Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BREAKING ಮನಮೋಹನ್ ಸಿಂಗ್ ನಿಧನ : ಇಂದು ಸರಕಾರಿ ರಜೆ ಘೋಷಣೆ

ಬೆಂಗಳೂರು : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.

ಜೊತೆಗೆ ದಿನಾಂಕ 27.12.2024(ಶುಕ್ರವಾರ) ರಂದು ಸರ್ಕಾರಿ ರಜೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು; ರಾಜ್ಯದಲ್ಲಿ ಒಂದು ವಾರ ಶೋಕಾಚರಣೆ: ಡಿಸಿಎಂ ಡಿ.ಕೆ.ಶಿವಕುಮಾರ್:

"ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶುಕ್ರವಾರ ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು ಮಾಡಲಾಗಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಬೆಳಗಾವಿಯ ಸರ್ಕಿಟ್ ಹೌಸ್ ಅಲ್ಲಿ ಗುರುವಾರ ರಾತ್ರಿ ನಡೆದ ತುರ್ತು ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, "ಸಮಾವೇಶ ನಡೆಯಬೇಕಿದ್ದ ವೇದಿಕೆಯಲ್ಲಿಯೇ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿದೆ. ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಟರ ಬಳಿ ಮಾತನಾಡಿ ಮುಂದಿನ ಕಾರ್ಯಕ್ರಮಗಳ ಬಗ್ಗೆ ಆದಷ್ಟು ಬೇಗ ತಿಳಿಸಲಾಗುವುದು" ಎಂದರು.

"ಶುಕ್ರವಾರ ಸರ್ಕಾರದ ಹಾಗೂ ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ರಾಜ್ಯದಲ್ಲಿ ಒಂದು ವಾರಗಳ ಕಾಲ ಶೋಕಾಚರಣೆ ಮಾಡಲಾಗುವುದು" ಎಂದು ಹೇಳಿದರು.

"ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಹೊರಜಿಲ್ಲೆಗಳಿಂದ ಜನರು ಆಗಮಿಸುವುದು ಬೇಡ. ಬದಲಾಗಿ ಬೆಳಗಾವಿಯಲ್ಲಿ ಇರುವವರು ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಗೌರವ ಸಲ್ಲಿಸಬೇಕು. ಹೊರ ಊರುಗಳಿಂದ ಹೊರಡುವ ಅನೇಕ ಕಾರ್ಯಕರ್ತರು ಹಾಗೂ ನಾಯಕರುಗಳು ಬೆಳಗಾವಿಗೆ ಬರುವುದು ಬೇಡ. ಈಗಾಗಲೇ ಹೊರ ಊರುಗಳಿಂದ ಬಂದಿರುವವರು ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು" ಎಂದು ಮನವಿ ಮಾಡಿದರು.

"ಹೊರ ಊರುಗಳಿಂದ ಬಂದಿರುವ ಸಂಸದರು ಹಾಗೂ ನಾಯಕ ಹೊಣೆ ಹೊತ್ತಿರುವ ಉಸ್ತುವಾರಿ ಸಮಿತಿಯವರು ಅವರು ತೆರಳುವ ತನಕ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ನಿಮ್ಮ ಜವಾಬ್ದಾರಿ ಮರೆಯಬಾರದು" ಎಂದು ತಿಳಿಸಿದರು.

ನೀವು ಸಹ ದೆಹಲಿಗೆ ತೆರಳುವಿರಾ ಎಂದು ಕೇಳಿದಾಗ, "ನಾನು ಪಕ್ಷದ ಅಧ್ಯಕ್ಷನಾಗಿ ಮನಮೋಹನ್ ಸಿಂಗ್ ಅವರ ಅಂತಿಮ ದರ್ಶನದಲ್ಲಿ ಭಾಗವಹಿಸುವುದು ನಮ್ಮ ಕರ್ತವ್ಯ. ರಾಜ್ಯದ ಹಿರಿಯ ನಾಯಕರು ಸೇರಿದಂತೆ ಒಂದಷ್ಟು ಮಂದಿ ದೆಹಲಿಗೆ ತೆರಳಲಿದ್ದೇವೆ. ನಾವೆಲ್ಲರೂ ಅವರ ಮಾರ್ಗದರ್ಶನದಲ್ಲಿ ಹಾಗೂ ಕೈ ಕೆಳಗೆ ಕೆಲಸ ಮಾಡಿದವರು" ಎಂದು ಹೇಳಿದರು.

ಕರ್ನಾಟಕದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ಕೊಟ್ಟವರು ಸಿಂಗ್:

"ಮನಮೋಹನ್ ಸಿಂಗ್ ಅವರು ಕರ್ನಾಟಕಕ್ಕೆ ಅದರಲ್ಲೂ ಬೆಂಗಳೂರು ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದವರು. ನರ್ಮ್ ಯೋಜನೆ ಮೂಲಕ ಅನೇಕ ನಗರಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದರು. ಬೆಂಗಳೂರಿನ ಅನೇಕ ಮೇಲ್ಸೇತುವೆಗಳು ಇವರು ನೀಡಿದ ಕೊಡುಗೆಗಳು. ಮನ ಮೋಹನ್ ಸಿಂಗ್ ಅವರ ಬಗ್ಗೆ ಮಾತನಾಡಲು ಒಂದು ದಿನವೂ ಸಾಲುವುದಿಲ್ಲ. ಅವರು ದೇಶದ ಎಲ್ಲಾ ವರ್ಗದ ಜನರಿಗೆ ಮರೆಯಲಾಗದ ಕೊಡುಗೆ ಕೊಟ್ಟಿದ್ದಾರೆ. ರೈತರ ಸಾಲಮನ್ನಾ ಮಾಡಿ ಅವರ ಪರವಾಗಿ ದೃಢವಾಗಿ ನಿಂತವರು" ಎಂದು ಸ್ಮರಿಸಿದರು.

"ಪ್ರತಿ ಕೆಲಸದಲ್ಲಿಯೂ ಗಾಂಭೀರ್ಯತೆ ಪ್ರಾಮಾಣಿಕತೆಯನ್ನು ಉಳಿಸಿಕೊಂಡಿದ್ದವರು ಮನಮೋಹನ್ ಸಿಂಗ್ ಅವರು. ಅವರ ಆಡಳಿತ ಕಾಲದಲ್ಲಿ ಬಡವರ ಪರವಾಗಿ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದಾರೆ. ನರೇಗಾ ಮೂಲಕ ಗ್ರಾಮೀಣ ಜನರ ಬದುಕಿನಲ್ಲಿ ಉದ್ಯೋಗ ಗ್ಯಾರಂಟಿ ಸೃಷ್ಟಿ ಮಾಡಿದವರು. ಆಹಾರ ಭದ್ರತಾ ಕಾಯ್ದೆ, ಮಾಹಿತಿ ಹಕ್ಕು ಸೇರಿದಂತೆ ಈ ದೇಶವನ್ನು ಗಟ್ಟಿಗೊಳಿಸುವ ಅನೇಕ ಕಾಯ್ದೆಗಳನ್ನು ನೀಡಿದವರು" ಎಂದರು.

"'ಗಾಂಧಿ ಭಾರತ' ಕಾರ್ಯಕ್ರಮ ಅಂಗವಾಗಿ ಬೆಳಗಾವಿಯಲ್ಲಿ ಮಾಡಿರುವ ವಿದ್ಯುತ್ ದೀಪಾಲಂಕಾರವನ್ನು ಸಾರ್ವಜನಿಕರ ವೀಕ್ಷಣೆಗೆ ಉಳಿಸಿಕೊಳ್ಳುವ ಬಗ್ಗೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ ಶುಕ್ರವಾರ ಬೆಳಿಗ್ಗೆ ಮಾಹಿತಿ ನೀಡಲಾಗುವುದು. ಸಾಕಷ್ಟು ಜನರು ದೀಪಾಲಂಕಾರವನ್ನು ವೀಕ್ಷಿಸುತ್ತಿದ್ದಾರೆ. ಈ ಕಾರಣಕ್ಕೆ ಉಳಿಸಿಕೊಳ್ಳುವ ಬಗ್ಗೆ ತೀರ್ಮಾನ ಮಾಡಲಾಗುವುದು" ಎಂದು ಹೇಳಿದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ :

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

"ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಗಿದೆ. ಮನಮೋಹನ್ ಸಿಂಗ್ ಕೇವಲ ರಾಜಕಾರಣಿ ಅಲ್ಲ. ಅವರೊಬ್ಬ ದೇಶ ಹಾಗೂ ಈ ಜಗತ್ತು ಕಂಡ ಮಹಾನ್ ಆರ್ಥಿಕ ತಜ್ಞ.

ಇಂದು ಭಾರತ ಜಾಗತಿಕ ಮಟ್ಟದಲ್ಲಿ ಆರ್ಥಿಕ ಪ್ರಗತಿ ಸಾಧಿಸಿದ್ದರೆ ಅದಕ್ಕೆ ಪ್ರಮುಖ ಕಾರಣ ಮನಮೋಹನ್ ಸಿಂಗ್ ಅವರ ಕ್ರಾಂತಿಕಾರಿ ನೀತಿಗಳು. ದೇಶ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾಗ ಜಾಗತೀಕರಣಕ್ಕೆ ಒಡ್ಡಿಕೊಳ್ಳುವ ಮೂಲಕ ದೇಶವನ್ನು ಕಾಪಾಡಿದ ಆಪದ್ಭಾಂದವ.

ಇದೇ ಕಾರಣಕ್ಕೆ ಸೋನಿಯಾ ಗಾಂಧಿ ಅವರು ತಮ್ಮ ಪಾಲಿಗೆ ಬಂದ ಪ್ರಧಾನಿ ಹುದ್ದೆಯನ್ನು ಮನಮೋಹನ್ ಸಿಂಗ್ ಅವರಿಗೆ ಬಿಟ್ಟುಕೊಟ್ಟರು. ಯುಪಿಎ ಮೊದಲ ಹಾಗೂ ಎರಡನೇ ಸರ್ಕಾರದ ಅವಧಿಯಲ್ಲಿ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ನರೇಗಾ, ಮಾಹಿತಿ ಹಕ್ಕು, ಶೈಕ್ಷಣಿಕ ಹಕ್ಕು, ಆಹಾರ ಭದ್ರತಾ ಕಾಯ್ದೆಯಂತಹ ಕ್ರಾಂತಿಕಾರಿ ಯೋಜನೆಗಳನ್ನು ದೇಶದ ಜನತೆಗೆ ಕೊಟ್ಟಿದ್ದಾರೆ.

ಇಂದು ಸಿಂಗ್ ಅವರು ದೈಹಿಕವಾಗಿ ನಮ್ಮಿಂದ ದೂರವಾಗಿರಬಹುದು. ಆದರೆ ಅವರು ಈ ದೇಶಕ್ಕೆ ನೀಡಿರುವ ಕೊಡುಗೆ ಮೂಲಕ ಸದಾ ಜೀವಂತವಾಗಿರುತ್ತಾರೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರು, ಸ್ನೇಹಿತರು ಹಾಗೂ ಅವರ ಒಡನಾಡಿಗಳಿಗೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ