Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತಿರುಪತಿ ಲಾಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣ: ನಾಲ್ವರ ಬಂಧನ

 

ಹೈದರಾಬಾದ್‌: ತಿರುಪತಿ ಲಾಡು ತಯಾರಿಸಲು ಪ್ರಾಣಿಗಳ ಕೊಬ್ಬಿನಾಂಶ ಬಳಕೆ ಮಾಡಿದ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದೆ ಎಂದು ವರದಿಯಾಗಿದೆ.

ಬಂಧಿತರನ್ನು ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕರಾದ (ರೂರ್ಕಿ, ಉತ್ತರಾಖಂಡ), ಬಿಪಿನ್ ಜೈನ್, ಪೊಮಿಲ್ ಜೈನ್, ವೈಷ್ಣವಿ ಡೈರಿ (ಪೂನಂಬಾಕ್ಕಂ) ಸಿಇಒ ಅಪೂರ್ವ ವಿನಯ್ ಕಾಂತ್ ಚಾವ್ಹಾ ಮತ್ತು ಎಆರ್ ಡೈರಿಯ (ದುಂಡಿಗಲ್) ವ್ಯವಸ್ಥಾಪಕ ನಿರ್ದೇಶಕ ರಾಜು ರಾಜಶೇಖರನ್ ಎಂದು ಗುರುತಿಸಲಾಗಿದೆ.

ತುಪ್ಪ ಪೂರೈಕೆಗೆ ವೈಷ್ಣವಿ ಡೈರಿಯ ಪ್ರತಿನಿಧಿಗಳು ಎಆ‌ರ್ ಡೈರಿ ಹೆಸರಿನಲ್ಲಿ ಟೆಂಡ‌ರ್ ಪಡೆದಿದ್ದಾರೆ. ವೈಷ್ಣವಿ ಡೈರಿಯು ಎಆರ್ ಡೈರಿ ಹೆಸರನ್ನು ಬಳಸಿಕೊಂಡು ಟೆಂಡ‌ರ್ ಪ್ರಕ್ರಿಯೆಯಲ್ಲಿ ನಕಲಿ ದಾಖಲೆಗಳನ್ನು ಮತ್ತು ಸೀಲುಗಳನ್ನು ಬಳಸಿದೆ. ಜತೆಗೆ, ಉತ್ತರಾಖಂಡ ರೂರ್ಕಿಯ ಭೋಲೆ ಬಾಬಾ ಡೈರಿಯಿಂದ ತುಪ್ಪವನ್ನು ಪಡೆಯುವುದಾಗಿ ವೈಷ್ಣವಿ ಡೈರಿ ನಕಲಿ ದಾಖಲೆಗಳನ್ನು ಸೃಷ್ಟಿಸಿದೆ ಎಂದು ಸಿಬಿಐ ತಿಳಿಸಿದೆ.

ಭೋಲೆ ಬಾಬಾ ಡೈರಿಗೆ ಇಷ್ಟೊಂದು ಪ್ರಮಾಣದ ತುಪ್ಪವನ್ನು ಪೂರೈಸುವ ಸಾಮರ್ಥ್ಯ ಇಲ್ಲ. ಹಾಗಾಗಿ ತುಪ್ಪ ಪೂರೈಕೆಯಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿರುವುದರಿಂದ ಮೂರು ಡೈರಿಗಳ ನಾಲ್ವರನ್ನು ಬಂಧಿಸಲಾಗಿದೆ ಎಂದು ಸಿಬಿಐ ತಂಡ ಮಾಹಿತಿ ನೀಡಿದೆ.

ಆಂಧ್ರಪ್ರದೇಶದಲ್ಲಿ ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿಯಲ್ಲಿ ಲಾಡು ತಯಾರಿಸಲು ಪ್ರಾಣಿಗಳ ಕೊಬ್ಬಿನಾಂಶ ಬಳಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಗರಣ ಬೆಳಕಿಗೆ ಬಂದಾಗ ದೇಶದಾದ್ಯಂತ ಸಂಚಲನಕ್ಕೆ ಕಾರಣವಾಗಿತ್ತು.

ಪ್ರಕರಣ ಸಂಬಂಧ ತನಿಖೆ ನಡೆಸಲು ಸುಪ್ರೀಂ ಕೋರ್ಟ್, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿತ್ತು.

ಬಂಧಿತ ಆರೋಪಿಗಳನ್ನು ತಿರುಪತಿ ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ತುಪ್ಪ ಪೂರೈಕೆಯ ಸಂದರ್ಭದಲ್ಲಿ ಗಂಭೀರ ಉಲ್ಲಂಘನೆಗಳು ಕಂಡುಬಂದಿದ್ದು, ಪ್ರತಿ ಹಂತದಲ್ಲೂ ಅಕ್ರಮ ನಡೆದಿರುವುದು ಸಿಬಿಐ ತನಿಖೆ ವೇಳೆ ದೃಢಪಟ್ಟಿದೆ ಎಂದು ಟಿಟಿಡಿ ಮೂಲಗಳು ತಿಳಿಸಿವೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ