Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BREAKING ಬಿಜೆಪಿಗೆ ಭರ್ಜರಿ ಗೆಲುವು

ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಸೋಮವಾರ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ.

ಕಿಶೋರ್ ಕುಮಾರ್ ಅವರು 3654 ಮತ ಪಡೆದು ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸಿದ್ದ ರಾಜು ಪೂಜಾರಿ ಅವರು 1957 ಮತ ಪಡೆದಿದ್ದಾರೆ. ಎಸ್‌ಡಿಪಿಐ ಅಭ್ಯರ್ಥಿ ಅನ್ವರ್ ಸಾದತ್ 195 ಮತ ಪಡೆದರು. ಪಕ್ಷೇತರ ಅಭ್ಯರ್ಥಿ ದಿನಕರ ಉಳ್ಳಾಲ್ 9 ಮತ ಪಡೆದುಕೊಂಡರು. ಒಟ್ಟು 87 ಮತ ತಿರಸ್ಕೃತಗೊಂಡಿತು. ಇಲ್ಲಿ 5906 ಮತಗಳು ಚಲಾವಣೆಗೊಂಡಿದ್ದವು. 5819 ಮತ ಸಿಂಧು ಮತಗಳಿದ್ದವು. ಮತ ಎಣಿಕೆ ಮಂಗಳೂರು ಕೋಡಿಯಾಲ್ ಬೈಲಿನ ಸೆಂಟ್ ಅಲೋಸಿಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.

ಕೋಟ ಶ್ರೀನಿವಾಸ ಪೂಜಾರಿ ಅವರು ಲೋಕಸಭೆಗೆ ಸ್ಪರ್ಧಿಸಿ ಆಯ್ಕೆಯಾದ ಹಿನ್ನೆಲೆಯಲ್ಲಿ ಈ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ಇದೀಗ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1,697 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಿಶೋರ್ ಕುಮಾರ್ ಅವರು ವಿದ್ಯಾರ್ಥಿ ದೆಸೆಯಿಂದಲೇ ಸಂಘ ಪರಿವಾರದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಈ ಉಪಚುನಾವಣೆಯಲ್ಲಿ ಸವಿತಾ ಸಮಾಜಕ್ಕೆ ಸೇರಿರುವ ಕಿಶೋರ್ ಕುಮಾರ್ ಅವರಿಗೆ ಟಿಕೆಟ್ ನೀಡುವ ಮೂಲಕ ಅಚ್ಚರಿ ಮೂಡಿಸಿತ್ತು. ಇದೀಗ ಹಿಂದುಳಿದ ವರ್ಗಕ್ಕೆ ಸೇರಿರುವ ಕಿಶೋರ್ ಕುಮಾರ್ ಆಯ್ಕೆಯಿಂದ ಬಿಜೆಪಿ ಆ ವರ್ಗದ ಬೆಂಬಲ ಗಳಿಸುವಲ್ಲಿ ಯಶಸ್ವಿಯಾಗಿದೆ.

 
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ