Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಆರ್‌ಎಸ್‌ ಯುವ ಶಾಸಕಿ ಲಾಸ್ಯ ನಂದಿತಾ ರಸ್ತೆ ಅಪಘಾತದಲ್ಲಿ ಸಾವು

ಹೈದರಾಬಾದ್‌:
ತೆಲಂಗಾಣದ ಬಿಆರ್‌ಎಸ್ ಪಕ್ಷದ ಶಾಸಕಿ ಲಾಸ್ಯ ನಂದಿತಾ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ ಕೇವಲ 37 ವರ್ಷ ವಯಸ್ಸಾಗಿತ್ತು.

ಹೈದರಾಬಾದ್‌ನ ಔಟರ್‌ ರಿಂಗ್‌ ರೋಡ್‌ನಲ್ಲಿ ನಂದಿತಾ ಅವರು ಪ್ರಯಾಣಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

10 ದಿನಗಳ ಹಿಂದೆ, ಶಾಸಕಿ ನಾರ್ಕಟ್‌ಪಲ್ಲಿ ಅಪಘಾತದಲ್ಲಿ ಅಪಾಯದಿಂದ ಪಾರಾಗಿದ್ದರು. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಭಾಷಣ ಮಾಡುತ್ತಿದ್ದ ರ್ಯಾಲಿಗೆ ತೆರಳುತ್ತಿದ್ದ ವೇಳೆ ಪಾನಮತ್ತ ಚಾಲಕನೊಬ್ಬ ಆಕೆಯ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಈ ಅಪಘಾತದಲ್ಲಿ ಆಕೆಯ ಹೋಮ್ ಗಾರ್ಡ್ ಮೃತಪಟ್ಟಿದ್ದು, ಶಾಸಕಿಗೆ ಸಣ್ಣಪುಟ್ಟ ಗಾಯಗಳಾಗಿತ್ತು. ಲಾಸ್ಯ ನಂದಿತಾ ಅವರು ಸಿಕಂದರಾಬಾದ್ ಕಂಟೋನ್ಮೆಂಟ್‌ (ಪ.ಜಾತಿ) ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿದ್ದರು.
1986 ರಲ್ಲಿ ಹೈದರಾಬಾದ್‌ನಲ್ಲಿ ಜನಿಸಿದ ಲಾಸ್ಯ ನಂದಿತಾ ಸುಮಾರು ಒಂದು ದಶಕದ ಹಿಂದೆ ರಾಜಕೀಯಕ್ಕೆ ಕಾಲಿಟ್ಟರು. 2023 ರ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸಿಕಂದರಾಬಾದ್ ಕಂಟೋನ್ಮೆಂಟ್‌ನಿಂದ ಶಾಸಕರಾಗಿ ಆಯ್ಕೆಯಾಗುವ ಮೊದಲು ಅವರು ಕವಾಡಿಗುಡ ವಾರ್ಡ್‌ನಲ್ಲಿ ಕಾರ್ಪೊರೇಟರ್ ಆಗಿ ಆಯ್ಕೆಯಾಗಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ