Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿ


ಬೆಳಗಾವಿ: ನಗರದ ಕೆಎಲ್ಇ. ಸಂಸ್ಥೆಯ, ರಾಜಾ ಲಖಮಗೌಡ ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯದ ಸರ್ ಸಿ ವಿ ರಾಮನ್ ಸಭಾಂಗಣದಲ್ಲಿ ಮಂಗಳವಾರ 2026- 27 ನೇ ಸಾಲಿನ  ಬಿ ಎಸ್ಸಿ ಪ್ರಥಮ ವರ್ಷದ ವಿದ್ಯಾರ್ಥಿಗಳ   ಸ್ವಾಗತ  ಹಾಗೂ ದೀಕ್ಷಾರಂಭ ಎರಡನೆಯ ದಿನದ ಕಾರ್ಯಕ್ರಮ ಆಯೋಜಿಸಲಾಗಿತ್ತು .

ಹುಬ್ಬಳ್ಳಿಯ ಪ್ರೇರಣಾ ಸಂಸ್ಥೆಯ ಮುಖ್ಯಸ್ಥ ಪ್ರವೀಣ ಗುಡಿ ಸಂಪನ್ಮೂಲ ವ್ಯಕ್ತಿ ಮಾತನಾಡಿ, ಸಂವಹನದ  ವಿವಿಧ ಕೌಶಲ್ಯಗಳು ಮತ್ತು ನಾಯಕತ್ವದ ಗುಣಗಳು ಸ್ವ ಸಾಮರ್ಥ್ಯದ ಸಕಾರಾತ್ಮಕವಾದ ಅಂಶಗಳನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.
      
ಪ್ರತಿಯೊಂದು ವಿದ್ಯಾರ್ಥಿಗೂ ಗುರಿ ಇರಬೇಕು. ಜೀವನ ಉದ್ದಕ್ಕೂ ಕಲಿಕೆ ನಿರಂತರವಾಗಿರಬೇಕು. ಪ್ರಯೋಗಾಲಯದಲ್ಲಿ ವಿದ್ಯಾರ್ಥಿಗಳು ಅನೇಕ ವಿಷಯದಲ್ಲಿ ಸಂವಾದ ಚರ್ಚೆ ಮಾಡುತ್ತಿರಬೇಕು. ವಿದ್ಯಾರ್ಥಿಗಳ ಸ್ಪೂರ್ತಿದಾಯಕ ಮಾತುಗಳಿಂದ ಜೀವನ ರೂಪಿಸಿಕೊಳ್ಳಬೇಕು. ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ಸು ಗಳಿಸಬೇಕು ಎಂದು ಹೇಳಿದರು.

 ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ  ಪ್ರಾಚಾರ್ಯೆ ಡಾ.  ಜ್ಯೋತಿ ಕವಳೇಕರ  ಮಾತನಾಡಿ, 
ಗುಣಾತ್ಮಕ ಸಂಪನ್ಮೂಲ ವ್ಯಕ್ತಿಗಳಿಂದ ಹೊಸ ಹೊಸ ವಿಷಯಗಳನ್ನು ತಿಳಿದುಕೊಂಡು ವಿದ್ಯಾರ್ಥಿಗಳು ಮುನ್ನಡೆಯಬೇಕು. ಯುವಕರು ವಿವಿಧ ವಿಷಯಗಳ ಬಗ್ಗೆ ಪರಿಪೂರ್ಣವಾದ ಜ್ಞಾನವನ್ನು ಹೊಂದಿರಬೇಕೆಂದು ಕರೆ ನೀಡಿದರು
 
ಸ್ನೇಹಾ  ಪ್ರಾರ್ಥಿಸಿದರು.ಡಾ.  ಮಹೇಶ್ ಬುರುಡ ಸ್ವಾಗತಿಸಿದರು ಡಾ  ದಿನೇಶ್ ಪಾಟೀಲ ಪರಿಚಯಿಸಿದರು.   ನೇಹಾ ಪಾಟೀಲ ವಂದಿಸಿದರು.  ರಚನಾ ಶೇರಿ  ನಿರೂಪಿಸಿದರು.

ಸಮಾರಂಭದಲ್ಲಿ ಮಹಾವಿದ್ಯಾಲಯದ ಎಲ್ಲಾ ಸಿಬ್ಬಂದಿಯವರು ಹಾಗೂ ಬಿಎಸ್ಸಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಹುಕೋಟಿ ವಂಚನೆ : ನೀಲಣ್ಣವರ, ಆಪ್ತರ ನಿವಾಸಗಳ ಮೇಲೆ ಇಡಿ ದಾಳಿSIR : ಗಣತಿ ನಮೂನೆ ಸಲ್ಲಿಸಲು 17 ರವರೆಗೆ ಅವಕಾಶಈ ನಿಗೂಢ ಬಾವಿಯಲ್ಲಿ ಮತ್ತೆ ಅಚ್ಚರಿ ; ಸಮುದ್ರದ ಅಲೆಯಂತೆ ತನ್ನಷ್ಟಕ್ಕೆ ತಾನೇ ಏರಿಳಿಯುವ ನೀರು..!ವಿಭಾಗೀಯ ಕಚೇರಿಗಳನ್ನು ಬೆಳಗಾವಿಯಲ್ಲಿ ಸ್ಥಾಪಿಸಲು ಕ್ರಮ ಕೈಕೊಂಡವರು ಅರಸುಮದುವೆ ಮನೆಯಲ್ಲಿ ಪೊಲೀಸ್ ಅಧಿಕಾರಿ ಹತ್ಯೆ ; ಹೆಸರು ಬದಲಿಸಿಕೊಂಡು ನಕಲಿ ವೈದ್ಯನಾಗಿ ಬದುಕಿದ್ದ ಆರೋಪಿ 28 ವರ್ಷಗಳ ನಂತರ ಸೆರೆ…!ಕರ್ನಾಟಕದ 4 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆಪುತ್ರಿಯರಿಗಾಗಿ ಜೀವನ ಮುಡಿಪಾಗಿಟ್ಟಿದ್ದ ತಂದೆ ವೃದ್ಧಾಶ್ರಮದಲ್ಲಿ ನಿಧನ ; ₹5100 ಕಳುಹಿಸಿ ವಿಡಿಯೊ ಕಾಲ್‌ನಲ್ಲಿ ಕೊನೆ ವಿದಾಯ ಹೇಳಿದ ಪುತ್ರಿಯರು...!ಯುವಜನತೆ  ಪಠ್ಯ ಮತ್ತು ಪಠ್ಯೇತರ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ವ್ಯಕ್ತಿತ್ವ ರೂಪಿಸಿಕೊಳ್ಳಿ : ಕುಲಪತಿ ತ್ಯಾಗರಾಜಗುರಿ, ಶಿಸ್ತು ಮತ್ತು ಸಾಧನೆಯಿಂದ ಯಶಸ್ಸು ಸಾಧ್ಯ: ಡಾ. ಸಿದ್ದು ಹುಲ್ಲೊಳ್ಳಿ  ಲಕ್ಷ್ಮೀ ಇದ್ದರೆ DK ಸಂಪುಟಕ್ಕೆ ಶೋಭೆ:  ಹೆಬ್ಬಾಳ್ಕರ್ ಯಾಕೆ ಸಂಪುಟಕ್ಕೆ ಅತ್ಯಂತ ಅವಶ್ಯಕ ಗೊತ್ತೇ ? ಬೆಳಗಾವಿಗೆ ಅಭಿವೃದ್ಧಿಯ ಹೊಳೆಯನ್ನೇ ಹರಿಸಿದ್ದ ಮಹಾನಾಯಕಿ