Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BREAKING ಚಿಕ್ಕೋಡಿ ಪುರಸಭೆ ಚುನಾವಣೆ : ಕೊನೆಗೂ ಅವಿರೋಧವಾಗಿ ಆಯ್ಕೆ !

ಚಿಕ್ಕೋಡಿ ಪುರಸಭಾ ಚುನಾವಣೆ ಈ ಬಾರಿ ಕುತೂಹಲಕ್ಕೆ ಕಾರಣವಾಗಿತ್ತು. ಯಾರು ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗುತ್ತಾರೆ ಎಂಬ ನಿಗೂಢತೆ ಕೊನೆವರೆಗೂ ಇತ್ತು. ಆದರೆ ಹಿರಿಯ ನಾಯಕರ ನಿರ್ಧಾರದಿಂದಾಗಿ ಇದೇ ಮೊದಲ ಬಾರಿಗೆ ಆಯ್ಕೆಯಾದವರಿಗೆ ಅಧಿಕಾರದ ಪಟ್ಟ ಲಭ್ಯವಾಗಿದೆ.

ಬೆಳಗಾವಿ: ಚಿಕ್ಕೋಡಿ ಪುರಸಭೆಯ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿಯ ವೀಣಾ ಜಗದೀಶ ಕವಟಗಿಮಠ ಮತ್ತು ಉಪಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಇರ್ಫಾನ್ ಬೇಪಾರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರ ಚುನಾವಣೆಗೆ ದಿನ ನಿಗದಿಯಾಗಿತ್ತು. ಆದರೆ, ಇಬ್ಬರೂ ಅವಿರೋಧವಾಗಿ ಆಯ್ಕೆ ಆಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಚಿಕ್ಕೋಡಿ ಪುರಸಭೆ ಒಟ್ಟು 23 ಸದಸ್ಯರನ್ನು ಹೊಂದಿದೆ. ಇದರಲ್ಲಿ ಬಿಜೆಪಿ 13, ಕಾಂಗ್ರೆಸ್ 10 ಸದಸ್ಯರನ್ನು ಹೊಂದಿದೆ. ರಾಜ್ಯ ಸರಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಚಿಕ್ಕೋಡಿ ಶಾಸಕ ಗಣೇಶ ಹುಕ್ಕೇರಿ ಮತ್ತು ಸದ್ಯ ಹೊಸದಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವೀಣಾ ಅವರ ಪತಿ ಜಗದೀಶ ಅವರ ಕಾರ್ಯತಂತ್ರದ ಫಲವಾಗಿ ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಸಮಿಶ್ರ ಆಡಳಿತ ಸಾಧ್ಯವಾಗಿದೆ.

ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಗೆ ತಲಾ ಒಬ್ಬೊಬ್ಬರು ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಕೊನೆಗೂ ತಹಸಿಲ್ದಾರ್ ಚಿದಂಬರ ಕುಲಕರ್ಣಿ ಅವರು ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದ್ದಾರೆ. ಚಿಕ್ಕೋಡಿಯ 20ನೇ ವಾರ್ಡಿನ ವೀಣಾ ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಜೆಪಿ ಪರ ಗೆಲುವು ಸಾಧಿಸಿದ್ದರು. ಎಂಟನೇ ವಾರ್ಡಿನ ಇರ್ಫಾನ್ ಅವರು ಸಹ ಮೊದಲಬಾರಿ ಆಯ್ಕೆಯಾಗಿ ಅಧಿಕಾರ ಪಡೆದುಕೊಂಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ