Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಬೆಳಗಾವಿ, ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ₹ 10,433.72 ಕೋಟಿ ಮೊತ್ತದ ಬಂಡವಾಳ ಹೂಡಿಕೆ: ಸಿಎಂ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಇಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (ಎಸ್‌ಎಚ್‌ಎಲ್‌ಸಿಸಿ) 63ನೇ ಸಭೆಯಲ್ಲಿ, ರಾಜ್ಯದಾದ್ಯಂತ 27,067 ಉದ್ಯೋಗಗಳನ್ನು ಸೃಷ್ಟಿಸುವ ₹ 17835.9 ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ದೊರೆತಿದ್ದು, ಇದರಲ್ಲಿ ₹ 8220.05 ಕೋಟಿ ಮೊತ್ತದ 6 ಹೊಸ ಯೋಜನೆಗಳು ಮತ್ತು ₹ 9,615.85 ಕೋಟಿ ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳು ಇವೆ.

ʼಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ ₹ 10,433.72 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

‘ವಿಸ್ಟ್ರಾನ್ ಇನ್ಫೊಕಾಂ ಮ್ಯಾನುಫ್ಯಾಕ್ಚರಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ₹ 2095 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‌ಫೋನ್‌ ತಯಾರಿಕಾ ಘಟಕ ಆರಂಭಿಸಲಿದೆ. ಇದರಿಂದ 21723 ಜನರಿಗೆ ಉದ್ಯೋಗಗಳು ದೊರೆಯಲಿವೆʼ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಭೆಯಲ್ಲಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ, ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಉಪಸ್ಥಿತರಿದ್ದರು.

ಹೊಸ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು : ರಾಜ್ಯದಲ್ಲಿ ಹೊಸದಾಗಿ ಬಂಡವಾಳ ಹೂಡಿಕೆ ಮಾಡಲಿರುವ ಒಟ್ಟು 6 ಕಂಪನಿಗಳಾದ - ಎಸ್‍ಟಿಟಿ ಗ್ಲೋಬಲ್ ಡೇಟಾ ಸೆಂಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಇಂಡಿಯನ್ ಕೇನ್ ಪವರ್ ಲಿಮಿಟೆಡ್, ಐ.ಸಿ.ಟಿ ಸರ್ವಿಸ್ ಮ್ಯಾನೇಜ್‌ಮೆಂಟ್‌ ಸೊಲ್ಯೂಷನ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್, ಶ್ರೀ ಬಾಲಾಜಿ ಷುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಏರ್ ಇಂಡಿಯಾ ಲಿಮಿಟೆಡ್‌ನ ಒಟ್ಟು ₹ 8220.05 ಕೋಟಿ ಮೊತ್ತದ ಬಂಡವಾಳ ಹೂಡಿಕೆಗಳಿಗೆ ಸಮಿತಿಯು ಒಪ್ಪಿಗೆ ನೀಡಿದೆ. ಈ ಹೊಸ ಯೋಜನೆಗಳಿಂದ ರಾಜ್ಯದಲ್ಲಿ ಒಟ್ಟು 27,067
ಹೊಸ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ.

ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು : ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಕಂಪನಿಗಳ ಸಾಮರ್ಥ್ಯ ವಿಸ್ತರಣೆ ಉದ್ದೇಶದ ಹೆಚ್ಚುವರಿ ಹೂಡಿಕೆಯ 8 ಪ್ರಸ್ತಾವನೆಗಳಿಗೂ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಬಂಡವಾಳ ಹೂಡಿಕೆ ಹೆಚ್ಚಳದ ಪ್ರಸ್ತಾವನೆಗಳಲ್ಲಿ - ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್, ಆರ್‌ಬಿಎಸ್‌ಎಸ್‌ಎನ್‌ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್, ಎಂವಿ ಎನರ್ಜಿ ಪ್ರೈವೇಟ್ ಲಿಮಿಟೆಡ್ (ಈ ಹಿಂದಿನ ಎಂವೆ ಫೋಟೊ ವೋಲ್ಟಾಯಿಕ್ ಪವರ್ ಪ್ರೈವೇಟ್ ಲಿಮಿಟೆಡ್), ಇಂಡಿಯನ್ ಕೇನ್ ಪವರ್ ಲಿಮಿಟೆಡ್ (ಅಳಗವಾಡಿ ಬೀರೇಶ್ವರ ಷುಗರ್ಸ್ ಘಟಕ ), ಗ್ರೀನ್ಕೊ ಕೆಎ01 ಐಆರ್‍ಇಪಿ ಪ್ರೈವೇಟ್ ಲಿಮಿಟೆಡ್ (ಈ ಹಿಂದಿನ ಗ್ರೀನ್ಕೊ ಸೋಲಾರ್ ಎನರ್ಜಿ ಪ್ರೈವೇಟ್ ಲಿಮಿಟೆಡ್), ಅಥಣಿ ಷುಗರ್ಸ್ ಲಿಮಿಟೆಡ್, ಉಕೆಮ್ ಅಗ್ರಿ ಇನ್‌ಫ್ರಾ ಲಿಮಿಟೆಡ್ ಮತ್ತು ಸ್ನೈಡರ್ ಎಲೆಕ್ಟ್ರಿಕ್ ಐಟಿ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸೇರಿವೆ. ಇವುಗಳ ಹೆಚ್ಚುವರಿ ಹೂಡಿಕೆಯ ಮೊತ್ತವು ₹ 9,615.85 ಕೋಟಿಗಳಷ್ಟಿದೆ.

ಅಭಿವೃದ್ಧಿ ಆಯುಕ್ತೆ ಶ್ರೀಮತಿ ಡಾ.ಶಾಲಿನಿ ರಜನೀಶ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತ ಗುಂಜನ್ ಕೃಷ್ಣ ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಹೊಸ ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳ ವಿವರ
ಕ್ರಮ ಸಂಖ್ಯೆ ಕಂಪನಿ ಹೆಸರು ವಿವರ ಹೂಡಿಕೆ
(₹ ಕೋಟಿಗಳಲ್ಲಿ) ಉದ್ಯೋಗ ಅವಕಾಶಗಳು
1. ಎಸ್‍ಟಿಟಿ ಗ್ಲೋಬಲ್ ಡೇಟಾ ಸೆಂಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆ- ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಡೇಟಾ ಸೆಂಟರ್‌ 1352.3 250
2. ವಿಸ್ಟ್ರಾನ್ ಇನ್ಫೊಕಾಂ ಮ್ಯಾನುಫ್ಯಾಕ್ಚರಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕೋಲಾರ ಜಿಲ್ಲೆ- ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಸ್ಮಾರ್ಟ್‌ಫೋನ್‌ ತಯಾರಿಕಾ ಘಟಕ 2095 21723

3. ಇಂಡಿಯನ್ ಕೇನ್ ಪವರ್ ಲಿಮಿಟೆಡ್ ವಿಜಯಪುರ ಜಿಲ್ಲೆ- ಕಂಬಾಗಿ ಹಾಗೂ ಶೇಗುಣಶಿ ಗ್ರಾಮಗಳ ವ್ಯಾಪ್ತಿಯಲ್ಲಿ ಸಕ್ಕರೆ ಕಾರ್ಖಾನೆ 1078 309

4. ಐ.ಸಿ.ಟಿ ಸರ್ವಿಸ್ ಮ್ಯಾನೇಜ್‌ಮೆಂಟ್‌ ಸೊಲ್ಯೂಷನ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆ- ರಕ್ಷಣಾ ಹಾಗೂ ವೈಮಾಂತರಿಕ್ಷ ಪಾರ್ಕ್‌. ಲ್ಯಾಪ್‌ಟಾಪ್‌ ಹಾಗೂ ಎಲೆಕ್ಟ್ರಾನಿಕ್‌ ಉಪಕರಣಗಳ ತಯಾರಿಕಾ ಘಟಕ 1450 2500
5. ಶ್ರೀ ಬಾಲಾಜಿ ಷುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಯರಗಲ್‌. ಸಕ್ಕರೆ ಕಾರ್ಖಾನೆಯ ಸಾಮರ್ಥ್ಯ ವೃದ್ಧಿ 494.75 1085
6. ಏರ್ ಇಂಡಿಯಾ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆ- ವಿಮಾನಗಳ ನಿರ್ವಹಣೆ ಹಾಗೂ ದುರಸ್ತಿ ಘಟಕ 1750 1200

ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು

ಕ್ರಮ ಸಂಖ್ಯೆ ಕಂಪನಿ ಹೆಸರು ಸ್ಥಳ ಹೂಡಿಕೆ
(₹ ಕೋಟಿ )
1. ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್
ಕಲಬುರಗಿ ಜಿಲ್ಲೆಯಲ್ಲಿ ಗಣಿಗಾರಿಕೆ 490.38

2. ಆರ್‌ಬಿಎಸ್‌ಎಸ್‌ಎನ್‌ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್.
ಬಳ್ಳಾರಿ ಜಿಲ್ಲೆಯಲ್ಲಿ 130 ಮೆಗಾವಾಟ್‌ ವಿದ್ಯುತ್‌ ಘಟಕ 1620.80
3. ಎಂವಿ ಎನರ್ಜಿ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸೌರಫಲಕಗಳ ತಯಾರಿಕಾ ಘಟಕ 676.28

4. ಇಂಡಿಯನ್ ಕೇನ್ ಪವರ್ ಲಿಮಿಟೆಡ್ ಬೆಳಗಾವಿ ಜಿಲ್ಲೆ. ಅಳಗವಾಡಿ ಬೀರೇಶ್ವರ ಷುಗರ್ಸ್ ಸಕ್ಕರೆ ಕಾರ್ಖಾನೆಯ ಸಾಮರ್ಥ್ಯ ವೃದ್ಧಿ 492.29
5. ಗ್ರೀನ್ಕೊ ಕೆಎ01 ಐಆರ್‍ಇಪಿ ಪ್ರೈವೇಟ್ ಲಿಮಿಟೆಡ್ ಬೆಳಗಾವಿ ಜಿಲ್ಲೆ – ಜಲ ಸಂಗ್ರಹಾಗಾರದ (ಪಂಪ್ಡ್‌ ಸ್ಟೋರೇಜ್‌) ಸಾಮರ್ಥ್ಯ ವೃದ್ಧಿ 5948.06

6. ಅಥಣಿ ಷುಗರ್ಸ್ ಲಿಮಿಟೆಡ್ ಬೆಳಗಾವಿ ಜಿಲ್ಲೆ- ಡಿಸ್ಟಿಲರಿ ಘಟಕದ ವಿಸ್ತರಣೆ 205.89

7. ಉಕೆಮ್ ಅಗ್ರಿ ಇನ್ಫ್ರಾ ಲಿಮಿಟೆಡ್ ಕೊಪ್ಪಳ ಜಿಲ್ಲೆ- ಸಕ್ಕರೆ ಕಾರ್ಖಾನೆಯ ಸಾಮರ್ಥ್ಯ ಹೆಚ್ಚಳ 103.55

8. ಸ್ನೈಡರ್ ಇಲೆಕ್ಟ್ರಿಕ್ ಐಟಿ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ನಗರ ಜಿಲ್ಲೆ. ಎಲೆಕ್ಟ್ರಾನಿಕ್‌ ಪರಿಕರಗಳ ತಯಾರಿಕಾ ಘಟಕ 78.60

 

ಅನುಮೋದನೆ ಪಡೆದ ಒಟ್ಟಾರೆ ಹೂಡಿಕೆ ಹಾಗೂ ಉದ್ಯೋಗ ಅವಕಾಶಗಳ ವಿವರ

ಕ್ರಮ ಸಂಖ್ಯೆ ಹೆಸರು ಯೋಜನೆಗಳ ಸಂಖ್ಯೆ ಹೂಡಿಕೆ(₹ ಕೋಟಿ) ಉದ್ಯೋಗ
1. ಹೊಸ / ವಿಸ್ತರಣಾ ಯೋಜನೆಗಳು 6 8220.05 27,067
2. ಹೆಚ್ಚುವರಿ ಬಂಡವಳ ಹೂಡಿಕೆಯ ಯೋಜನೆಗಳು (ತಿದ್ದುಪಡಿ) 8 9615.85
ಒಟ್ಟು 14 17835.92 27,067

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಕಲಗಿ ಪಟ್ಟಣದಲ್ಲಿ ವಿಜಯ ದಶಮಿ ನಿಮಿತ್ತ ಶ್ರೀ ಮಹಾಲಕ್ಷ್ಮೀ ದೇವಿ ಅಗ್ನಿ ಹಾಯುವ ಕಾರ್ಯಕ್ರಮ.ಮಾರ್ಕಂಡೇಯ ನದಿಯಲ್ಲಿ  ಮರ್ಡರ್..?ಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerನೀಲಿ ಡ್ರಮ್ ಕೊಲೆ ಪ್ರಕರಣ : ಪತ್ನಿ ಮುಸ್ಕಾನ್‌, ಪ್ರಿಯಕರ ಸಾಹಿಲ್‌ಗೆ ಮರಣದಂಡನೆ ಶಿಕ್ಷೆRCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರು