Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾನೂನು ಪದವೀಧರರಿಗೆ ಉಜ್ವಲ ಅವಕಾಶ : ನ್ಯಾಯಾಧಿಕರಣದಲ್ಲಿ ತರಬೇತಿಗೆ ಅರ್ಜಿ ಆಹ್ವಾನ

 

 

ಬೆಳಗಾವಿ: ಪ್ರಸಕ್ತ ಸಾಲಿಗೆ ಜಿಲ್ಲೆಯ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧಿಕರಣದಲ್ಲಿ ತರಬೇತಿ ನೀಡುವ ಕುರಿತು ಅರ್ಹ ಅಭ್ಯರ್ಥಿಗಳಿಂದ ನಿಬಂಧನೆಗೊಳಗೊಂಡಂತೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಆನಲೈನ್ ಮೂಲಕ ಜುಲೈ 31 ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಿಬಂಧನೆಗಳು: ಅಭ್ಯರ್ಥಿಗಳು ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ಹಾಗೂ ವಕೀಲ ವೃತ್ತಿ ನಡೆಸಲು, ಕಾನೂನು ಪದವೀಧರರು, ಮಹಿಳಾ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕದಂದು ಅಭ್ಯರ್ಥಿಯ ವಯಸ್ಸು 40 ವರ್ಷ ಮೀರಿರಬಾರದು. ಅಧಿಕೃತ ಪ್ರಮಾಣ ಪತ್ರ ಲಗತ್ತಿಸಬೇಕು. ಎರಡು ವರ್ಷಗಳವರೆಗೆ ಮಾಹೆಯಾನ ರೂ.1೦,೦೦೦ ತರಬೇತಿ ಭತ್ಯೆ ನೀಡಲಾಗುವುದು, ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಉದ್ಯೋಗ ದೊರೆತಲ್ಲಿ ಈ ನಿಬಂಧನೆ ಅನ್ವಯಿಸುವುದಿಲ್ಲ, ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಸರ್ಕಾರಿ ವಕೀಲರು ಅಥವಾ 2೦ ವರ್ಷಗಳಿಗಿಂತ ಕಡಿಮೆ ಇಲ್ಲದ ವಕೀಲ ವೃತ್ತಿಯಲ್ಲಿ ಅನುಭವವಿರುವ ಖಾಸಗಿ ಹಿರಿಯ ವಕೀಲರಲ್ಲಿ ತರಬೇತಿ ಪಡೆಯಲು ನಿಯೋಜಿಸಲಾಗುವುದು.
ಆಯ್ಕೆಯಾದ ಅಭ್ಯರ್ಥಿಯು ಸರ್ಕಾರದ ಎಲ್ಲ ನಿಭಂದನೆಗೆ ಬದ್ಧನಾಗಿರುತ್ತೆನೆ ಎಂದು 2೦ ರೂ.ಗಳ ಛಾಪಾ ಕಾಗದದ ಮೇಲೆ ಮುಚ್ಚಳಿಕೆಯನ್ನು ಬರೆದುಕೊಡತಕ್ಕದ್ದು, ಸುಳ್ಳು ಮಾಹಿತಿ ಹಾಗೂ ಪ್ರಮಾಣ ಪತ್ರಗಳನ್ನು ಒದಗಿಸಿದಲ್ಲಿ ಶಿಕ್ಷೆಗೊಳಪಡುವುದಲ್ಲದೆ ಅವನು ಪಡೆದಕೊಂಡ ತರಬೇತಿ ಭತ್ಯೆಯ ಪೂರ್ತಿ ಹಣವನ್ನು ವಾರ್ಷಿಕ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುತ್ತದೆ, ಬಾಕಿ ವಸೂಲಿ ಉಳಿದಲ್ಲಿ ಭೂ ಕಂದಾಯ ಬಾಕಿ ನಿಯಮಾವಳಿ ಅನ್ವಯ ವಸೂಲಿ ಮಾಡಲಾಗುತ್ತದೆ.
ಭರ್ತಿ ಮಾಡಿದ ಆನ್-ಲೈನ್ ಅರ್ಜಿಯೊಂದಿಗೆ ಪದವಿ ಪರೀಕ್ಷೆ ಹಾಗೂ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ಕಾನೂನು ಪರೀಕ್ಷೆಗಳ ದೃಢಿಕೃತ ಅಂಕಪಟ್ಟಿ ಮತ್ತು ತೇರ್ಗಡೆ ಹೊದಿದ ಪ್ರಮಾಣ ಪತ್ರ, ಜನ್ಮ ದಿನಾಂಕ ಪ್ರಮಾಣ ಪತ್ರ ಅಥವಾ ಟಿ.ಸಿ ಮತ್ತು ಬಾರ್ ಅಸೋಶಿಯೇಶನ್ ದಲ್ಲಿ ಸದಸ್ಯತ್ವ ಪಡೆದ ಪ್ರಮಾಣ ಪತ್ರ ಲಗತ್ತಿಸಿ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಛೇರಿಗೆ ಸಲ್ಲಿಸಬಹುದು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ