Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರುನಾಡ ಈ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ

ದೆಹಲಿ : ಲೋಕಸಭಾ ಚುನಾವಣೆ ಬಳಿಕ ಕರ್ನಾಟಕದಲ್ಲಿ ಮತ್ತೊಂದು ಎಲೆಕ್ಷನ್‌ಗೆ ಅಖಾಡ ರೆಡಿಯಾಗಿದೆ. ಕೇಂದ್ರ ಚುನಾವಣಾ ಆಯೋಗ ಇಂದು ರಾಜ್ಯದ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ.

ನವೆಂಬರ್ 13ಕ್ಕೆ ಕರ್ನಾಟದ 3 ವಿಧಾನಸಭೆ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ನಡೆಯಲಿದೆ. ಅಕ್ಟೋಬರ್ 25ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 28 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ನವೆಂಬರ್ 13 ರಂದು ಮೂರು ಅಸೆಂಬ್ಲಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ಚನ್ನಪಟ್ಟಣ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಯಿಂದ ಶಿಗ್ಗಾಂವಿ ಹಾಗೂ ಬಳ್ಳಾರಿ ಕಾಂಗ್ರೆಸ್ ಸಂಸದ ಈ. ತುಕಾರಾಮ್ ಅವರ ರಾಜೀನಾಮೆಯಿಂದ ಸಂಡೂರು ವಿಧಾನಸಭಾ ಕ್ಷೇತ್ರ ತೆರವಾಗಿದೆ.

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪಚುನಾವಣೆ ನಿಗಧಿಯಾಗಿದೆ. ನವೆಂಬರ್ 23ರಂದು ಈ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಘೋಷಣೆ ಆಗುತ್ತಿದೆ.

ಮಹಾರಾಷ್ಟ್ರ ಮತ್ತು ಜಾರ್ಖಂಡ್ ಚುನಾವಣೆಗಳತ್ತ ಎಲ್ಲರ ಚಿತ್ತ :
ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ರಾಜ್ಯಗಳ ವಿಧಾನಸಭೆ ಚುನಾವಣಾ ದಿನಾಂಕಗಳನ್ನು ಚುನಾವಣಾ ಆಯೋಗ ಮಂಗಳವಾರ ಪ್ರಟಿಸಿದೆ. ಮಹಾರಾಷ್ಟ್ರ ವಿಧಾನಸಭೆಗೆ ಒಂದೇ ಹಂತದಲ್ಲಿ ನವೆಂಬರ್ 20 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಜಾರ್ಖಂಡ್​ನಲ್ಲಿ ನವೆಂಬರ್ 13 ಹಾಗೂ ನವೆಂಬರ್ 20ರಂದು ಎರಡು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಗೆ ಅಕ್ಟೋಬರ್ 22ರಂದು ಅಧಿಸೂಚನೆ ಹೊರಬೀಳಲಿದೆ, ನವೆಂಬರ್ 4 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಮತ ಎಣಿಕೆ ನವೆಂಬರ್ 23 ರಂದು ನಡೆಯಲಿದೆ.

ಜಾರ್ಖಂಡ್‌ನಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದಲ್ಲಿ ಜಾರ್ಖಂಡ್​ನಲ್ಲಿ ಅಕ್ಟೋಬರ್ 18ರಂದು ಅಧಿಸೂಚನೆ ಹೊರಬೀಳಲಿದೆ, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನಾಂಕವಾಗಿರುತ್ತದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 30 ಕೊನೆಯ ದಿನಾಂಕವಾಗಿದೆ. ಎರಡನೇ ಹಂತದ ಚುನಾವಣೆ ನವೆಂಬರ್‌ 20ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಅಕ್ಟೋಬರ್‌ 28ರಂದು ಕೊನೆಯ ದಿನವಾಗಿದೆ. ನಾಮಪತ್ರ ಹಿಂಪಡೆಯಲು ನವೆಂಬರ್‌ 1 ಕೊನೆಯ ದಿನವಾಗಿದೆ. ನವೆಂಬರ್‌ 23ರಂದು ಮತ ಎಣಿಕೆ ನಡೆಯಲಿದೆ.

ಮಹಾರಾಷ್ಟ್ರ ವಿಧಾನಸಭೆಯು 288 ಸ್ಥಾನಗಳನ್ನು ಹೊಂದಿದ್ದು, ವಿಧಾನಸಭೆಯ ಅವಧಿ ನವೆಂಬರ್ 26 ರಂದು ಕೊನೆಗೊಳ್ಳಲಿದೆ. ಜಾರ್ಖಂಡ್‌ ವಿಧಾನಸಭೆಯು 81 ಸ್ಥಾನಗಳನ್ನು ಹೊಂದಿದ್ದು, ಇದರ ಅವಧಿ 2025ರ ಜನವರಿ 5ರಂದು ಕೊನೆಗೊಳ್ಳಲಿದೆ.
ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಶಿವಸೇನೆ, ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಒಳಗೊಂಡಿರುವ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಸರ್ಕಾರವು ಆಡಳಿತ ನಡೆಸಿದ್ದು, ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಶರದ್ ಪವಾರ್ (ಶರದ್ಚಂದ್ರ ಪವಾರ್) ನೇತೃತ್ವದ ಎನ್‌ಸಿಪಿ (ಎಂವಿಎ) ಅನ್ನು ಒಳಗೊಂಡಿರುವ ಪ್ರತಿಪಕ್ಷಗಳ ಮೈತ್ರಿಕೂಟವಾದ ಮಹಾ ವಿಕಾಸ್ ಅಘಾಡಿ (ಎಂವಿಎ) ವಿರುದ್ಧ ಸ್ಪರ್ಧಿಸಲಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ