Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BREAKING ಕಾಂಗ್ರೆಸ್‌ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ಯಾದಗಿರಿ :ಹೃದಯಾಘಾತದಿಂದ ಯಾದಗಿರಿ ಜಿಲ್ಲೆಯ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ರಾಜಧಾನಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಹೃದಯಾಘಾತದಿಂದ ಮೃತಪಟ್ಟಿದ್ದು, ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಆಪ್ತರಾಗಿದ್ದ ಇವರು, ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕಾಂಗ್ರೆಸ್ ಪಕ್ಷದಿಂದ ರಾಜಕೀಯ ಪ್ರವೇಶಿಸಿ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಹಿರಿಯ ಕಾಂಗ್ರೆಸ್ ನಾಯಕರೆನಿಸಿಕೊಂಡಿದ್ದರು.

ಸುರಪುರ ವಿಧಾನಸಭೆ ಕ್ಷೇತ್ರದ ಎಸ್ ಟಿ ಮೀಸಲು ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ ರಾಜಾ ವೆಂಕಟಪ್ಪ ನಾಯಕ. ಅವರು ಕಾಂಗ್ರೆಸ್ ಪಕ್ಷದಿಂದಲೇ ಪ್ರತಿ ಬಾರಿ ಗೆದ್ದಿದ್ದಾರೆ. 1994, 1999, 2013, 2023ರ ವಿಧಾನಸಭೆ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.

2023ರ ವಿಧಾನಸಭೆ ಚುನಾವಣೆಯಲ್ಲಿ ಅವರು 1,13,559 ಮತಗಳನ್ನು ಪಡೆದು ಜಯಗಳಿಸಿದ್ದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು 10 ದಿನದ ಹಿಂದೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮೊದಲು ಲಿವರ್ ಸಮಸ್ಯೆಯಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಆಸ್ಪತ್ರೆಗೆ ದಾಖಲಾದ ಬಳಿಕ ಹೃದಯದ ತೊಂದರೆ ಸಹ ಕಾಣಿಸಿಕೊಂಡಿತ್ತು. 4 ದಿನದ ಹಿಂದೆ ವಾರ್ಡ್‌ನಿಂದ ಅವರನ್ನು ಐಸಿಯುಗೆ ದಾಖಲು ಮಾಡಲಾಗಿತ್ತು. ಮಂಗಳವಾರ ನಡೆಯುವ ರಾಜ್ಯಸಭಾ ಚುನಾವಣೆಗೆ ಮತದಾನ ಮಾಡಲು ಅಂಬ್ಯುಲೆನ್ಸ್‌ನಲ್ಲಿ ಕರೆತಂದು ಪುತ್ರನ ಜೊತೆ ಬಂದು ಮತದಾನ ಮಾಡಲು ಅನುಮತಿ ಪಡೆಯಲಾಗಿತ್ತು ಎಂದು ಹೇಳಲಾಗಿದೆ.

ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಆಪ್ತರಾಗಿದ್ದ ವೆಂಕಟಪ್ಪ ನಾಯಕ ಅವರು ಜಿಲ್ಲೆ ಮತ್ತು ಅಕ್ಕಪಕ್ಕದ ಜಿಲ್ಲೆಗಳಲ್ಲಿ ಪಕ್ಷ ಕಟ್ಟಲು ಶಕ್ತಿ ಮೀರಿ ಶ್ರಮಿಸಿದ್ದಾರೆ.
ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಕಂಬನಿ ಮಿಡಿದಿದ್ದು ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಆಸ್ಪತ್ರೆಗೆ ತೆರಳಲಿದ್ದಾರೆ. ಸೋಮವಾರ (ಫೆ. 26) ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ಶಾಸಕ ವೆಂಕಟಪ್ಪ ನಾಯಕ ಅವರ ಅಂತಿಮ ದರ್ಶನ ಪಡೆದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂತಾಪ ನುಡಿಗಳು:

ಬಹಳ ಸಂಭಾವಿತ ರಾಜಕಾರಣಿ. ಕ್ಷೇತ್ರದ ಅಭಿವೃದ್ಧಿ, ಜನರ ಸಮಸ್ಯೆಗಳ ಬಗ್ಗೆಯೇ ಹೆಚ್ಚೆಚ್ಚು ಕಾಳಜಿ ವಹಿಸಿದ್ದರು. ಸೋತಾಗಲೂ ಜನರ ನಡುವೆಯೇ ಇದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ವೇರ್ ಹೌಸಿಂಗ್ ಕಾರ್ಪೊರೇಷನ್ ಅಧ್ಯಕ್ಷರಾಗಿ ಕೆಲಸ ಮಾಡಲು ಸಾಧ್ಯವಾಗಲಿಲ್ಲ ಎನ್ನುವ ಬೇಸರ ನನಗಿದೆ. ಮೊನ್ನೆ ಸ್ವಲ್ಪ ಗುಣಮುಖರಾಗುತ್ತಿದ್ದರು. ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎನ್ನುವ ನಿರೀಕ್ಷೆ ಇರಲಿಲ್ಲ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ.

ಶಾಸಕರ ನಿಧನದ ಹಿನ್ನೆಲೆಯಲ್ಲಿ ಸೋಮವಾರದ ಅಧಿವೇಶನವನ್ನು ಸಂತಾಪ ಸೂಚಕವಾಗಿ ಒಂದು ದಿನ ಮುಂದೂಡಲಾಗುವುದು. ಮಂಗಳವಾರ ರಾಜ್ಯಸಭಾ ಚುನಾವಣೆ ಇರುವುದರಿಂದ ಬುಧವಾರಕ್ಕೆ ಅಧಿವೇಶನ ಮುಂದೂಡಬೇಕಾಗುತ್ತದೆ ಎಂದು ಸಿಎಂ ತಿಳಿಸಿದರು.

ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ:

ಬೆಂಗಳೂರು :
ಸುರಪುರ ವಿಧಾನಸಭೆ ಕ್ಷೇತ್ರದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

"ರಾಜಾ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಪಕ್ಷದ ನಿಷ್ಠಾವಂತ ನಾಯಕರಾದ ಇವರು ಕೆಲ ದಿನಗಳ ಹಿಂದಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.

ಅವರ ಆತ್ಮಕ್ಕೆ ಶಾಂತಿ ಸಿಗಲಿ, ಈ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಕರುಣಿಸುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ. ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದೆ.

ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

https://twitter.com/siddaramaiah/status/1761689626605936653?t=ezn6801LYQ2VSMI5_A7Gug&s=19
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ