Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BREAKING ಸಿಎಂ ಮಧ್ಯ ಪ್ರವೇಶ : ಗ್ರಾಹಕರಿಗೆ ಕೊಂಚ ರಿಲೀಫ್ !

 

ಸೇಡಂ/ ಬೆಂಗಳೂರು :
ನಂದಿನಿ ಹಾಲು ದರ ವಿಚಾರದಲ್ಲಿ ರಾಜ್ಯ ಸರಕಾರ ಇದೀಗ ಒಂದು ನಿರ್ಧಾರ ತೆಗೆದುಕೊಂಡಿದೆ. ಹಾಲಿನ ದರ 3 ₹ ಹೆಚ್ಚಿಸಿ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಇದೀಗ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದರ ಹೆಚ್ಚಳಕ್ಕೆ ಬ್ರೇಕ್ ಹಾಕಿದ್ದಾರೆ.

ನಂದಿನಿ ಹಾಲಿನ ದರ ಏರಿಕೆ ಬಗ್ಗೆ ನವೆಂಬರ್‌ 20 ರ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ನಂದಿನಿ ಹಾಲಿನ ದರ ಪರಿಷ್ಕರಣೆ ಬಗ್ಗೆ ಮಾಧ್ಯಮವರಿಗೆ ಪ್ರತಿಕ್ರಿಯೆ ನೀಡಿ, ಕಳೆದ ಹಲವಾರು ತಿಂಗಳಿನಿಂದ ಈ ಬಗ್ಗೆ ಚರ್ಚೆಯಾಗುತ್ತಿದ್ದು, ಈ ತಿಂಗಳ 20ನೇ ತಾರೀಖಿನ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಜನರಿಗೆ ಭಾರ ಆಗದಂತೆ, ರೈತರಿಗೆ ಅನುಕೂಲವಾಗುವಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು ಎಂದು ತಿಳಿಸಿದರು.

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಮಾಹಿತಿ ಬಿಡುಗಡೆ ಮಾಡಿದ್ದು, ನಂದಿನಿಯ ಎಲ್ಲಾ ಮಾದರಿಯ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 3 ರೂ ಹೆಚ್ಚಳ ಮಾಡಿರುವುದಾಗಿ ತಿಳಿಸಿತ್ತು ಹಾಗೂ ಸೋಮವಾರ ಮಧ್ಯರಾತ್ರಿಯಿಂದಲೇ ಪ್ರತಿ ಲೀಟರ್‌ ನಂದಿನಿ ಹಾಲು ಮತ್ತು ಮೊಸರಿನ ದರ 3 ರೂ. ಏರಿಕೆ ಮಾಡಲು ಕೆಎಂಎಫ್‌ ಮುಂದಾಗಿತ್ತು.ಹವಾಮಾನ ವೈಪರೀತ್ಯ ಕಾರಣದಿಂದ ಮೇವು ಸಿಗುತ್ತಿಲ್ಲ. ಮೇವಿನ ಬೆಲೆ ಏರಿಕೆಯಾಗಿದೆ. ಜೊತೆಗೆ ಹಸುವಿಗೆ ಚರ್ಮ ಗಂಟು ರೋಗ ಬಾಧಿಸುತ್ತಿದೆ. ಸಾಗಾಣಿಕೆ, ವಿದ್ಯುತ್, ಪ್ಯಾಕಿಂಗ್ ಇತ್ಯಾದಿ ವೆಚ್ಚ ಶೇ.25 – 35 ರಷ್ಟು ಹೆಚ್ಚಳವಾಗಿದೆ. ಈ ಕಾರಣಕ್ಕೆ ಹಾಲು ಮತ್ತು ಮೊಸರಿನ ಬೆಲೆಯನ್ನು ಏರಿಕೆ ಮಾಡಲು ಕೆಎಂಎಫ್‌ ಮುಂದಾಗಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ