Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಉತ್ತರ ಕರ್ನಾಟಕದಲ್ಲಿ ರೂ 9,461 ಕೋಟಿ ಮೊತ್ತದ ಬಂಡವಾಳ ಹೂಡಿಕೆ

 

 

ಬೆಳಗಾವಿ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಒಟ್ಟು ₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು. ಇದರಿಂದ 13,308 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ.

ಹೆಚ್ಚುವರಿ ರೂ 13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್‌ಕಾನ್‌ನ ಪ್ರಸ್ತಾವನೆಯನ್ನು ಸಮಿತಿಯು ಅನುಮೋದಿಸಿದೆ.

ಫಾಕ್ಸ್‌ಕಾನ್‌, ಈಗಾಗಲೇ ರಾಜ್ಯದಲ್ಲಿ ರೂ 8,000 ಕೋಟಿ ಬಂಡವಾಳ ಹೂಡಿಕೆ ಮಾಡಲು ಅನುಮೋದನೆ ಪಡೆದಿದೆ. ಜೆಎಸ್‌ಡಬ್ಲ್ಯು ರಿನ್ಯೂ ಎನರ್ಜಿ ಫೋರ್ ಲಿಮಿಟೆಡ್ (ರೂ 4,960 ಕೋಟಿ ), ಜೆಎಸ್‌ಡಬ್ಲ್ಯು ಸ್ಟೀಲ್ ಲಿಮಿಟೆಡ್ (ರೂ 3,804 ಕೋಟಿ ), ಟೊಯೊಟಾ ಕಿರ್ಲೋಸ್ಕರ್ ಮೋಟರ್ ಪ್ರೈವೇಟ್ ಲಿಮಿಟೆಡ್ (ರೂ 3237.30 ಕೋಟಿ ), ಟಿಆರ್‌ಐಎಲ್‌ ಬೆಂಗಳೂರು ರಿಯಲ್ ಎಸ್ಟೇಟ್ ಸಿಕ್ಸ್ ಲಿಮಿಟೆಡ್ (ರೂ 3273 ಕೋಟಿ ಹೂಡಿಕೆ), ಜಾನಕಿ ಕಾರ್ಪ್‌ ಲಿಮಿಟೆಡ್‌ (ರೂ 607 ಕೋಟಿ ಮೊತ್ತದ ಹೆಚ್ಚುವರಿ ಹೂಡಿಕೆ) ಪ್ರಸ್ತಾವನೆಗಳು ’ಎಸ್‌ಎಚ್‌ಎಲ್‌ಸಿಸಿ’ ಅನುಮೋದನೆ ಪಡೆದಿರುವ ದೊಡ್ಡ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಲ್ಲಿ ಸೇರಿವೆ.

“ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದ ಒಟ್ಟು ರೂ 9,461 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ. ಇವುಗಳಿಂದ ಈ ಪ್ರದೇಶದಲ್ಲಿ 3538 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಸರ್ಕಾರದ ಕಡೆಯಿಂದ ನಡೆಯುತ್ತಿರುವ ಇಂತಹ ಸಂಘಟಿತ ಪ್ರಯತ್ನಗಳು ’ಬೆಂಗಳೂರಿನ ಆಚೆ’ ಉಪಕ್ರಮದ ಭಾಗವಾಗಿವೆ”.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ , ಸಚಿವರಾದ ಚೆಲುವರಾಯಸ್ವಾಮಿ, ಪ್ರಿಯಾಂಕ್‌ ಖರ್ಗೆ, ನಾಗೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಡಾ. ಶಾಲಿನಿ ರಜನೀಶ್‌, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ