Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇನ್ನೂ ಹಸಿರು ನಿಶಾನೆ ತೋರದ ಬ್ರಿಟನ್ : ಸದ್ಯ ಭಾರತದಲ್ಲೇ ಆಶ್ರಯ ಸಾಧ್ಯತೆ

ನವದೆಹಲಿ: ಬಾಂಗ್ಲಾದೇಶದ ನಿಕಟ ಪೂರ್ವ ಪ್ರಧಾನಿಯವರಿಗೆ ರಕ್ಷಣೆ ನೀಡಲು ಬ್ರಿಟನ್ ಇದುವರೆಗೆ ಹಸಿರು ನಿಶಾನೆ ತೋರಿಲ್ಲ. ಹೀಗಾಗಿ ಅವರು ಸದ್ಯಕ್ಕೆ ಭಾರತದಲ್ಲಿ ಉಳಿಯುವ ಸಾಧ್ಯತೆ ಇದೆ.

ಮೀಸಲಾತಿ ಪ್ರತಿಭಟನೆ ಹಿಂಸಾರೂಪ ಪಡೆದ ಹಿನ್ನೆಲೆಯಲ್ಲಿ ಜೀವಭಯದಿಂದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಢಾಕಾ ತೊರೆದ ಬಾಂಗ್ಲಾದೇಶದ ಶೇಖ್ ಹಸೀನಾ ಇನ್ನೆರಡು ದಿನ ಭಾರತದಲ್ಲೇ ಉಳಿಯಲಿದ್ದಾರೆ. ಭಾರತದ ರಫೇಲ್ ಯುದ್ಧ ವಿಮಾನಗಳ ಬೆಂಗಾವಲಿನಲ್ಲಿ ಸೋಮವಾರ ಸಂಜೆ ನವದೆಹಲಿ ಬಳಿಯ ಹಿಂಡನ್ ವಾಯುನೆಲೆಗೆ ಸೇನಾ ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಹಸೀನಾ ಅವರನ್ನು ಅಜ್ಞಾತ ಸ್ಥಳದಲ್ಲಿ ಇರಿಸಲಾಗಿದೆಯಲ್ಲದೆ, ಭಿಗಿ ಭದ್ರತೆಯನ್ನೂ ನೀಡಲಾಗಿದೆ.

ಜೀವಭಯದಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಹಸೀನಾ ಅವರು ಲಂಡನ್‌ಗೆ ತೆರಳಿ ಅಲ್ಲಿಯೇ ಜೀವಿಸುವ ಯೋಜನೆ ಹೊಂದಿದ್ದರು. ಆದರೆ ಹಸೀನಾ ಅವರು ಯಾವುದೇ ತನಿಖೆ ಎದುರಿಸುವ ಸನ್ನಿವೇಶ ಎದುರಾದರೆ, ಅದಕ್ಕೆ ಬ್ರಿಟನ್ ಸರ್ಕಾರ ಕಾನೂನಾತ್ಮಕ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಬ್ರಿಟನ್ ಸ್ಪಷ್ಟ ಸಂದೇಶ ರವಾನಿಸಿದ ನಂತರ ಹಸೀನಾ ಅವರು ತಮ್ಮ ಯೋಜನೆಯನ್ನು ಒಂದೆರಡು ದಿನಗಳ ಮಟ್ಟಿಗೆ ಮುಂದೂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಲಂಡನ್‌ಗೆ ಹೋಗುವ ಯೋಜನೆಯನ್ನು ಭಾರತಕ್ಕೆ ತಿಳಿಸಿಯೇ ಅವಾಮಿ ಲೀಗ್‌ನ ನಾಯಕಿ ಹಸೀನಾ ಹಿಂಡನ್ ವಾಯುನೆಲೆಗೆ ಬಂದಿಳಿದಿದ್ದರು. ಆದರೆ ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮ್ಮಿ, ಬಾಂಗ್ಲಾದೇಶದಲ್ಲಿ ಅರಾಜಕತೆ ತಾಂಡವವಾಡುತ್ತಿದೆ. ಹಿಂಸಾಚಾರಕ್ಕೆ ಹಲವು ಮುಗ್ಧರು ಬಲಿಯಾಗಿದ್ದಾರೆ. ಈ ಕುರಿತು ವಿಶ್ವಸಂಸ್ಥೆ ನೇತೃತ್ವದಲ್ಲಿ ಸ್ವತಂತ್ರ ಮತ್ತು ವಿಸ್ತ್ರತ ತನಿಖೆಯ ಅನಿವಾರ್ಯತೆ ಇದೆ ಎಂದಿದ್ದರಿಂದ ಹಸೀನಾ ಗೊಂದಲಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ. ಒಟ್ಟಾರೆ ಸದ್ಯದ ಪರಿಸ್ಥಿತಿ ಗಮನಿಸಿದರೆ ಅವರು ಭಾರತದಲ್ಲಿ ತಮ್ಮ ಪರಮಾಪ್ತ ಪ್ರಧಾನಿ ನರೇಂದ್ರ ಮೋದಿ ಅವರ ಸಹಾಯ ಕೋರಿ ಇಲ್ಲಿ ಉಳಿಯುವ ಸಾಧ್ಯತೆ ಹೆಚ್ಚಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ