೆ ಎಂದು ಗದುಗಿನ ಶಿವಾನಂದ ಬ್ರಹ್ಮಮಠದ ಸದಾಶಿವಾನಂದ ಸ್ವಾಮೀಜಿ ಹೇಳಿದರು.

ನಗರದ ಮಹಾದ್ವಾರ ರಸ್ತೆಯ ಸಂಭಾಜಿ ಮಹಾರಾಜರ ಉದ್ಯಾನದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳ ರವಿವಾರ ಸಂಜೆ ಹಮ್ಮಿಕೊಂಡಿದ್ದ ಶೌರ್ಯ ಸಂಚಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಸ್ತುತ ಕಾಲಘಟ್ಟದಲ್ಲಿ ಹಿಂದುಗಳು ತಮ್ಮ ಮೇಲೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕಿದೆ. ಹಿಂದುಗಳ ವಿರುದ್ಧ ಕೆಲಸ ಮಾಡುವವರಿಂದ ಎಚ್ಚರದಿಂದ ಇರಬೇಕಿದೆ. ಹೋರಾಟದ ಮೂಲಕವೇ ದೇಶದಲ್ಲಿ ನಾವು ತಲೆ ಎತ್ತಿ ನಿಲ್ಲಬೇಕಾದ ಪರಿಸ್ಥಿತಿ ಬಂದಿದೆ ಎಂದರು.

ಕೊರೊನಾ ಸಂಕಷ್ಟ ಸಮಯದಲ್ಲಿ ಬಜರಂಗ ದಳದ ಕಾರ್ಯಕರ್ತರು ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡಿ, ಸಂಕಷ್ಟದಲ್ಲಿ ಇದ್ದವರ ನೆರವಿಗೆ ಧಾವಿಸಿದರು. ಈಗ ಎಲ್ಲ ಕಾರ್ಯಕರ್ತರು ಭಾರತಾಂಬೆ ರಕ್ಷಣೆಗಾಗಿ ಸಂಕಲ್ಪ ಮಾಡಬೇಕಿದೆ ಎಂದು ತಿಳಿಸಿದರು.

ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಹಿಂದೂ ಸಂಸ್ಕೃತಿಯ ವಿಶ್ವರೂಪದ ದರ್ಶನವಾಗುತ್ತಿದೆ. ಭಕ್ತರಿಗೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿದ ಉತ್ತರ ಪ್ರದೇಶ ಸರ್ಕಾರಕ್ಕೆ ಕೃತಜ್ಞರಾಗಿದ್ದೇವೆ ಎಂದು ಹೇಳಿದರು.

ಬಜರಂಗ ದಳದ ರಾಷ್ಟ್ರೀಯ ಘಟಕದ ಸಂಯೋಜಕ ನೀರಜ್ ಡೊಣೆರಿಯಾ, ಧರ್ಮದ ಹೆಸರಿನಲ್ಲಿ ಮುಸ್ಲಿಮರಿಂದ ದೇಶದ ವಿಭಜನೆಯಾಗಿದೆ. ಇನ್ನೂ ಅದು ಮುಂದುವರಿದಿದೆ. ಲವ್ ಜಿಹಾದ್ ಹೆಸರಿನಲ್ಲಿ ಹಿಂದು ಸಮುದಾಯದ ಯುವತಿಯರನ್ನು ವಂಚಿಸುತ್ತಿದ್ದಾರೆ. ಹಿಂದುಗಳ ಜನಸಂಖ್ಯೆ ಕಡಿಮೆಗೊಳಿಸಿ, ಅವರನ್ನು ಅಲ್ಪಸಂಖ್ಯಾತರನ್ನಾಗಿ ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಶ್ವ ಹಿಂದು ಪರಿಷತ್‌ ಪ್ರಾಂತ ಉಪಾಧ್ಯಕ್ಷ ಶ್ರೀಕಾಂತ ಕದಮ, ಕ್ಷೇತ್ರ ಸಮರಸತಾ ಪ್ರಮುಖ ಕೃಷ್ಣಭಟ್‌, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ, ಪ್ರಮೋದಕುಮಾರ ಒಕ್ಕುಂದಮಠ, ಆನಂದ ಕರಲಿಂಗಣ್ಣವರ, ವೆಂಕಟೇಶ ಶಿಂಧೆ, ಪುಂಡಲಿಕ ದಳವಾಯಿ, ವೆಂಕಟೇಶ ದೇಶಪಾಂಡೆ, ವಿಠಲ ಮಾಳಿ ಇತರರಿದ್ದರು. ಇದಕ್ಕೂ ಮುನ್ನ, ಸರ್ಕಾರಿ ಸರದಾರ್ಸ್‌ ಪ್ರೌಢಶಾಲೆ ಮೈದಾನದಿಂದ ಸಂಭಾಜಿ ಉದ್ಯಾನದವರೆಗೆ 2 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಶಿಸ್ತುಬದ್ಧವಾಗಿ ಹೆಜ್ಜೆಹಾಕಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ